Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಸ್ತೂರಿರಂಗನ್ ವರದಿಯ ಸಾಧಕ- ಬಾಧಕಗಳ...

ಕಸ್ತೂರಿರಂಗನ್ ವರದಿಯ ಸಾಧಕ- ಬಾಧಕಗಳ ಪರಿಶೀಲನೆಗೆ ಕ್ರಮ: ಉಡುಪಿ ಡಿಸಿ ಸ್ವರೂಪ ಟಿ.ಕೆ ಭರವಸೆ

ವಾರ್ತಾಭಾರತಿವಾರ್ತಾಭಾರತಿ31 Aug 2026 8:10 PM IST
share
ಕಸ್ತೂರಿರಂಗನ್ ವರದಿಯ ಸಾಧಕ- ಬಾಧಕಗಳ ಪರಿಶೀಲನೆಗೆ ಕ್ರಮ: ಉಡುಪಿ ಡಿಸಿ ಸ್ವರೂಪ ಟಿ.ಕೆ ಭರವಸೆ

ಉಡುಪಿ, ಆ.31: ಡಾ. ಕೆ. ಕಸ್ತೂರಿ ರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯ ತಂಡದ ವರದಿಯ ಆಧಾರದ ಮೇಲೆ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮಪ್ರದೇಶವೆಂದು ಘೋಷಿಸಿರುವ ಕರಡು ಅಧಿಸೂಚನೆಯಂತೆ ಅದರ ಸಾಧಕ ಬಾಧಕಗಳನ್ನು ಪರಿಶೀಲಿಸಿ, ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸರಕಾರಕ್ಕೆ ಪತ್ರ ಬರೆಯಲಾಗುವುದಾಗಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಬಾಧಿತ ಪ್ರದೇಶಗಳ ಜನತೆಗೆ ಭರವಸೆ ನೀಡಿದ್ದಾರೆ.

ಸೋಮವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಕಚೇರಿ ಸಭಾಂಗಣ ದಲ್ಲಿ ಪರಸರ ಸೂಕ್ಷ್ಮ ಪ್ರದೇಶಕ್ಕೆ (ಕಸ್ತೂರಿ ರಂಗನ್ ವರದಿ ಆಧಾರಿತ) ಸಂಬಂಧಿಸಿದಂತೆ ನಡೆದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಸರಕಾರದ ಅರಣ್ಯ ಕಾಯಿದೆಗಳು, ಅರಣ್ಯ ಇಲಾಖೆಯ ನೀತಿ ನಿಯಮ ಗಳಿಂದ ನಿರಂತರ ತೊಂದರೆಗೊಳಗಾಗು ತ್ತಿರುವ ಕಾಡಂಚಿನ ಭಾಗದ ಜನರು, ಕಸ್ತೂರಿ ರಂಗನ್ ವರದಿ ಜಾರಿಯಿಂದ ಇನ್ನಷ್ಟು ತೊಂದರೆಗೆ ಸಿಲುಕಲಿದ್ದಾರೆ ಎಂಬ ಭೀತಿ ಸಾರ್ವತ್ರಿಕವಾಗಿದ್ದು, ಈ ಭಾಗದ ಜನರ ಜೀವನ ಹಾಗೂ ಜೀವನೋಪಾಯಕ್ಕೆ ಇನ್ನಷ್ಟು ತೊಂದರೆ ಉಂಟಾಗುವ ಆತಂಕ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕುತ್ತು ಉಂಟಾಗುವ ಸಾಧ್ಯತೆ ಇದೆ ಎಂಬ ಗೊಂದಲಗಳಿವೆ.

