Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪರ್ಯಾಯ: ಜ.9ರಂದು ಶೀರೂರು ಶ್ರೀಗಳ...

ಪರ್ಯಾಯ: ಜ.9ರಂದು ಶೀರೂರು ಶ್ರೀಗಳ ಪುರಪ್ರವೇಶ

ವಾರ್ತಾಭಾರತಿವಾರ್ತಾಭಾರತಿ7 Jan 2026 8:54 PM IST
share
ಪರ್ಯಾಯ: ಜ.9ರಂದು ಶೀರೂರು ಶ್ರೀಗಳ ಪುರಪ್ರವೇಶ

ಉಡುಪಿ, ಜ.7: ಜ.18ರಂದು ನಡೆಯುವ ಶೀರೂರು ಪರ್ಯಾಯದಲ್ಲಿ ಮೊದಲ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ದೇಶಾದ್ಯಂತ ಧಾರ್ಮಿಕ ಕ್ಷೇತ್ರಗಳ ಪರ್ಯಟನದ ಬಳಿಕ ಜ.9ರಂದು ಉಡುಪಿಗೆ ಆಗಮಿಸಲಿದ್ದು, ಅಪರಾಹ್ನ 3:00ಗಂಟೆಗೆ ಕಡಿಯಾಳಿ ಮೂಲಕ ಪುರಪ್ರವೇಶ ಮಾಡಲಿದ್ದಾರೆ ಎಂದು ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷ ಯಶಪಾಲ್ ಸುವರ್ಣ ತಿಳಿಸಿದ್ದಾರೆ.

ಶೀರೂರು ಮಠದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಪುರಪ್ರವೇಶ, ಶೋಭಾ ಯಾತ್ರೆ, ಹಸಿರು ಹೊರೆಕಾಣಿಕೆ ಕುರಿತು ಮಾಹಿತಿ ನೀಡಿದ ಅವರು, ಶೀರೂರು ಶ್ರೀಗಳು ಪರ್ಯಟನ ಬಳಿಕ ಶೀರೂರು ಮೂಲಮಠಕ್ಕೆ ಆಗಮಿ ಸಲಿದ್ದು, ಅಲ್ಲಿಂದ ಪಟ್ಟದ ದೇವರ ಸಮೇತ ಕಡಿಯಾಳಿಗೆ ಆಗಮಿಸಿ, ಅಲ್ಲಿ ಶ್ರೀಮಹಿಷಮರ್ದಿನಿ ದೇವರ ದರ್ಶನದ ಬಳಿಕ ಭವ್ಯ ಶೋಭಾ ಯಾತ್ರೆಯಲ್ಲಿ ಪುರಪ್ರವೇಶ ಮಾಡಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಶ್ರೀಗಳನ್ನು ಸ್ವಾಗತಿಸಿ, ಶೋಭಾ ಯಾತ್ರೆಯಲ್ಲಿ ಕರೆತರಲಾಗುವುದು. ಪುರಮೆರವಣಿಗೆ ಯಲ್ಲಿ ಸುಮಾರು ಐದು ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಪುರಪ್ರವೇಶ ಮೆರವಣಿಗೆಯ ಸಂಚಾಲಕ ಗಣೇಶ್ ರಾವ್ ಮಾತನಾಡಿ ಪುರಪ್ರವೇಶ ಮೆರವಣಿಗೆ ಕಡಿಯಾಳಿಯಿಂದ ಹೊರಟು ಸಿಟಿಬಸ್ ಸ್ಟಾಂಡ್ ಹನುಮಾನ್ ವೃತ್ತ, ಕನಕದಾಸ ರಸ್ತೆ ಮೂಲಕ ಕೃಷ್ಣ ಮಠ ತಲುಪಲಿದೆ. 1000ಕ್ಕೂ ಅಧಿಕ ಭಜಕರು, ಉಡುಪಿಯ ಸ್ಥಳೀಯ ಜಾನಪದ ತಂಡಗಳು, ವಿವಿಧ ಕಲಾತಂಡ, ಸಾಂಸ್ಕೃತಿಕ ತಂಡಗಳು ಹಾಗೂ ವಿಶೇಷ ಟ್ಯಾಬ್ಲೋಗಳು ಮೆರವಣಿಗೆಗೆ ಮೆರುಗು ನೀಡಲಿವೆ ಎಂದರು.

ಶೀರೂರುಶ್ರೀಗಳು ರಥಬೀದಿಯಲ್ಲಿ ಕನಕನ ಕಿಂಡಿ ಮೂಲಕ ಶ್ರೀಕೃಷ್ಣ ದರ್ಶನ ಪಡೆದ ಬಳಿಕ ವಿವಿಧ ದೇವರ ದರ್ಶನ ಪಡೆಯಲಿದ್ದಾರೆ. ಸಂಜೆ ರಥಬೀದಿಯಲ್ಲಿ ಹಾಕಲಾಗುವ ವೇದಿಕೆಯಲ್ಲಿ ಉಡುಪಿ ನಗರಸಭೆಯ ವತಿಯಿಂದ ಪೌರ ಸಮ್ಮಾನವನ್ನು ಸ್ವೀಕರಿಸುವರು. ಇದರಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೇರಿದಂತೆ ಗಣ್ಯರು ಉಪಸ್ಥಿತರಿ ರುವರು. ಶಾಸಕ ಯಶಪಾಲ್ ಸುವರ್ಣ ಅಧ್ಯಕ್ಷತೆ ವಹಿಸುವರು ಎಂದರು.

