Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೊಕ್ಕರ್ಣೆ ಸಿಂಡಿಕೇಟ್ ರೈತರ ಸೇವಾ...

ಕೊಕ್ಕರ್ಣೆ ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘದಲ್ಲಿ ಭಾರೀ ಅವ್ಯವಹಾರ; ಆರೋಪ

ವಾರ್ತಾಭಾರತಿವಾರ್ತಾಭಾರತಿ5 Nov 2025 9:50 PM IST
share
ಕೊಕ್ಕರ್ಣೆ ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘದಲ್ಲಿ ಭಾರೀ ಅವ್ಯವಹಾರ; ಆರೋಪ

ಉಡುಪಿ: 50ಕ್ಕೂ ಅಧಿಕ ವರ್ಷಗಳ ಇತಿಹಾಸವಿರುವ ಕೊಕ್ಕರ್ಣೆಯ ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತದಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು ಕೋಟಾಂತರ ರೂ.ಗಳ ಅವ್ಯವಹಾರ, ಕಾನೂನಿನ ಉಲ್ಲಂಘನೆ ನಡೆದಿದೆ. ಸಂಘದ ಈಗಿನ ಅಧ್ಯಕ್ಷರು, ಕಾರ್ಯನಿರ್ವಹಣಾಧಿಕಾರಿ ಹಾಗೂ ಆಡಳಿತ ಮಂಡಳಿ ಸದಸ್ಯರು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಭೀಮವಾದ ಉಡುಪಿ ಹಾಗೂ ಸಾಮಾಜಿಕ ಹೋರಾಟಗಾರರ ಸಂಘಟನೆ ಆರೋಪಿಸಿದೆ.

ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ದಸಂಸದ ಶೇಖರ್ ಹಾವಂಜೆ, ಸಾಮಾಜಿಕ ಹೋರಾಟಗಾರ ಸದಾಶಿವ ಶೆಟ್ಟಿ ಹೇರೂರು ಹಾಗೂ ಜಯಕರ ನಾಯಕ್ ಕಳ್ತೂರು ತಿಳಿಸಿದ್ದಾರೆ.

ಕೊಕ್ಕರ್ಣೆಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಈ ಸಂಘ, ಗೋಳಿಯಂಗಡಿ, ಆವರ್ಸೆ, ಕೆಂಜೂರು, ಸಂತೆಕಟ್ಟೆ, ಕರ್ಜೆ, ಕೊಕ್ಕರ್ಣೆ, ಮುದ್ದೂರುಗಳಲ್ಲಿ ಶಾಖೆಗಳನ್ನು ಹೊಂದಿದೆ. ಕಳೆದ 10-15 ವರ್ಷಗಳಿಂದ ಪಟ್ಟಭದ್ರ ಹಿತಾಸಕ್ತಿ ಹೊಂದಿರುವ ಕೆಲ ವ್ಯಕ್ತಿಗಳು ಸೇರಿ ಆಡಳಿತ ಮಂಡಳಿಗೆ ನಡೆಯುವ ಚುನಾವಣೆಯಲ್ಲಿ ವಾಮಮಾರ್ಗದ ಮೂಲಕ ಆಯ್ಕೆಯಾಗುತ್ತಾ ಬಂದಿದ್ದಾರೆ ಎಂದವರು ಆರೋಪಿಸಿದ್ದಾರೆ.

ಕಳೆದ ಅ.3ರಂದು ಕೆಂಜೂರಿನಲ್ಲಿ ನಡೆದ ಸಂಘದ ಸದಸ್ಯರ ಸಭೆಯಲ್ಲಿ ನಕಲಿ ಚಿನ್ನವನ್ನು ಅಡವಿಟ್ಟವರಿಗೆ ಮೂರು ಕೋಟಿ ರೂ. ಹಣ ನೀಡಿರುವ ವಿಷಯ ಬಹಿರಂಗವಾಗಿದ್ದು, ಈ ಬಗ್ಗೆ ಕೆಲವರು ಸಹಕಾರಿ ಇಲಾಖೆಯ ಅಧಿಕಾರಿಗಳಿಗೆ ದೂರು ಸಲ್ಲಿಸಿ ತನಿಖೆ ನಡೆಸುವಂತೆ ಕೋರಿದ್ದು, ಸಹಕಾರ ಸಂಘಗಳ ಸಹಾಯಕ ನಿಬಂಧಕರು ತನಿಖೆ ನಡೆಸಿ ಮೇಲ್ನೋಟಕ್ಕೆ ಸಾಬೀತಾಗಿರುವ ಅವ್ಯವಹಾರದ ಕುರಿತಂತೆ ಆಡಳಿತ ಮಂಡಳಿಗೆ ಕಾರಣ ಕೇಳಿ ನೋಟೀಸು ಜಾರಿ ಮಾಡಿದ್ದಾರೆ ಎಂದು ಜಯಕರ ನಾಯಕ್ ವಿವರಿಸಿದರು.

ಈ ನೋಟೀಸಿನಲ್ಲಿ ಹೆಸರಿಸಲಾದ ಪ್ರತಾಪ್ ಹೆಗ್ಡೆ ಎಂಬವರು ಆಡಳಿತ ಮಂಡಳಿಯ ಸದಸ್ಯರಾಗಿದ್ದು, ಬಿಜೆಪಿಯ ಪ್ರಭಾವಿ ನಾಯಕರು. ಇವರು ಯಾವುದೇ ಅಡಮಾನ ಅಥವಾ ಆಧಾರವನ್ನು ಸಹಕಾರಿ ಸಂಘಕ್ಕೆ ನೀಡದೇ ಕೋಟ್ಯಾಂತರ ರೂ.ಸಾಲವನ್ನು ಪಡೆದಿರುವುದು ಬಹಿರಂಗಗೊಂಡಿದೆ ಎಂದು ಆರೋಪಿಸಿದರು.

