ಸಿದ್ದಾಪುರ ಏತ ನೀರಾವರಿ ಯೋಜನೆ ತಜ್ಞರ ಸಮಿತಿ ವರದಿಯಂತೆ ಕ್ರಮ: ಸಚಿವೆ ಹೆಬ್ಬಾಳ್ಕರ್

ಉಡುಪಿ, ಜ.25: ಸಿದ್ದಾಪುರ ಏತ ನೀರಾವರಿ ಯೋಜನೆಗೆ ಸಂಬಂಧಿಸಿ ದಂತೆ ಈಗಾಗಲೇ ರಾಜ್ಯ ಸರಕಾರದಿಂದ ತಜ್ಞರ ಸಮಿತಿಯ ಅಭಿಪ್ರಾಯ ಪಡೆಯಲು ಸೂಚಿಸಲಾಗಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ತಜ್ಞರ ಸಮಿತಿಯ ವರದಿಯ ಆಧಾರದ ಮೇಲೆ ಸಾಧಕ ಭಾದಕಗಳ ಕುರಿತು ಗಮನ ಹರಿಸಿ, ಯಾವುದೇ ರೈತರಿಗೆ ಅನ್ಯಾಯವಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ತಜ್ಞರ ತಂಡ ವರದಿ ನೀಡುವ ತನಕ ಕಾಮಗಾರಿಯನ್ನು ಸ್ಥಗಿತಗೊಳಿಸಲು ಕರ್ನಾಟಕ ನೀರಾವರಿ ನಿಗಮದಿಂದ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Next Story





