Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಂಬೇಡ್ಕರ್, ದಲಿತರಿಗೆ ಅವಹೇಳನ ಪ್ರಕರಣ:...

ಅಂಬೇಡ್ಕರ್, ದಲಿತರಿಗೆ ಅವಹೇಳನ ಪ್ರಕರಣ: ಹಿಂದೂ ಜಾಗರಣ ವೇದಿಕೆ ಮುಖಂಡ ಉಮೇಶ್ ನಾಯ್ಕ್ ಬಂಧನ

ವಾರ್ತಾಭಾರತಿವಾರ್ತಾಭಾರತಿ12 Oct 2024 7:11 PM IST
share
ಅಂಬೇಡ್ಕರ್, ದಲಿತರಿಗೆ ಅವಹೇಳನ ಪ್ರಕರಣ: ಹಿಂದೂ ಜಾಗರಣ ವೇದಿಕೆ ಮುಖಂಡ ಉಮೇಶ್ ನಾಯ್ಕ್ ಬಂಧನ

ಉಡುಪಿ, ಅ.12: ಸಮಸ್ತ ದಲಿತ ಸಮುದಾಯ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ ಮಾತಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಹಿಂದೂ ಜಾಗರಣ ವೇದಿಕೆಯ ಕಾರ್ಕಳ ತಾಲೂಕು ಸಹಸಂಚಾಲಕ ಉಮೇಶ ನಾಯ್ಕ್ ಸೂಡ ಅವರನ್ನು ಪೊಲೀಸರು ಕಾರ್ಕಳದಲ್ಲಿ ಬಂಧಿಸಿದ್ದಾರೆ.

ಪೊಲೀಸರು ಇಂದು ಆತನನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಲಯ ಆತನಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಬಂಧನವನ್ನು ಖಚಿತ ಪಡಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ತಿಳಿಸಿದ್ದಾರೆ.

ಹಿಂದೂ ಜಾಗರಣ ವೇದಿಕೆಯ ಮುಖಂಡನಾದ ಉಮೇಶ ನಾಯ್ಕ್ ದಕ್ಷಿಣ ಕನ್ನಡ ಮರಾಠೆ ಸಂರಕ್ಷಣಾ ಸಮಿತಿಯ ವಾಟ್ಸ್‌ಅಪ್ ಗುಂಪಿನಲ್ಲಿ ಹಾಕಿದ ವಾಯ್ಸ್ ಮಸೇಜ್‌ನಲ್ಲಿ ಅಂಬೇಡ್ಕರ್ ಹಾಗೂ ದಲಿತರಿಗೆ ಅಪಮಾನಕರ ರೀತಿಯ ಸಂದೇಶವನ್ನು ಪೋಸ್ಟ್ ಮಾಡಿದ್ದು, ಅದು ವೈರಲ್ ಆದ ಬಳಿಕ ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ದಲಿತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು.

ದಲಿತ ಸಮುದಾಯ ಹಾಗೂ ಅಂಬೇಡ್ಕರ್ ಅವರನ್ನು ಕೀಳುಮಟ್ಟದಲ್ಲಿ ಅಪಮಾನ ಮಾಡಿದ್ದ ಉಮೇಶ್ ನಾಯ್ಕ್‌ನನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಹಾಗೂ ದಲಿತ ಸಂಘಟನೆಗಳು ಅಲ್ಲಲ್ಲಿ ಪೊಲೀಸರಿಗೆ ಮನವಿಗಳನ್ನು ಸಲ್ಲಿಸಿ ಒತ್ತಾಯಿಸಿದ್ದು, ಪೊಲೀಸರು ಕಳೆದ ರಾತ್ರಿಯೇ 43ವರ್ಷ ಪ್ರಾಯದ ಉಮೇಶನನ್ನು ಸೂಡಾದಲ್ಲಿ ಬಂಧಿಸಿದ್ದರೆಂದು ತಿಳಿದುಬಂದಿದ್ದು, ಆತನ ಮೇಲೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)-2023ರ 353(2)ರ ಅಡಿ ಪ್ರಕರಣ ದಾಖಲಿಸಲಾಗಿದೆ.

