ಮೀಫ್ ಎಕ್ಸಲೆನ್ಸ್ ಅವಾರ್ಡ್ 2026: ಅಲ್-ಇಹ್ಸಾನ್ ವಿದ್ಯಾಸಂಸ್ಥೆಗೆ ಸಮಗ್ರ ಪ್ರಶಸ್ತಿ

ಕಾಪು, ಜೂ.22: ಮುಸ್ಲಿಮ್ ಎಜುಕೇಶನಲ್ ಇನ್ ಸ್ಟಿಟ್ಯೂಷನ್ಸ್ ಫೆಡರೇಶನ್ (ಮೀಫ್) ವತಿಯಿಂದ ನೀಡಲಾಗುವ ಶೈಕ್ಷಣಿಕ ವರ್ಷ 2025-26ರ ಸಮಗ್ರ ಪ್ರಶಸ್ತಿಯನ್ನು ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್(ಡಿಕೆಎಸ್ಸಿ) ಅಧೀನ ಸಂಸ್ಥೆಯಾದ ಮೂಳೂರಿನ ಅಲ್-ಇಹಾನ್ ವಿದ್ಯಾ ಸಂಸ್ಥೆ ಪಡೆದುಕೊಂಡಿದೆ.
ಇತ್ತೀಚೆಗೆ ಮಂಗಳೂರು ಇಂಡಿಯನ್ ಆಡಿಟೋರಿಯಂನಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶದೊಂದಿಗೆ ವಿದ್ಯಾರ್ಥಿನಿ ಶಿಫಾ ವಾಣಿಜ್ಯ ವಿಭಾಗದಲ್ಲಿ ಒಟ್ಟು 596 ಅಂಕ ಪಡೆದು ರಾಜ್ಯಕ್ಕೆ 4ನೇ ಸ್ಥಾನ ಪಡೆದಿದ್ದರು.ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶದೊಂದಿಗೆ ವಿದ್ಯಾರ್ಥಿನಿ ಇನ್ನಾ ಫಾತಿಮಾ ಒಟ್ಟು 619 ಅಂಕ ಪಡೆದು ರಾಜ್ಯಕ್ಕೆ 7ನೇ ಸ್ಥಾನ ಪಡೆದಿದ್ದರು.
ದ.ಕ.ಮತ್ತು ಉಡುಪಿ ಜಿಲ್ಲಾಮಟ್ಟದ ಪಥ ಸಂಚಲನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ದೈಹಿಕ ಶಿಕ್ಷಣ ಶಿಕ್ಷಕರಾದ ಬಶೀರ್ ಎಂ. ಮೀಫ್ ಅಧೀನದ ಶಾಲೆಗಳ ಉತ್ತಮ ದೈಹಿಕ ಶಿಕ್ಷಣ ಶಿಕ್ಷಕರಾಗಿ ಪ್ರಶಸ್ತಿಯನ್ನು ಪಡೆದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಎಂ.ಫಾರೂಕ್, ಬಿ.ಎಂ.ಶರೀಫ್ ಜೋಕಟ್ಟೆ, ಡಿಡಿಪಿಐ ಜಿ.ಎಸ್.ಶಶಿಧರ್, ಮೀಫ್ ಗೌರವಾಧ್ಯಕ್ಷ ಉಮರ್ ಟೀಕೆ, ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಜೋಕಟ್ಟೆ, ಪ್ರಧಾನ ಕಾರ್ಯದರ್ಶಿ ರಿಯಾಝ್, ಅಲ್-ಇಹ್ಸಾನ್ ವಿದ್ಯಾ ಸಂಸ್ಥೆಯ ಸದಸ್ಯರಾದ ಅನ್ವರ್ ಹುಸೇನ್ ಗೂಡಿನಬಳಿ, ಮುಹಮ್ಮದ್ ಇಕ್ಬಾಲ್, ಅಬ್ದುಲ್ ಅಝೀಝ್ ಬಜ್ಪೆ, ಪ್ರಾಂಶುಪಾಲ ಹಬೀಬ್ ರಹ್ಮಾನ್ ಕೆ.ಎಸ್., ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಆರಿಫಾ ಶಿರಿನ್ ಉಪಸ್ಥಿತರಿದ್ದರು.






