Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿಶ್ವಕರ್ಮ ಸಮಾಜದ ಅವಹೇಳನ ಆರೋಪ:...

ವಿಶ್ವಕರ್ಮ ಸಮಾಜದ ಅವಹೇಳನ ಆರೋಪ: ವಿವಾದಿತ ಹೇಳಿಕೆಗೆ ಬಹಿರಂಗ ಕ್ಷಮೆ ಯಾಚಿಸಿದ ಸಾಹಿತಿ ಎ.ಎಸ್.ಎನ್. ಹೆಬ್ಬಾರ್

ವಾರ್ತಾಭಾರತಿವಾರ್ತಾಭಾರತಿ7 Oct 2026 9:57 AM IST
share
ವಿಶ್ವಕರ್ಮ ಸಮಾಜದ ಅವಹೇಳನ ಆರೋಪ: ವಿವಾದಿತ ಹೇಳಿಕೆಗೆ ಬಹಿರಂಗ ಕ್ಷಮೆ ಯಾಚಿಸಿದ ಸಾಹಿತಿ ಎ.ಎಸ್.ಎನ್. ಹೆಬ್ಬಾರ್

ಕೋಟ: ಬ್ರಹ್ಮಾವರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಕುಂದಗನ್ನಡ ಸಂವಾದದಲ್ಲಿ ವಿಶ್ವಕರ್ಮ ಸಮುದಾಯದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಸಾಹಿತಿ ಹಾಗೂ ಹಿರಿಯ ವಕೀಲ ಎ.ಎಸ್.ಎನ್. ಹೆಬ್ಬಾರ್ ವಿರುದ್ಧ ವಿಶ್ವಕರ್ಮ ಸಮಾಜದ ವತಿಯಿಂದ ಮಂಗಳವಾರ ಸಾಲಿಗ್ರಾಮದಲ್ಲಿ ಪ್ರತಿಭಟನೆ ನಡೆಯಿತು. ಬಳಿಕ ನಡೆದ ಸಭೆಯಲ್ಲಿ ಹೆಬ್ಬಾರ್ ತಮ್ಮ ಹೇಳಿಕೆಗೆ ಬಹಿರಂಗವಾಗಿ ಕ್ಷಮೆಯಾಚಿಸಿದರು ಎನ್ನಲಾಗಿದೆ.

ಸಾಸ್ತಾನದ ಶಿವಕೃಪಾ ಕಲ್ಯಾಣ ಮಂಟಪದಲ್ಲಿ ನಡೆದ ಕುಂದಗನ್ನಡ ಸಂವಾದದ ಸಂದರ್ಭದಲ್ಲಿ ತುಳುವಿನಲ್ಲಿ 'ಉಲ್ಲೇರ್' ಎಂಬ ವಿಚಾರದಲ್ಲಿ ಕುಂದಗನ್ನಡದಲ್ಲಿ ಮಾತನಾಡುವಾಗ ಏನಾಗುತ್ತದೆ ಎಂಬುದನ್ನು ಎ.ಎಸ್.ಎನ್. ಹೆಬ್ಬಾರ್ ಹಾಸ್ಯ ಚಟಾಕಿಯ ಮೂಲಕ ವ್ಯಕ್ತಪಡಿಸುವಾಗ ಸಮಾಜದ ಹೆಸರು ಉಲ್ಲೇಖಿಸಲಾಗಿತ್ತು. ಈ ಹೇಳಿಕೆಯಿಂದ ವಿಶ್ವಕರ್ಮ ಸಮಾಜದ ಗೌರವಕ್ಕೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿ, ಸಾಲಿಗ್ರಾಮದ ಚೇಂಪಿ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘದ ಆಶ್ರಯದಲ್ಲಿ ಪ್ರತಿಭಟನಾ ಸಭೆ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಯಾವುದೇ ಸಮುದಾಯದ ಗೌರವ ಮತ್ತು ಸ್ವಾಭಿಮಾನಕ್ಕೆ ಧಕ್ಕೆ ತರುವ ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಸಾರ್ವಜನಿಕ ವೇದಿಕೆಗಳಲ್ಲಿ ಮಾತನಾಡುವವರು ತಮ್ಮ ಮಾತಿನ ಪರಿಣಾಮ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಅರಿತುಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಾರ್ಕೂರು ಕಾಳಿಕಾಂಬ ದೇಗುಲದ ಮೊದಲನೇ ಮೊಕ್ತೇಸರ ವಡೇರಹೋಬಳಿ ಶ್ರೀಧರ ಆಚಾರ್ಯ ಮಾತನಾಡಿ, ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಮಾತನಾಡುವ ಸಂದರ್ಭದಲ್ಲಿ ಬಳಸಿದ ಪದಪ್ರಯೋಗದಿಂದ ವಿಶ್ವಕರ್ಮ ಸಮಾಜಕ್ಕೆ ಅವಹೇಳನವಾಗಿದೆ ಎಂದು ಹೇಳಿದರು.

