Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೃಷಿ ಸ್ವಾವಲಂಬನೆಯ ಪ್ರತೀಕ :...

ಕೃಷಿ ಸ್ವಾವಲಂಬನೆಯ ಪ್ರತೀಕ : ಡಾ.ರಾಮಕೃಷ್ಣ ಆಚಾರ್

ವಾರ್ತಾಭಾರತಿವಾರ್ತಾಭಾರತಿ1 May 2024 3:30 PM IST
share
ಕೃಷಿ ಸ್ವಾವಲಂಬನೆಯ ಪ್ರತೀಕ : ಡಾ.ರಾಮಕೃಷ್ಣ ಆಚಾರ್

ಕಾರ್ಕಳ: ಕೃಷಿ ಸ್ವಾವಲಂಬನೆಯ ಪ್ರತೀಕ. ಕೃಷಿ ಮೂಲಕ ಜೀವನ ನಡೆಸಲು ಸೂಕ್ತ ಅವಕಾಶ ಇದೆ. ಕೃಷಿ ಮನುಷ್ಯನ ಆರೋಗ್ಯ , ಆಯುಷ್ಯ, ಸಂಪತ್ತನ್ನು ವೃದ್ಧಿಸುತ್ತದೆ. ಕೃಷಿ ಮೂಲಕ ಮನುಷ್ಯ ತನ್ನ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಸಾಧ್ಯ ಎಂದು ಡಾ. ರಾಮಕೃಷ್ಣ ಆಚಾರ್ ತಿಳಿಸಿದರು.

ಮುನಿಯಾಲ್ ಗೋದಾಮದಲ್ಲಿ ವಿದ್ಯಾರ್ಥಿಗಳಿಗಾಗಿ ನಡೆದ ಕೃಷಿ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಕೃಷಿ ಯಾವತ್ತೂ ಬಡತನವಲ್ಲ. ಬಡತನವನ್ನು ಹೊಡೆದೋಡಿಸುವ ಸಾಧನ. ದೇಶದ ಬೆನ್ನೆಲುಬಾಗಿರುವ ಕೃಷಿಕ ಹಲವಾರು ಸಮಸ್ಯೆಗಳನ್ನು ಎದುರಿಸಲಿಕ್ಕೆ ಆದುನಿಕ ಕೃಷಿ ವಿಧಾನವೂ ಕಾರಣವೆನ್ನಬಹುದು. ಅತಿಯಾದ ರಾಸಾಯನಿಕ ಬಳಕೆ ಭೂಮಿಯ ಫಲವತ್ತತೆಯನ್ನು ಕಡಿಮೆಯಾಗಿಸುತ್ತಿದೆ. ಬೆಳೆಯುವ ಕೃಷಿ ಜೊತೆ ಜೊತೆಗೆ ಹೈನುಗಾರಿಕೆ, ಮೀನುಗಾರಿಕೆ, ಪಕ್ಷಿ ಸಾಕಣೆಗಳು ಕೃಷಿಕನ ಸಂಪತ್ತನ್ನು ವೃದ್ಧಿಸುತ್ತದೆ ಎಂದರು.

ಅತಿ ಕಡಿಮೆ ಭೂಮಿಯಲ್ಲಿಯೂ ಕೂಡ ಅತೀ ಹೆಚ್ಚು ಹಣವನ್ನು ಸಂಪಾದಿಸಬಹುದು. ಮನೆಗಳ ತಾರಸಿ ಮೇಲೆ ಹೂವು ಹಣ್ಣು ತರಕಾರಿಗಳನ್ನು ಬೆಳೆಯುವ ಮೂಲಕ ಕುಟುಂಬದ ಅವಶ್ಯಕತೆ ಬೇಕಾಗುವ ಅಗತ್ಯ ವಸ್ತುಗಳನ್ನು ಅತೀ ಕಡಿಮೆ ಬೆಲೆಯಲ್ಲಿ ಮನೆಗಳಲ್ಲಿಯೇ ಬೆಳೆಯಬಹುದಾಗಿದೆ. ಈ ಮೂಲಕ 75 ಶೇಕಡಾ ಉಳಿತಾಯ ಮಾಡಬಹುದಾಗಿದೆ. ಹೈನುಗಾರಿಕೆ ಮೂಲಕ ಮನೆಬಳಕೆ ಬೇಕಾಗುವುದನ್ನು ಬಳಸಿಕೊಂಡು ಹಾಲು ಮಜ್ಜಿಗೆ ಬೆಣ್ಣೆ ತುಪ್ಪ ಮುಂತಾದ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ಅಧಿಕ ಲಾಭವನ್ನು ಗಳಿಸಬಹುದಾಗಿದೆ ಎಂದರು.

ವಿದ್ಯೆಯ ಜೊತೆಗೆ ಕೃಷಿ ಮನುಷ್ಯನ ಬೌದ್ಧಿಕ ಶಕ್ತಿಯನ್ನು ಕೂಡ ವಿಕಸನ ಗೊಳಿಸುತ್ತದೆ. ಬರಡು ಭೂಮಿಯಲ್ಲಿ ಗಿಡ ಮರಗಳನ್ನು ಬೆಳೆಸುವ ಮೂಲಕ ಅರಣ್ಯ ಸಂಪತ್ತನ್ನು ವೃದ್ಧಿಗೊಳಿಸ ಬಹುದಾಗಿದೆ. ಅರಣ್ಯದ ಜೊತೆಗೆ ತೋಟಗಾರಿಕಾ ಬೆಳೆಗಳನ್ನು ಕೂಡ ಬೆಳೆಸಬಹುದಾಗಿದೆ ಎಂದರು.

ಅತೀ ಕಡಿಮೆ ಭೂಮಿಯಲ್ಲಿ ಯಾವ ರೀತಿಯ ಕೃಷಿಗಳನ್ನು ಮಾಡಬಹುದೆಂದು ಅವರು ಮಾಹಿತಿ ನೀಡಿದರು. ಮಾತ್ರವಲ್ಲದೆ ಅತಿ ಕಡಿಮೆ ಭೂಮಿಯನ್ನು ಹೊಂದಿದರೂ ಮಾದರಿ ಕೃಷಿ ಮೂಲಕ ಇತರರಿಗೆ ಕೃಷಿ ಬಗ್ಗೆ ಮಾಹಿತಿ ನೀಡುವುದರ ಮೂಲಕವೂ ಅಪಾರ ಹಣ ಸಂಪಾದನೆ ಮಾಡಬಹುದಾಗಿದೆ. ವಿವಿಧ ಕೃಷಿಗಳ ಅಭಿವೃದ್ದಿಗೆ ಸರಕಾರದಿಂದ ವಿವಿಧ ಸವಲತ್ತುಗಳು ಹಾಗೂ ಸಬ್ಸಿಡಿ ದರದಲ್ಲಿ ಸಾಲ ಸೌಲಭ್ಯಗಳನ್ನು ಪಡೆಯಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಸವಿತಾ ಆರ್ ಅಚಾರ್, ರಕ್ಷತ್ ಅಚಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X