ಆದರೆ, ಡಾ. ಕೆ. ಕಸ್ತೂರಿ ರಂಗನ್ ವರದಿಯ ಕರಡು ಪ್ರತಿಯಲ್ಲಿ ಕೋರೆ, ಕೈಗಾರಿಕೆ, ಬಹುಮಹಡಿ ಕಟ್ಟಡಗಳು, ಟೌನ್‌ಶಿಪ್, ಥರ್ಮಲ್ ಪವರ್ ಪ್ಲಾಂಟ್ ಹಾಗೂ ಏರಿಯಾ ಡೆವಲಪ್‌ಮೆಂಟ್ ಪ್ರೊಜೆಕ್ಟ್‌ಗಳಿಗೆ ನಿರ್ಬಂಧ ವಿರುವು ದಾಗಿ ತಿಳಿಸಿದ್ದು, ಪೂರ್ವಾಪರಗಳನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಬುಡಕಟ್ಟು ಜನಾಂಗಕ್ಕೆ ಅಭದ್ರತೆ: ಕೇಂದ್ರ ಸರಕಾರ ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ, ಸೂಕ್ಷ್ಮ ಪ್ರದೇಶ ವೆಂದು ಘೋಷಿಸಲು ಈಗಾಗಲೇ 7 ಬಾರಿ ಅಧಿಸೂಚನೆಯನ್ನು ಹೊರಡಿಸಿದೆ. ಇದರಿಂದ ಕಾಡಿನಲ್ಲಿ ವಾಸಿಸುವ ಮಲೆಕುಡಿಯ, ಕೊರಗ ಸೇರಿದಂತೆ ವಿವಿಧ ಬುಡಕಟ್ಟು ಜನಾಂಗದ ಅನೇಕ ಕುಟುಂಬಗಳನ್ನು ಆತಂಕಕ್ಕೆ ಈಡು ಮಾಡಿದೆ. ಅನೇಕ ವರ್ಷಗಳಿಂದ ಪ್ರಕೃತಿಯೊಂದಿಗೆ ಸಮತೋಲಿತ ಜೀವನ ಶೈಲಿ ಅಳವಡಿಸಿಕೊಂಡು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಗೌರವಿಸುತ್ತಲೇ ಇವರು ಬದುಕುತ್ತಿದ್ದಾರೆ. ಈ ಅನೋನ್ಯ ಭಾವ ಇಂದಿಗೂ ಪಶ್ಚಿಮ ಘಟ್ಟಗಳಲ್ಲಿ ಕಂಡು ಬರುತ್ತಿವೆ. ಪರಿಸರ ಸಂರಕ್ಷಣೆಯೂ ನಮ್ಮ ಆದ್ಯತೆಯಾಗಬೇಕು. ಈ ಎಲ್ಲಾ ವಿಷಯಗಳ ಬಗ್ಗೆ ಗಮನ ಹರಿಸಲಾಗುವುದು ಎಂದರು.

ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜನಾಥ ಪೂಜಾರಿ ಮುದ್ರಾಡಿ ಮಾತನಾಡಿ, ಸರಕಾರಗಳು ಜಾರಿಗೆ ತರುವ ನೀತಿ ನಿಯಮಗಳು ಹಾಗೂ ಕಾನೂನುಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಅಧಿಕಾರಿಗಳ ಮೇಲೆ ಇರುತ್ತದೆ. ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕಸ್ತೂರಿ ರಂಗನ್ ವರದಿಯಿಂದ ಕೃಷಿ, ಪರಿಸರ, ಸಾರ್ವಜನಿಕರ ದೈನಂದಿನ ಬದುಕಿನ ಮೇಲೆ ಆಗಬಹುದಾದ ಪರಿಣಾಮಗಳ ಕುರಿತು ಸಮಗ್ರವಾಗಿ ವಿಶ್ಲೇಷಿಸುವ ಅಗತ್ಯವಿದೆ ಎಂದರು.

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಮಾತನಾಡಿ, ಯಾವುದೇ ಜನಪರ ಕಾಯಿದೆಗಳು ಜಾರಿಗೆ ಬಂದಾಗ ಅದು ಜನರ ಒಳಿತಿಗೆ ಅನುಗುಣವಾಗಿ ಇರಬೇಕು. ಸೂಕ್ಷ್ಮತೆಯನ್ನು ಅರಿತು ಪರಿಸರವನ್ನು ಕಾಪಾಡಿದಲ್ಲಿ ಮಾತ್ರ ಮನುಕುಲ ಉಳಿಯಲು ಸಾಧ್ಯ. ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಗೆ ಸರ್ವೇ ನಂಬರ್‌ಗಳನ್ನು ಅಳವಡಿಸಿ ದಲ್ಲಿ ಪರಿಸರ ರಕ್ಷಣೆ ಮಾಡಬಹುದು. ಎಲ್ಲಾ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಜನಾಂಗ ಬದು ಕಲು ಅನುಕೂಲ ಮಾಡಿಕೊಡಬೇಕು ಎಂದರು.