ಯಾರೇ ಆಗಲಿ ಸಮಾಜದ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಂಡರೆ ಅದನ್ನು ಮೌನವಾಗಿ ಸಹಿಸುವ ಪ್ರಶ್ನೆಯೇ ಇಲ್ಲ. ಅಗತ್ಯವಿದ್ದರೆ ಸಂಘಟಿತರಾಗಿ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.

ಕಾಳಿಕಾಂಬ ದೇಗುಲದ ಎರಡನೇ ಮೊಕ್ತೇಸರ ಪ್ರವೀಣ್ ಆಚಾರ್ಯ ಬಾರ್ಕೂರು ಮಾತನಾಡಿ, ವಿಶ್ವಕರ್ಮ ಸಮಾಜದ ಕುರಿತು ಹಲವು ವರ್ಷಗಳಿಂದ ಸಾಮಾಜಿಕ ನಿಂದನೆಗಳು ನಡೆಯುತ್ತಿವೆ. ಇಂತಹ ಬೆಳವಣಿಗೆಗಳನ್ನು ಸಹಿಸಿಕೊಂಡು ಮೌನವಾಗಿದ್ದರೆ ಮುಂದೆ ಮತ್ತಷ್ಟು ಅವಮಾನಗಳಿಗೆ ದಾರಿ ಮಾಡಿಕೊಟ್ಟಂತಾಗುತ್ತದೆ. ಸಮಾಜದ ಸ್ವಾಭಿಮಾನ ಮತ್ತು ಗೌರವದ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದರು.

ಬಹಿರಂಗ ಸಭೆಯಲ್ಲಿ ಕ್ಷಮೆಯಾಚಿಸಿದ ಹೆಬ್ಬಾರ್:

ವಿವಾದಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಸ್ಪಷ್ಟನೆ ನೀಡಿದ ಹಿರಿಯ ವಕೀಲ ಹಾಗೂ ಸಾಹಿತಿ ಎ.ಎಸ್.ಎನ್. ಹೆಬ್ಬಾರ್, ತಮ್ಮ ಮಾತಿನ ಉದ್ದೇಶ ಯಾವುದೇ ವ್ಯಕ್ತಿ ಅಥವಾ ಸಮುದಾಯವನ್ನು ಅವಮಾನಿಸುವುದಲ್ಲ ಎಂದು ತಿಳಿಸಿ ಬಹಿರಂಗವಾಗಿ ಕ್ಷಮೆಯಾಚಿಸಿದರು.

