ಅಮಾಸೆಬೈಲು | ಹೊಟೇಲ್ ವ್ಯವಹಾರದಲ್ಲಿ ನಷ್ಟ: ವ್ಯಕ್ತಿ ಆತ್ಮಹತ್ಯೆ

ಅಮಾಸೆಬೈಲು, ಡಿ.12: ಹೊಟೇಲ್ ವ್ಯವಹಾರದಲ್ಲಿ ನಷ್ಟ ಉಂಟಾದ ಚಿಂತೆಯಲ್ಲಿ ಮನನೊಂದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಚ್ಚಟ್ಟು ಗ್ರಾಮದ ಹಂಚಿಕಟ್ಟೆ ಹೆಬ್ಳಿ ಎಂಬಲ್ಲಿ ನಡೆದಿದೆ.
ಮೃತರನ್ನು ಹಂಚಿಕಟ್ಟೆ ಹೆಬ್ಳಿಯ ಸಂತೋಷ ಶೆಟ್ಟಿ(40) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಜೆ.ಪಿ. ನಗರದಲ್ಲಿ ಹೋಟೆಲ್ ವ್ಯವಹಾರ ಮಾಡಿಕೊಂಡಿದ್ದ ಇವರು, ನಂತರ ಹೋಟೆಲ್ ವ್ಯವಹಾರದಲ್ಲಿ ನಷ್ಟ ಉಂಟಾಗಿ 3 ತಿಂಗಳ ಹಿಂದೆ ವಾಪಸ್ಸು ಊರಿಗೆ ಬಂದಿದ್ದರು.
ತಾಯಿ ಮನೆಯಾದ ಬೆಳ್ಳಂಜೆಯಲ್ಲಿ ವಾಸವಾಗಿದ್ದ ಇವರು, ಕಾರ್ಕಳದಲ್ಲಿ ಕಾರ್ ಶೋರೂಂನಲ್ಲಿ ಕೆಲಸ ಮಾಡಿಕೊಂಡಿದ್ದರು. ಡಿ.11ರಂದು ಹಂಚಿಕಟ್ಟೆ ಹೆಬ್ಳಿ ಮನೆಗೆ ಬಂದಿದ್ದ ಇವರು, ರಾತ್ರಿ ಅಡುಗೆ ಮನೆಯ ಪಕ್ಕದ ರೂಮಿನಲ್ಲಿ ಮಾಡಿನ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.