ಸರಕಾರದ ಗಮನಕ್ಕೆ ತನ್ನಿ: ಕಾರ್ಕಳ ಶಾಸಕ ಸುನಿಲ್‌ಕುಮಾರ್ ಮಾತನಾಡಿ, ಡಾ. ಕೆ. ಕಸ್ತೂರಿ ರಂಗನ್ ಕರಡು ಅಧಿಸೂಚನೆಯನ್ನು ನಾವು ವಿರೋಧಿಸುತ್ತೇವೆ. ಪ್ರತಿರೋಧವನ್ನು ಸರಕಾರದ ಗಮನಕ್ಕೆ ತರಬೇಕು. ಪರಿಸರ ಸೂಕ್ಷ್ಮ ವಲಯವು ವಸತಿ ಪ್ರದೇಶದಿಂದ ಹೊರಗಿರಬೇಕು. ಜಿಲ್ಲೆಯ 35 ಗ್ರಾಮಗಳ ಜನರ ಬದುಕಿಗೆ ತೊಂದರೆ ಯಾಗದ ರೀತಿಯಲ್ಲಿ ಸರಿಯಾದ ಭೌತಿಕ ಸರ್ವೇ ಮಾಡಿ, ವರದಿಯನ್ನು ಕಳುಹಿಸುವಂತೆ ತಿಳಿಸಿದರು.

ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಮಾತನಾಡಿ, ಯಾವುದೇ ವರದಿಯನ್ನು ಜಾರಿಗೆ ತರುವ ಮುನ್ನ ಜನರಿಗೆ ಆಗುವ ತೊಂದರೆ ಗಳು, ಅನುಕೂಲಗಳು ಹಾಗೂ ಸಿಗುವ ಸೌಲಭ್ಯಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲಿ ಸಬೇಕು. ಕಸ್ತೂರಿ ರಂಗನ್ ವರದಿಯ ಜಾರಿಗೆ ಮುಂದಾಗಿರುವುದ ರಿಂದ ಕಾಡಂಚಿನ ಜನರಿಗಾಗುವ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಅಥವಾ ವರದಿ ಜಾರಿ ಮಾಡಲು ಸೂಚಿಸಿರುವ ಸರ್ವೋಚ್ಛ ನ್ಯಾಯಾಲಯದ ಗಮನಕ್ಕೆ ತರಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಈ ಕಾರ್ಯವನ್ನು ತಪ್ಪದೇ ಮಾಡಬೇಕು ಎಂದರು.

ಸಭೆಯಲ್ಲಿ ಡಿಎಫ್‌ಓ ರುಥ್ರೇನ್ ಪಿ, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್ಪಿ ಸುಧಾಕರ್ ನಾಯಕ್, ಸಹಾಯಕ ಕಮಿಷನರ್ ರಶ್ಮಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ವ್ಯಾಪ್ತಿಯ ನಿಖರ ಮಾಹಿತಿಗಳನ್ನು ಜನತೆಗೆ ನೀಡಿ

ಸರಕಾರಗಳು ಜಾರಿಗೆ ತರುವ ಕೆಲವು ಕಾನೂನುಗಳು ಜನಸಾಮಾನ್ಯರ ಮೇಲೆ ದುಷ್ಪರಿಣಾಮಗಳನ್ನು ಉಂಟು ಮಾಡುತ್ತವೆ. ಇವುಗಳನ್ನು ಜಾರಿಗೆ ತರುವ ಮುನ್ನ ಜನರ ಆಕ್ಷೇಪಣೆಗಳ ಬಗ್ಗೆಯೂ ಆಲಿಸಿ, ಅವುಗಳನ್ನು ಪರಾಮ ರ್ಶಿಸಿ, ಜಾರಿಗೆ ತರಬೇಕು ಎಂದು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಸಲಹೆ ನೀಡಿದರು.