ಇದೇ ವೇದಿಕೆಯಲ್ಲಿ ಜ.9 ಶುಕ್ರವಾರದಿಂದ 17ರ ಶನಿವಾರದವರೆಗೆ ಪ್ರತಿದಿನ ಸಂಜೆ ಹೆಸರಾಂತ ಸಾಂಸ್ಕೃತಿಕ ತಂಡಗಳಿಂದ, ಖ್ಯಾತನಾಮ ಕಲಾವಿ ದರಿಂದ ವಿವಿಧ ಕಾರ್ಯಕ್ರಮಗಳು ಪ್ರಸ್ತುತಗೊಳ್ಳಲಿವೆ.

ಹೊರೆಕಾಣಿಕೆ ಮೆರವಣಿಗೆ: ಜ.10ರಿಂದ 17ರವರೆಗೆ ಎಂಟು ದಿನಗಳ ಕಾಲ ನಾಡಿನ ವಿವಿದೆಡೆಗಳಿಂದ ಹೊರೆಕಾಣಿಕೆ ಶ್ರೀಮಠಕ್ಕೆ ಆಗಮಿಸಲಿವೆ ಎಂದು ಹೊರೆಕಾಣಿಕೆ ಸಂಚಾಲಕ ಸುಪ್ರಸಾದ್ ಶೆಟ್ಟಿ ತಿಳಿಸಿದರು. ಜಿಲ್ಲೆಯ ಪ್ರತೀ ಮನೆ ಯಿಂದ ಹೊರೆಕಾಣಿಕೆ ಸಲ್ಲಿಕೆಯಾಗಬೇಕೆಂಬ ಶ್ರೀವೇದವರ್ಧನ ತೀರ್ಥರ ಆಶಯದಂತೆ ಎಂಟು ವಲಯಗಳಾಗಿ ವಿಂಗಡಿಸಿ ಒಟ್ಟು 54 ಹೊರೆಕಾಣಿಕೆ ಕೇಂದ್ರಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮೀನುಗಾರರ ಸಂಘ, ಸಹಕಾರಿ ಯೂನಿಯನ್, ಬೆಳ್ತಂಗಡಿ ಭಕ್ತರ ತಂಡದಿಂದ, ಕನ್ನರ್ಪಾಡಿ ಭಕ್ತಬಳಗ, ಮಟ್ಟು ಗುಳ್ಳ ಸಮರ್ಪಣೆ ಸೇರಿದಂತೆ ವಿವಿಧ ತಾಲೂಕು ಕೇಂದ್ರಗಳಿಂದ, ಸಂಘ ಸಂಸ್ಥೆಗಳಿಂದ ಹೊರೆಕಾಣಿಕೆ ಪ್ರತಿದಿನ ಸಮರ್ಪಣೆಯಾಗಲಿವೆ ಎಂದರು.

ಹೊರೆಕಾಣಿಕೆ ಮೆರವಣಿಗೆ ಪ್ರತಿದಿನ ಜೋಡುಕಟ್ಟೆಯಿಂದ ಹೊರಟು ಶ್ರೀಕೃಷ್ಣ ಮಠದ ಪಾಕಿೊಂಗ್ ಪ್ರದೇಶದಲ್ಲಿರುವ ಉಗ್ರಾಣವನ್ನು ತಲುಪಲಿವೆ. ಅಲ್ಲಿ ಹೊರೆಕಾಣಿಕೆಯಿಂದ ಬರುವ ವಸ್ತುಗಳನ್ನು ಅಚ್ಚುಕಟ್ಟಾಗಿ ಜೋಡಿಸಿಡಲಾಗು ವುದು. ಇಲ್ಲೇ ವಸ್ತುಪ್ರದರ್ಶನವನ್ನು ತೆರೆಯಲಾಗುವುದು ಎಂದು ಯಶಪಾಲ್ ಸುವರ್ಣ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ, ಮಠದ ದಿವಾನರಾದ ಡಾ ಉದಯಕುಮಾರ ಸರಳತ್ತಾಯ,ಕಾರ್ಯದರ್ಶಿ ಮೋಹನ್ ಭಟ್, ಕೋಶಾಧಿಕಾರಿ ಜಯ ಪ್ರಕಾಶ್ ಕೆದ್ಲಾಯ, ಇಂದ್ರಾಳಿ ಜಯಕರ ಶೆಟ್ಟಿ, ಸಗ್ರಿ ಗೋಪಾಲಕೃಷ್ಣ ಸಾಮಗ, ರಮೇಶ್ ಕಾಂಚನ್, ರಮೇಶ್ ಬಂಗೇರ, ನಂದನ್ ಜೈನ್, ಮಧುಕರ ಮುದ್ರಾಡಿ, ಅಶ್ವಥ್ ಭಾರಧ್ವಜ್ ಮುಂತಾದವರು ಉಪಸ್ಥಿತರಿದ್ದರು.

Tags

Alternative
share
ವಾರ್ತಾಭಾರತಿ
ವಾರ್ತಾಭಾರತಿ
Next Story
X