Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯಕ್ಷಗಾನ ಸಂಘಸಂಸ್ಥೆಗಳಿಗೆ ಅಕಾಡೆಮಿ...

ಯಕ್ಷಗಾನ ಸಂಘಸಂಸ್ಥೆಗಳಿಗೆ ಅಕಾಡೆಮಿ ವಿಶೇಷ ಪ್ರೋತ್ಸಾಹ: ಡಾ.ತಲ್ಲೂರು ಶಿವರಾಮ ಶೆಟ್ಟಿ

►ಅಜಪುರ ಕರ್ನಾಟಕ ಸಂಘದ 69ನೇ ವರ್ಷದ ನಾಡಹಬ್ಬ ►ಡಾ.ಮಹಾಬಲೇಶ್ವರ ರಾವ್, ಕೃಷ್ಣಸ್ವಾಮಿ ಜೋಯಿಸರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ22 Oct 2024 11:45 PM IST
share
ಯಕ್ಷಗಾನ ಸಂಘಸಂಸ್ಥೆಗಳಿಗೆ ಅಕಾಡೆಮಿ ವಿಶೇಷ ಪ್ರೋತ್ಸಾಹ: ಡಾ.ತಲ್ಲೂರು ಶಿವರಾಮ ಶೆಟ್ಟಿ

ಬ್ರಹ್ಮಾವರ: ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷನಾಗಿ ಯಕ್ಷಗಾನಕ್ಕೆ ಕೊಡುಗೆ ನೀಡುತ್ತಿರುವ ಸಂಘಸಂಸ್ಥೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಮಾಡುತ್ತಿದ್ದೇನೆ. ಪ್ರಮುಖವಾಗಿ ಮಕ್ಕಳಿಗೆ ಯಕ್ಷಗಾನವನ್ನು ಕಲಿಸುವ ಸಂಘಸಂಸ್ಥೆಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ಈ ಮೂಲಕ ಯಕ್ಷಗಾನ ಕಲೆಯ ಉಳಿವು ಬೆಳವಣಿಗೆ ನಿರಾಂತಕವಾಗಿ ನಡೆಯ ಬೇಕೆನ್ನುವುದೇ ಅಕಾಡೆಮಿಯ ಹೆಬ್ಬಯಕೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಾರೆ.

ಬ್ರಹ್ಮಾವರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಜಪುರ ಕರ್ನಾಟಕ ಸಂಘದ 69ನೇ ವರ್ಷದ ನಾಡಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾಧಕರನ್ನು ಸನ್ಮಾನಿಸಿ ಅವರು ಮಾತನಾಡುತಿದ್ದರು.

ಸಂಘ ಸಂಸ್ಥೆಗಳಿಗೆ 60 ವರ್ಷ ತುಂಬುತ್ತಿರುವುದು ಒಂದು ಮಹಾ ಸಾಧನೆ ಎನ್ನಬಹುದು. ಈ ನಿಟ್ಟಿನಲ್ಲಿ ಬ್ರಹ್ಮಾವರದ ಅಜಪುರ ಕರ್ನಾಟಕ ಸಂಘಕ್ಕೆ 69 ವರ್ಷ ತುಂಬುತ್ತಿರುವುದು ಹಾಗೂ ಅದಕ್ಕೆ ಕಾರಣೀಭೂತರಾದ ಸಂಸ್ಥೆಯ ಸರ್ವರೂ ಅಭಿನಂದನಾರ್ಹರು ಎಂದು ಅಜಪುರ ಕರ್ನಾಟಕ ಸಂಘದ ಅಧ್ಯಕ್ಷ ಎಚ್.ನಿತ್ಯಾನಂದ ಶೆಟ್ಟಿ ಮಾತನಾಡಿ, ಅಜಪುರ ಕರ್ನಾಟಕ ಸಂಘವನ್ನು ಬೆಳೆಸುವಲ್ಲಿ ಶ್ರಮಿಸಿದ ಹಂದೆ, ಸುಬ್ಬಣ್ಣ ಭಟ್, ಬಿ.ವಿ.ಆಚಾರ್ಯ ಮೊದಲಾದವರ ದೂರದೃಷ್ಟಿತ್ವದ ಫಲದಿಂದಲೇ ಸಂಘ 69 ವರ್ಷಗಳಿಗೆ ಪಾದಾರ್ಪಣೆ ಮಾಡುವಂತಾಗಿದೆ. ಸಾತ್ವಿಕ ಮನೋಭಾವದೊಂದಿಗೆ ಧನಾತ್ಮಕ ಚಿಂತನೆ ಬೆಳೆಸಿಕೊಂಡು ಈ ಸಂಘವನ್ನು ಹುಟ್ಟುಹಾಕಿದ್ದಾರೆ. ಮಾನವ ಉನ್ನತ ಆದರ್ಶಗಳನ್ನು ಬೆಳೆಸಿ ಕೊಂಡು ಬೆಳೆದರೆ ಆತನ ಬದುಕು ಸಾರ್ಥಕವೆನಿಸುತ್ತದೆ ಎಂದರು.

ಉದ್ಯಮಿ ಚೇತನ್ ಕುಮಾರ್ ಶೆಟ್ಟಿ ಮಾತನಾಡಿ, ಸಂಘ ಇಷ್ಟೊಂದು ಎತ್ತರಕ್ಕೆ ಬೆಳೆದಿರುವುದಕ್ಕೆ ಕಾರಣರಾದ ಪ್ರತೀ ಸದಸ್ಯರು ಅಭಿನಂದನಾರ್ಹರು. ಮುಂದಿನ ದಿನಗಳಲ್ಲಿ 90 ವರ್ಷ ತುಂಬಿದ ಸಮಾಜದ ಹಿರಿಯ ನಾಗರಿಕ ರನ್ನೂ ಗುರುತಿಸಿ ಅಭಿನಂದಿಸುವ ಕಾರ್ಯ ನಡೆಯಲಿ ಎಂದು ಹಾರೈಸಿದರು.

ಬಿಎಸ್‌ಎನ್‌ಎಲ್‌ನ ನಿವೃತ್ತ ಮಹಾ ಪ್ರಬಂಧಕ ಎಂ.ಚಂದ್ರಶೇಖರ ಕಲ್ಕೂರ ಅಜಪುರ ಕರ್ನಾಟಕ ಸಂಘ ನಡೆದು ಬಂದ ದಾರಿ ಹಾಗೂ ಸಾಧನೆಯನ್ನು ಪ್ರಸ್ತಾಪಿಸಿದರು.

ಕಾರ್ಯಕ್ರಮದಲ್ಲಿ ಖ್ಯಾತ ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ಅವರಿಗೆ ‘ಸುವರ್ಣ ನಿಧಿ’ ಸನ್ಮಾನದೊಂದಿಗೆ ಗೌರವಿಸಲಾಯಿತು. ಕೃಷ್ಣಸ್ವಾಮಿ ಜೋಯಿಸರಿಗೆ ‘ಅಜಪುರ ಯಕ್ಷ ಪುರಸ್ಕಾರ’ ಪ್ರದಾನ ಮಾಡಲಾಯಿತು.

ಸಭಾ ಕಾರ್ಯಕ್ರಮದ ಬಳಿಕ ಜಾಂಬವತಿ ಕಲ್ಯಾಣ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮ ಸಂಪನ್ನಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X