ಇಕೋ-ಸೆನ್ಸಿಟಿವ್ ಝೋನ್‌ನ ವ್ಯಾಪ್ತಿಯ ಪ್ರದೇಶವು ಯಾವ-ಯಾವ ಗ್ರಾಮಗಳಲ್ಲಿ, ಯಾವ ಯಾವ ಸರ್ವೇ ನಂಬರ್‌ ಗಳನ್ನು ಒಳಗೊಂಡಿವೆ ಎಂಬುದರ ಬಗ್ಗೆ ನಿಖರ ಮಾಹಿತಿಯನ್ನು ಜನರಿಗೆ ತಿಳಿಸಬೇಕು. ಈ ನಿಟ್ಟಿನಲ್ಲಿ ಕಂದಾಯ ಹಾಗೂ ಅರಣ್ಯ ಇಲಾಖೆಯು ಜಂಟಿ ಸರ್ವೆ ಮಾಡಿ, ಇದರ ಗಡಿಯನ್ನು ಗುರುತಿಸಬೇಕಿದೆ. ಪ್ರತೀ ಗ್ರಾಮಮಟ್ಟದಲ್ಲಿ ಈ ಕರಡು ವರದಿಯ ಬಗ್ಗೆ ಚರ್ಚಿಸಿ ವರದಿ ನೀಡುವುದು ಒಳಿತು ಎಂದು ಕೊಡ್ಗಿ ತಿಳಿಸಿದರು

ವರದಿ ವ್ಯಾಪ್ತಿಯಲ್ಲಿ ಜಿಲ್ಲೆಯ 35 ಗ್ರಾಮಗಳು

ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಯಲ್ಲಿ ತಿಳಿಸಿರುವಂತೆ ಕಾರ್ಕಳದ 13 ಹಾಗೂ ಕುಂದಾಪುರದ 22 ಸೇರಿದಂತೆ ಒಟ್ಟು 35 ಹಳ್ಳಿಗಳು ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಗೆ ಒಳಪಡಲಿವೆ. ಪರಿಸರ ಸೂಕ್ಷ್ಮ ಪ್ರದೇಶದ ಮಧ್ಯ ಭಾಗದಲ್ಲಿಯೂ ವಸತಿ ಪ್ರದೇಶವಿರುವುದರಿಂದ ಕೂಲಂಕಷವಾಗಿ ಪರಿಶೀಲಿಸಬೇಕಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದರು.

ಕಸ್ತೂರಿ ರಂಗನ್ ವರದಿ ವ್ಯಾಪ್ತಿಗೆ ಬರುವ ಉಡುಪಿ ಜಿಲ್ಲೆಯ ಗ್ರಾಮಗಳು

ಕಾರ್ಕಳ: ಅಂಡಾರು, ಬೆಳಂಜೆ, ಚಾರ, ದುರ್ಗಾ, ಹೆಬ್ರಿ, ಈದು, ಕಬ್ಬಿನಾಲೆ, ಕೆರ್ವಾಸೆ, ಕುಚ್ಚೂರು, ಮಾಳ, ನಾಡ್ಪಾಲು, ನೂರಾಲ್‌ಬೆಟ್ಟು, ಶಿರ್ಲಾಲು.

ಕುಂದಾಪುರ: ಆಲೂರು, ಅಮಾಸೆಬೈಲು, ಬೆಳ್ವೆ, ಬೆಳಾಲ, ಬೈಂದೂರು, ಚಿತ್ತೂರು, ಗೋಳಿಹೊಳೆ, ಹಳ್ಳಿಹೊಳೆ, ಹೊಸಂಗಡಿ, ಹೊಸೂರು, ಇಡೂರು ಕುಂಞಡಿ, ಜಡ್ಕಲ್, ಕೆರಾಡಿ, ಕೊಲ್ಲೂರು, ಮಚ್ಚಟ್ಟು, ಮಡಾಮಕ್ಕಿ, ಮುದೂರು, ಶೇಡಿಮನೆ, ತೆಗ್ಗರ್ಸೆ, ವಂಡ್ಸೆ, ಯಡಮೊಗೆ, ಯೆಳಜಿತ್.










Tags

ActionreviewKasturiranganreportUdupi DC Swaroop TK
share
ವಾರ್ತಾಭಾರತಿ
ವಾರ್ತಾಭಾರತಿ
Next Story
X