ಸಂಘದ ಸಾಲ ನಿಯಮಾವಳಿ ಪ್ರಕಾರ ಒಬ್ಬ ವ್ಯಕ್ತಿಗೆ ನೀಡಬಹುದಾದ ಚಿನ್ನಾಭರಣ ಸಾಲದ ಮಿತಿ 25 ಲಕ್ಷ ರೂ. ಆದರೆ ದಾಖಲೆ ಪರಿಶೀಲಿಸಿದಾಗ ಇಲ್ಲಿ ನಿತಿನ್‌ಕುಮಾರ್ ಎನ್.ವಿ. ಎಂಬವರಿಗೆ 76.88ಲಕ್ಷ ರೂ., ಉಮಾನಾಥ ಶೆಟ್ಟಿ ಎಂಬವರಿಗೆ 1.09 ಕೋಟಿ ರೂ.ಸಾಲವನ್ನು ನೀಡಿ ನಿಯಮಾವಳಿಯನ್ನು ಉಲ್ಲಂಘಿಸಲಾಗಿದೆ ಎಂದು ನಾಯಕ್ ತಿಳಿಸಿದರು.

ಉಮಾನಾಥ ಶೆಟ್ಟಿ ಅವರು ಸಂಘದ ಅಧ್ಯಕ್ಷರ ನಿಕಟ ಸಂಬಂಧಿಯಾಗಿದ್ದು, ನಕಲಿ ಚಿನ್ನಾಭರಣ ಟ್ಟು ಪಡೆದ 1.09 ಕೋಟಿ ರೂ.ಸಾಲವನ್ನು ಮರುಪಾವತಿಸಲು ಅವರಿಗೆ ಮತ್ತೆ ಒಂದು ಕೋಟಿ ರೂ.ಸಾಲ ಮಂಜೂರಾಗಿದೆ ಎಂದು ನೋಟೀಸಿನಲ್ಲಿ ತಿಳಿಸಲಾಗಿದೆ ಎಂದರು. ಸಂಘದ ದಾಖಲೆಗಳನ್ನು ಪರಿಶೀಲಿಸಿದಾಗ ಚಿನ್ನಾಭರಣ ಸಾಲಗಳ ಪ್ರತಿ 102 ಖಾತೆಗಳಲ್ಲಿ ಒಟ್ಟು 2.93 ಕೋಟಿ ರೂ. ವಿವಿಧ ಸಾಲಗಲನ್ನು ನಕಲಿ ಅಥವಾ ಕಳಪೆ ಗುಣಮಟ್ಟದ ಚಿನ್ನಾಭರಣಗಳನ್ನು ಅಡವಿಟ್ಟು ಪಡೆದಿರುವುದು ಕಂಡುಬಂದಿದೆ. ಇದರಲ್ಲಿ 40 ಲಕ್ಷ ರೂ.ಗಳಿಗೂ ಆಧಿಕ ಮೊತ್ತದ ಸಾಲ ಮರುಪಾವತಿಗೆ ಬಾಕಿ ಇರುವುದು ವರದಿಯಿಂದ ತಿಳಿಯುತ್ತದೆ ಎಂದರು.

ಸಹಕಾರಿ ಇಲಾಖೆಯ ಅಧಿಕಾರಿಗಳ ಪ್ರಕಾರ ಸಂಘದಲ್ಲಿ ಸುಮಾರು 10 ಕೋಟಿ ರೂ.ಅವ್ಯವಹಾರ ನಡೆದಿದ್ದರೆ, ತಮಗೆ ಬಂದಿರುವ ಮಾಹಿತಿ ಪ್ರಕಾರ ಇಲ್ಲಿ 20ರಿಂದ 30 ಕೋಟಿ ರೂ.ಅವ್ಯವಹಾರ ನಡೆದಿರುವುದಾಗಿ ಜಯಕರ ನಾಯಕ್ ಕಳ್ತೂರು ವಿವರಿಸಿದರು.

ಕೊಕ್ಕರ್ಣೆ ಸಹಕಾರಿ ಸಂಘದಲ್ಲಿ ನಡೆದ ಅವ್ಯವಹಾರದ ಸಮಗ್ರ ತನಿಖೆ ನಡೆಸುವಂತೆ ತಾವು ಈಗಾಗಲೇ ಸಂಬಂಧಿತರಿಗೆ ಮನವಿ ಅರ್ಪಿಸಿದ್ದೇವೆ. ಸಂಘದಲ್ಲಿ 2010ರ ಬಳಿಕ ನಡೆದ ಎಲ್ಲಾ ಕಾನೂನು ಬಾಹಿರ ನೇಮಕಾತಿಗಳ ಬಗ್ಗೆ ಕೂಡಾ ಸಮಗ್ರ ತನಿಖೆ ನಡೆಯಬೇಕು ಎಂದು ಶೇಖರ ಹಾವಂಜೆ, ಸದಾಶಿವ ಶೆಟ್ಟಿ ಹಾಗೂ ಜಯಕರ ನಾಯಕ್ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X