Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸರ್ಪಂಗಳ ಪ್ರಶಸ್ತಿಗೆ ಅಂಬಾಪ್ರಸಾದ್,...

ಸರ್ಪಂಗಳ ಪ್ರಶಸ್ತಿಗೆ ಅಂಬಾಪ್ರಸಾದ್, ಕೃಷ್ಣಶೆಟ್ಟಿ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ5 Oct 2023 7:42 PM IST
share
ಸರ್ಪಂಗಳ ಪ್ರಶಸ್ತಿಗೆ ಅಂಬಾಪ್ರಸಾದ್, ಕೃಷ್ಣಶೆಟ್ಟಿ ಆಯ್ಕೆ

ಉಡುಪಿ, ಅ.5: ಕಲಾಪೋಷಕ ಸರ್ಪಂಗಳ ಸುಬ್ರಹ್ಮಣ್ಯ ಭಟ್ ಸಂಸ್ಮರಣಾರ್ಥ ಯಕ್ಷಗಾನ ಕಲಾಸಾಧಕ ಪ್ರಶಸ್ತಿಗೆ ತೆಂಕು ತಿಟ್ಟು ಯಕ್ಷಗಾನದ ಪ್ರಸಿದ್ಧ ಸ್ತ್ರೀವೇಷಧಾರಿ ಅಂಬಾಪ್ರಸಾದ ಪಾತಾಳ ಮತ್ತು ಯಕ್ಷಗಾನ ಕಲಾಸೇವಾ ಪುರಸ್ಕಾರ ಪ್ರಶಸ್ತಿಗೆ ಚತುರ ಚಕ್ರತಾಳ ವಾದಕ ಬೆಳ್ತಂಗಡಿ ಕೃಷ್ಣಶೆಟ್ಟಿ ಆಯ್ಕೆಯಾಗಿದ್ದಾರೆ.

ಅಂಬಾಪ್ರಸಾದ್ ಪಾತಾಳ ತೆಂಕುತಿಟ್ಟಿನ ಅಗ್ರಪಂಕ್ತಿಯ ಸ್ತ್ರೀವೇಷಧಾರಿ ಪಾತಾಳ ವೆಂಕಟರಮಣ ಭಟ್ಟರ ಪುತ್ರರಾಗಿದ್ದು ಯಕ್ಷಗಾನ ರಂಗದಲ್ಲಿ ಕಳೆದ ನಾಲ್ಕೂವರೆ ದಶಕಗಳಿಂದ ಸಕ್ರಿಯರಾಗಿದ್ದಾರೆ. ಕನ್ನಡ ಪೌರಾಣಿಕ ಮತ್ತು ತುಳು ಸಾಮಾಜಿಕ ಪ್ರಸಂಗಗಳೆರಡರಲ್ಲಿಯೂ ಸ್ತ್ರೀ ವೇಷದ ಘನತೆಯನ್ನು ಮೆರೆಸಿ ಜನಮನ್ನಣೆ ಪಡೆದವರಾಗಿದ್ದಾರೆ.

ಬೆಳ್ತಂಗಡಿ ಕೃಷ್ಣಶೆಟ್ಟಿ ಇವರು ವೇಷಧಾರಿಯಾಗಿ, ಮದ್ದಲೆವಾದಕರಾಗಿ ವೃತ್ತಿಪರ ಮತ್ತು ಹವ್ಯಾಸಿರಂಗಗಳೆರಡರಲ್ಲೂ ತೊಡಗಿಸಿಕೊಂಡಿದ್ದು ಕಳೆದ ಮೂರು ದಶಕಗಳಿಂದ ಚಕ್ರತಾಳವಾದಕರಾಗಿ ಕಾರ್ಯನಿರ್ವಹಿಸುತಿದ್ದಾರೆ. ಯಕ್ಷಗಾನ ರಂಗದಲ್ಲಿ ಸುಮಾರು ಅರವತ್ತೈದು ವರ್ಷಗಳಿಂದ ಇವರು ಸಕ್ರಿಯರಾಗಿದ್ದಾರೆ.

ಉಡುಪಿಯ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದ ವಠಾರದಲ್ಲಿ ಅಕ್ಟೋಬರ್ 7ರಂದು ಸಂಜೆ 6:30ರಿಂದ ಜರಗುವ ‘ಸಪರ್ಂಗಳ ಯಕ್ಷೋತ್ಸವ- 2023’ರಲ್ಲಿ ಪ್ರಶಸ್ತಿ ಪ್ರದಾನ, ಸಂಸ್ಮರಣ, ಯಕ್ಷಗಾನ ಪ್ರದರ್ಶನ ಕಾರ್ಯ ಕ್ರಮಗಳು ಜರಗಲಿವೆ.

ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭ ತೀರ್ಥರು ಸಾನ್ನಿಧ್ಯ ವಹಿಸಲಿದ್ದು, ಕಡಿಯಾಳಿ ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ರವಿರಾಜ ಅಚಾರ್ಯ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು ಎಂದು ಕಾರ್ಯಕ್ರಮದ ಸಂಯೋಜಕರಾದ ನಳಿನಿ ಸುಬ್ರಹ್ಮಣ್ಯ ಭಟ್, ಡಾ.ಶೈಲಜಾ ಎಸ್. ಮತ್ತು ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X