ಎಡಿಪಿಜಿ ಮುರುಗನ್ ಉಡುಪಿ ಜಿಲ್ಲಾ ಪೊಲೀಸ್ ಕಚೇರಿ ಭೇಟಿ

ಉಡುಪಿ: ಸಂವಹನ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಪಿಜಿ) ಎಸ್.ಮುರುಗನ್ ಉಡುಪಿ ಜಿಲ್ಲಾ ಪೊಲೀಸ್ ಪರಿವೀಕ್ಷಣೆ ಸಂಬಂಧ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿದರು.
ಎಸ್.ಮುರುಗನ್ ಪರಿವೀಕ್ಷಣೆ ನಡೆಸಿ ಜಿಲ್ಲೆಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ, ಉತ್ತಮ ಕರ್ತವ್ಯ ನಿರ್ವಹಿಸುವ ಕುರಿತು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್, ಸಹಾಯಕ ಪೊಲೀಸ್ ಅಧೀಕ್ಷಕಿ ಹರ್ಷ ಪ್ರಿಯಂವದ, ಡಿವೈಎಸ್ಪಿಗಳಾದ ಪ್ರಭು ಡಿ.ಟಿ., ಎಚ್.ಡಿ.ಕುಲಕರ್ಣಿ ಉಪಸ್ಥಿತರಿದ್ದಗರು.
Next Story





