Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನಕಲಿ ದಾಖಲೆ ಸೃಷ್ಠಿಸಿ ಸಹಕಾರಿ...

ನಕಲಿ ದಾಖಲೆ ಸೃಷ್ಠಿಸಿ ಸಹಕಾರಿ ಬ್ಯಾಂಕಿನಿಂದ ವಂಚನೆ ಆರೋಪ: ಸಂತ್ರಸ್ತರಿಂದ ಬ್ರಹ್ಮಾವರ ಠಾಣೆಗೆ ದೂರು

ವಾರ್ತಾಭಾರತಿವಾರ್ತಾಭಾರತಿ9 Oct 2024 7:53 PM IST
share
ನಕಲಿ ದಾಖಲೆ ಸೃಷ್ಠಿಸಿ ಸಹಕಾರಿ ಬ್ಯಾಂಕಿನಿಂದ ವಂಚನೆ ಆರೋಪ: ಸಂತ್ರಸ್ತರಿಂದ ಬ್ರಹ್ಮಾವರ ಠಾಣೆಗೆ ದೂರು

ಉಡುಪಿ: ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾಲ ಪಡೆದು ಸ್ವಂತ ಬಳಕೆಗೆ ಉಪಯೋಗಿಸಿ ಲಕ್ಷಾಂತರ ರೂ. ವಂಚನೆ ಎಸಗಿ ಮೋಸ ಮಾಡಿರುವ ಮಲ್ಪೆ ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಅಧ್ಯಕ್ಷರು, ವ್ಯವಸ್ಥಾಪಕ ಹಾಗೂ ಸಿಬ್ಬಂದಿ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಹತ್ತು ಮಂದಿ ಸಂತ್ರಸ್ತರು ಬ್ರಹ್ಮಾವರ ಪೊಲೀಸ್ ಠಾಣೆಗೆ ಇಂದು ದೂರು ನೀಡಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಸಂತ್ರಸ್ತರಾದ ಕೊಳಲಗಿರಿ ಲಕ್ಷ್ಮೀನಗರದ ವಿಶ್ವನಾಥ ಹಾಗೂ ಸುಕೇಶ್ ಈ ಕುರಿತು ಮಾಹಿತಿ ನೀಡಿದರು.

ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಮಲ್ಪೆ ಶಾಖೆಯ ವ್ಯವಸ್ಥಾಪಕ ಸುಬ್ಬಣ್ಣ ಕೊರೋನಾ ಕಾಲದಲ್ಲಿ ಅಂದರೆ 2021ರ ಜೂನ್ ತಿಂಗಳಲ್ಲಿ ಮನೆಗೆ ಬಂದು, ಆಧಾರ್ ಹಾಗೂ ಪಾನ್ ಕಾರ್ಡ್ ಪಡೆದು, ಯಾವುದೇ ದಾಖಲೆಗಳಿಗೆ ಸಹಿ ಪಡೆಯದೆ 20,000ರೂ. ಸಾಲ ನೀಡಿದ್ದು, ತಿಂಗಳಿಗೆ 900ರೂ. ಬ್ಯಾಂಕಿಗೆ ಪಾವತಿಸುವಂತೆ ತಿಳಿಸಿದ್ದರು. ಇದೇ ಸಮಯದಲ್ಲಿ ಇವರು ದೀಪಕ್, ಮಿಥುನ್, ವಾರಿಜಾ, ರೆಹನಾ, ನಸೀಮ ಹಾಗೂ ಇತರ ಹಲವು ಮಂದಿಗೆ ಇದೇ ರೀತಿ ಸಾಲಕೊಟ್ಟಿದ್ದರು ಎಂದರು.

ನಂತರ ನಾವು ಸಾಲದ ಹಣವನ್ನು ತಿಂಗಳಿಗೆ ಸರಿಯಾಗಿ ಕಟ್ಟಿಕೊಂಡು ಬಂದಿದ್ದೆವು. ಬಳಿಕ ಬ್ಯಾಂಕಿನಿಂದ ನೋಟಿಸು ಬಂದಿದ್ದು, ಮಲ್ಪೆ ಬ್ಯಾಂಕಿಗೆ ಹೋಗಿ ಪರಿಶೀಲಿಸಿದಾಗ ನಮ್ಮ ಖಾತೆಯಿಂದ 2 ಲಕ್ಷ ರೂ. ಸಾಲ ಪಡೆದಿದ್ದು, ಕೂಡಲೆ ಪಾವತಿಸುವಂತೆ ಸಿಬ್ಬಂದಿ ತಿಳಿಸಿದ್ದರು. ಈ ಬಗ್ಗೆ ವ್ಯವಸ್ಥಾಪಕರು ಕೂಡ ಸರಿಯಾಗಿ ಉತ್ತರ ನೀಡಿಲ್ಲ. ಈ ಬಗ್ಗೆ ಅಧ್ಯಕ್ಷರಲ್ಲಿ ಈ ಮೋಸದ ಬಗ್ಗೆ ತಿಳಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ದೂರಿದರು.

