Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಮಾಸೆಬೈಲು: ರಸ್ತೆ, ನೆಟ್ವರ್ಕ್...

ಅಮಾಸೆಬೈಲು: ರಸ್ತೆ, ನೆಟ್ವರ್ಕ್ ಸಮಸ್ಯೆಯಿಂದ ಹೈರಾಣಾದ ಜನತೆ; ಲೋಕಸಭಾ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಬ್ಯಾನರ್ ತೆರವುಗೊಳಿಸಿದ ಅಧಿಕಾರಿ ವಿರುದ್ಧ ಸ್ಥಳೀಯರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ13 Feb 2024 8:55 PM IST
share
ಅಮಾಸೆಬೈಲು: ರಸ್ತೆ, ನೆಟ್ವರ್ಕ್ ಸಮಸ್ಯೆಯಿಂದ ಹೈರಾಣಾದ ಜನತೆ; ಲೋಕಸಭಾ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಕುಂದಾಪುರ, ಫೆ.13: ತಮ್ಮ ಭಾಗದ ದಲಿತ ಕಾಲನಿ ಮೂಲಭೂತ ಸೌಕರ್ಯಗಳಾದ ರಸ್ತೆದುರಸ್ತಿ, ಬೀದಿ ದೀಪ, ಚರಂಡಿ ದುರಸ್ತಿ, ನೆಟ್‌ವರ್ಕ್ ಲಭ್ಯತೆ, ಹಕ್ಕುಪತ್ರ ಸೌಕರ್ಯದಿಂದ ವಂಚಿತವಾಗಿದ್ದು, ಕೂಡಲೇ ಮೂಲ ಸೌಕರ್ಯ ಒದಗಿಸದಿದ್ದರೆ ಮುಂಬರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಅಮಾಸೆಬೈಲು ಗ್ರಾ.ಪಂ. ವ್ಯಾಪ್ತಿಯ ಕೆಳಾಸುಂಕ, ಕೆರೆಗದ್ದೆ ಭಾಗದ ನೊಂದ ಪರಿಶಿಷ್ಟ ಪಂಗಡ ಕಾಲೋನಿಯ (2ನೇ ವಾರ್ಡ್) ನಿವಾಸಿಗಳು ಘೋಷಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಅಳವಡಿಸಿದ್ದ ಬ್ಯಾನರ್‌ನ್ನು ಇದೀಗ ಅಧಿಕಾರಿಗಳು ತೆರವು ಮಾಡಿದ್ದು, ಇದರ ವಿರುದ್ಧ ಈ ಗ್ರಾಮಗಳ ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಳಾಸುಂಕ ಸಮೀಪದಿಂದ ಕೆರೆಗದ್ದೆಗೆ ಸಂಪರ್ಕ ರಸ್ತೆಯೇ ಆಗಿಲ್ಲ. ಸುಮಾರು 1 ಕಿಮೀ ದೂರ ರಸ್ತೆ ಬಳಕೆ ಮಾಡಲು ಹರಸಾಹಸ ಪಡಬೇಕು. ವಿದ್ಯಾರ್ಥಿಗಳು ಸಹಿತ 7 ಕುಟುಂಬದ 30 ಮಂದಿ ಇಲ್ಲಿ ವಾಸವಿದ್ದಾರೆ. ರಸ್ತೆಗೆ ಬೇಡಿಕೆಯಿಟ್ಟು ಹಲವು ವರ್ಷಗಳು ಸಂದರೂ ಫಲಿತಾಂಶ ಮಾತ್ರ ಶೂನ್ಯ.

ಇನ್ನು ನೆಟ್ವರ್ಕ್ ಸಮಸ್ಯೆಯೂ ಇಲ್ಲಿನ ಬಹಳಷ್ಟು ಮಂದಿಯನ್ನು ಕಾಡುತ್ತಿದೆ. ಚರಂಡಿ, ಹಕ್ಕುಪತ್ರ ಮೊದಲಾದ ಸೌಕರ್ಯ ಗಳ ಕೊರತೆಯಿಂದ ಜನರು ದಿನನಿತ್ಯ ಹಲವು ಸಮಸ್ಯೆ ಅನುಭವಿಸುವಂತಾಗಿದೆ.

