ಉಡುಪಿ, ನ.16: ಜಿಲ್ಲಾ ಉಸ್ತುವಾರಿ ಸಚಿವರಾದ ರಿಝ್ವಾನ್ ಅರ್ಷದ್ ಅಧ್ಯಕ್ಷತೆಯಲ್ಲಿ ನ.17ರ ಮಂಗಳವಾರ ಕಾರ್ಕಳದ ಮಂಜುನಾಥ ಪೈ ಸಭಾಂಗಣದಲ್ಲಿ ನಡೆಯಲು ನಿಗದಿಯಾಗಿದ್ದ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.