ಈ ಮಧ್ಯೆ ಬ್ಯಾಂಕ್ ವ್ಯವಸ್ಥಾಪಕ ಸುಬ್ಬಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದು, ನಂತರ ಬ್ಯಾಂಕ್‌ನವರು ಪದೇ ಪದೇ ನೋಟೀಸ್ ನೀಡಿ ಸಾಲ ಮರುಪಾವತಿಸುವಂತೆ ಕಿರುಕುಳ ನೀಡುತ್ತಿದ್ದರು. ನಮ್ಮಿಂದ ಆಧಾರ್ ಹಾಗೂ ಪಾನ್ ಕಾರ್ಡ್ ಪಡೆದು ಕ್ರಿಮಿನಲ್ ಸಂಚು ರೂಪಿಸಿ ನಮ್ಮ ನಕಲಿ ಸಹಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ ನಮ್ಮ ಹೆಸರಿನಲ್ಲಿ ಸಾಲ ಪಡೆದು ಅದನ್ನು ಸ್ವಂತ ಬಳಕೆಗೆ ಉಪಯೋಗಿಸಿ ಮೋಸ ಮಾಡಲಾಗಿದೆ ಎಂದು ಅವರು ಆರೋಪಿಸಿದರು.

ನಾವು ಪಡೆದ 20 ಸಾವಿರ ರೂ. ಸಾಲದ ಹಣವನ್ನು ಬ್ಯಾಂಕಿಗೆ ವಾಪಾಸ್ಸು ನೀಡಲು ನಾವು ಸಿದ್ಧರಿದ್ದೇವೆ. ಈ ಪ್ರಕರಣ ದಿಂದ ನಮ್ಮ ಮಕ್ಕಳ ಶಿಕ್ಷಣ ಸಾಲ ಹಾಗೂ ಬ್ಯಾಂಕ್ ವ್ಯವಹಾರಗಳಲ್ಲಿ ನಮಗೆ ತುಂಬಾ ಸಮಸ್ಯೆ ಆಗುತ್ತಿದೆ ಎಂದು ಅವರು ದೂರಿದರು.

ಉನ್ನತ ಮಟ್ಟದ ತನಿಖೆಗೆ ಆಗ್ರಹ

ಈ ರೀತಿ ಸಾಲದ ಹೆಸರಿನಲ್ಲಿ 1413 ಮಂದಿಗೆ 28 ಕೋಟಿ ರೂ. ಹಣವನ್ನು ಮೋಸ ಮಾಡಲಾಗಿದೆ. ಈ ಮೋಸದ ಜಾಲದಲ್ಲಿರುವ ಎಲ್ಲರ ವಿರುದ್ಧವೂ ಕಾನೂನು ಕ್ರಮ ಜರಗಿಸಬೇಕು. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ವ್ಯವಸ್ಥಾಪಕರ ಆತ್ಮಹತ್ಯೆಗೆ ಕಾರಣರಾದವರನ್ನು ಉನ್ನತ ಮಟ್ಟದ ತನಿಖೆ ನಡೆಸಿ ಮೋಸ ಹೋದವರಿಗೆ ಹಾಗೂ ಮೃತ ವ್ಯವಸ್ಥಾಪಕರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ಕೋಟ ಆಗ್ರಹಿಸಿದ್ದಾರೆ.

‘ಬ್ಯಾಂಕಿನಿಂದ ಮೋಸ ಆಗಿರುವುದಾಗಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೆಲವರು ದೂರು ನೀಡಿದ್ದಾರೆ. ಈ ಕುರಿತು ಈಗಾಗಲೇ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದರಿಂದ ಈ ಎಲ್ಲ ದೂರನ್ನು ಮಲ್ಪೆಯಲ್ಲಿ ಆಗಿರುವ ಎಫ್‌ಐಆರ್‌ಗೆ ಸೇರಿಸಿಕೊಂಡು ತನಿಖೆ ನಡೆಸಲಾಗುವುದು’

-ಡಾ.ಕೆ.ಅರುಣ್, ಎಸ್ಪಿ ಉಡುಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X