ಕುಂದಗನ್ನಡದ ಹಾಸ್ಯದ ಮಾತಿನ ಸಂದರ್ಭದಲ್ಲಿ ‘ನಾರಾಯಣ ಆಚಾರ್ ಒಳ್ಳೆಯರ್, ಅವರ ಮಕ್ಕಳ ಅಂಡಿ ಪಿರ್ಕಿಗಳು’ಎಂಬ ಪದಪ್ರಯೋಗ ಮಾಡಿರುವುದನ್ನು ಒಪ್ಪಿಕೊಂಡ ಅವರು, ವಿಶ್ವಕರ್ಮ ಸಮಾಜದ ಬಗ್ಗೆ ತನಗೆ ಅಪಾರ ಗೌರವ ಮತ್ತು ಪ್ರೀತಿ ಇದೆ ಎಂದು ಹೇಳಿದರು. ತಮ್ಮ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸಿದ ಹೆಬ್ಬಾರ್, ಭಾಷಣದ ಸಂದರ್ಭದಲ್ಲಿ ವ್ಯಕ್ತವಾದ ಮಾತುಗಳಿಂದ ಅನಗತ್ಯವಾಗಿ ನೋವು ಅಥವಾ ತಪ್ಪು ಅಭಿಪ್ರಾಯ ಮೂಡಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.

“ನನ್ನ ಮಾತಿನಿಂದ ಸಮಾಜಕ್ಕೆ ನೋವಾಗಿದ್ದರೆ ವಿಷಾದಿಸುತ್ತೇನೆ. ಅದಕ್ಕಿಂತಲೂ ಹೆಚ್ಚಿನ ಬೇಸರವಾಗಿದ್ದರೆ ಕ್ಷಮೆಯಾಚಿಸುತ್ತೇನೆ” ಎಂದು ಸಭೆಯಲ್ಲೇ ತಿಳಿಸಿದರು.

ಹೆಚ್ಚಿನ ಸ್ಪಷ್ಟ ಕ್ಷಮೆ ಯಾಚನೆಗೆ ಆಗ್ರಹ; ಕಾನೂನು ಹೋರಾಟದ ಎಚ್ಚರಿಕೆ

ಈ ನಡುವೆ, ಸಮಾಜಕ್ಕೆ ಆಗಿರುವ ಅವಮಾನಕ್ಕೆ ಇನ್ನಷ್ಟು ಸ್ಪಷ್ಟವಾಗಿ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಕಾನೂನು ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ವಡೇರಹೋಬಳಿ ಶ್ರೀಧರ ಆಚಾರ್ಯ ತಿಳಿಸಿದರು.

ಕೋಟ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘದ ಅಧ್ಯಕ್ಷ ಮಣೂರು ಸುಬ್ರಾಯ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿಶ್ವಕರ್ಮ ಸಮಾಜದ ಪ್ರಮುಖರಾದ ಚೇಂಪಿ ಜನಾರ್ದನ ಆಚಾರ್ಯ, ವೆಂಕಟೇಶ ಆಚಾರ್ಯ, ರಮ್ಯಾ ರಮೇಶ್ ಆಚಾರ್ಯ, ರಮೇಶ್ ಆಚಾರ್ಯ ಚೇಂಪಿ, ರಮೇಶ್ ಆಚಾರ್ಯ ನೆರೆಂಬಳ್ಳಿ, ದಿನೇಶ್ ಆಚಾರ್ಯ ಮರವಂತೆ, ಕೃಷ್ಣ ಆಚಾರ್ಯ ಕೋಟ, ರವಿಚಂದ್ರ ಆಚಾರ್ಯ ಮಾರಾಳಿ, ಭವಾನಿ ನಾರಾಯಣ ಆಚಾರ್ಯ, ಚಂದ್ರ ಆಚಾರ್ಯ ಗೋಳಿಯಂಗಡಿ, ಸುರೇಶ್ ಆಚಾರ್ಯ ಕಾಪು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಚದ್ರ ಆಚಾರ್ಯ ಕೋಟ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Tags

Alleged Insult to Vishwakarma CommunityA. S. N. HebbarApologizes
share
ವಾರ್ತಾಭಾರತಿ
ವಾರ್ತಾಭಾರತಿ
Next Story
X