ಹಾಕಿದ್ದ ಬ್ಯಾನರ್ ತೆರವು ಮಾಡಿದ್ದಕ್ಕೆ ಆಕ್ರೋಶ: ಎರಡು ಗ್ರಾಮಗಳ ಜನತೆ ಮೂಲಭೂತ ಸೌಕರ್ಯಗಳಾದ ರಸ್ತೆ ದುರಸ್ತಿ, ಬೀದಿ ದೀಪ, ಚರಂಡಿ ದುರಸ್ತಿ, ನೆಟ್ವರ್ಕ್, ಹಕ್ಕು ಪತ್ರ ಮೊದಲಾದ ಸೌಕರ್ಯದಿಂದ ವಂಚಿತರಾಗಿದ್ದಾರೆ. ಮುಂದೆ ಬರುವ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗುವ ಮೊದಲು ಕಾಲನಿಯ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕೆಂದು ಆಗ್ರಹಿಸಿ ಬ್ಯಾನರ್ ಅಳವಡಿಸ ಲಾಗಿತ್ತು.

ಆದರೆ ಏಕಾಏಕಿ ಬ್ಯಾನರ್ ತೆರವು ಮಾಡಿದ ಅಮಾಸೆಬೈಲು ಪಿಡಿಓ ನಡೆ ವಿರುದ್ಧ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿ ದ್ದಾರೆ. ಅಮಾಸೆಬೈಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪರವಾನಿಗೆ ಇಲ್ಲದಿರುವ ಬ್ಯಾನರ್, ಬಂಟಿಂಗ್ಸ್ ಗಳನ್ನು ಅಳವಡಿಸಿದ್ದರೂ ಅವುಗಳ ತೆರವಿನ ಬಗ್ಗೆ ಗ್ರಾಪಂ ಕ್ರಮವಹಿಸಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ಊರಿನ ಮೂಲಸೌಕರ್ಯದ ಬಗ್ಗೆ ಪರಿಶಿಷ್ಟ ಪಂಗಡ ಕಾಲೋನಿ ನಿವಾಸಿಗಳ ಬೇಡಿಕೆ ಈಡೇರಿಸದಿದ್ದರೆ ಮುಂಬ ರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಸಲು ಅಳವಡಿಸಿದ ಬ್ಯಾನರನ್ನು ಗ್ರಾಪಂ ಪಿಡಿಒ ಅವರು ಪರಿಶಿಷ್ಟ ಪಂಗಡದ ನಿವಾಸಿಗಳನ್ನು ಭೇಟಿಯಾಗಿ ಕಷ್ಟ ಕೇಳದೆ, ಯಾವುದೇ ಮಾಹಿತಿ ನೀಡದೇ ತೆರವುಮಾಡಿದ್ದಾರೆ ಎಂಬುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ ವಿಧಾನಸಭಾ ಚುನಾವಣೆ ವೇಳೆಯೂ ಬಹಿಷ್ಕಾರದ ನಿರ್ಧಾರ ಘೋಷಿಸಿ ಬ್ಯಾನರ್‌ನ್ನು ಅಳವಡಿಸಲಾಗಿತ್ತು. 15 ದಿನದಲ್ಲಿ ಸಮಸ್ಯೆಗೆ ಪರಿಹಾರ ಒದಗಿಸುವ ಭರವಸೆ ನೀಡಿದ್ದರಿಂದ ಬ್ಯಾನರ್‌ನ್ನು ತೆರೆವು ಗೊಳಿಸಲಾಗಿತ್ತು. ಬಳಿಕ ನಾವು ಮತದಾನ ಮಾಡಿದ್ದೆವು. ಆದರೆ ಈವರೆಗೆ ನಮ್ಮ ಬೇಡಿಕೆ ಈಡೇರಿಲ್ಲ. ಅರಣ್ಯ ಇಲಾಖೆಯ ನೆಪ ಹೇಳಿ ಅಭಿವೃದ್ಧಿ ಮಾಡಿಲ್ಲ. ನಮ್ಮ ಹಕ್ಕು ಕೇಳಿ ಅಳವಡಿಸಿದ ಬ್ಯಾನರ್ ಕೂಡ ತೆರವು ಮಾಡಲಾಗಿದೆ.

-ಸತೀಶ್ ನಾಯ್ಕ್, ಕೆಳಾಸುಂಕ ಗ್ರಾಮಸ್ಥ.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X