ನ.10ರಂದು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿರುವ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ಗದ್ದಿಗೆ ಕರಾವಳಿ ಮರಾಠಿ ಸಮಾವೇಶ -2024ನ್ನು ಆಯೋಜಿಸಿದ್ದು, ಈ ಸಮಾವೇಶದ ಆಮಂತ್ರಣ ಪತ್ರಿಕೆಯ ಮುಖಪುಟದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪೋಟೊ ಮುದ್ರಿಸಿರುವುದು ಉಮೇಶ ನಾಯ್ಕ್‌ನ ಕಂಗೆಣ್ಣಿಗೆ ಗುರಿಯಾಗಿತ್ತು. ಇದನ್ನೇ ನೆಪವಾಗಿರಿಸಿ ಕೊಂಡು ಹಿಂದೂ ಜಾಗರಣ ವೇದಿಕೆಯ ಮುಖಂಡ ಅಂಬೇಡ್ಕರ್ ಹಾಗೂ ದಲಿತರನ್ನು ಅವಮಾನಿಸಿ ವಾಯ್ಸ್ ಮೆಸೇಜ್ ಹರಿಯಬಿಟ್ಟಿರುವುದಾಗಿ ವರದಿಯಾಗಿದೆ.

ಉಮೇಶ ನಾಯ್ಕ್ ತನ್ನ ಸಂದೇಶದಲ್ಲಿ ‘ಮರಾಠಿಗರು ದಲಿತರಲ್ಲ. ಆಮಂತ್ರಣ ಪತ್ರಿಕೆಯಲ್ಲಿರುವ ಅಂಬೇಡ್ಕರ್ ಫೋಟೊ ತೆಗೆದು ಶಿವಾಜಿಯ ಫೋಟೊ ಹಾಕಬೇಕು. ದಲಿತರು ದನದ ಹಾಗೂ ಕೋಣದ ಮಾಂಸ ತಿನ್ನುವವರು. ಸ್ಮಶಾನದಲ್ಲಿ ಮಲಗುವವರು. ಅಂಬೇಡ್ಕರ್ ಫೋಟೊ ಹಾಕಲು ಆತ ನಿನ್ನ ಅಪ್ಪನೇ. ಅಂಬೇಡ್ಕರ್ ಫೋಟೊ ತೆಗೆದು ಶಿವಾಜಿ ಫೋಟೊ ಹಾಕದಿದ್ದರೆ ಕರಾವಳಿ ಮರಾಠಿ ಸಮಾವೇಶಕ್ಕೆ ಬಹಿಷ್ಕಾರ ಹಾಕುತ್ತೇವೆ’ ಎಂದು ಹೇಳಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಉಮೇಶ ನಾಯ್ಕ್‌ನ ಹೇಳಿಕೆ ವೈರಲ್ ಆಗುತ್ತಿದ್ದಂತೆ ಉಡುಪಿ ಜಿಲ್ಲಾ ದಲಿತ ಸಂಘರ್ಷ ಸಮಿತಿ ಆತನನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಅನುಪಸ್ಥಿತಿಯಲ್ಲಿ ಉಡುಪಿ ಪೊಲೀಸ್ ಉಪಾಧೀಕ್ಷಕ ಡಿ.ಟಿ. ಪ್ರಭು ಅವರಿಗೆ ಮನವಿ ಅರ್ಪಿಸಿ ಒತ್ತಾಯಿಸಿತ್ತು. ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್, ಶಾಮರಾಜ ಬಿರ್ತಿ, ಮಂಜುನಾಥ ಗಿಳಿಯಾರು, ಶಾಮಸುಂದರ ತೆಕ್ಕಟ್ಟೆ, ಕುಮಾರ್ ಕೋಟ, ಹರಿಶ್ಚಂದ್ರ ಕೆ.ಡಿ., ಶಿವಾನಂದ ಬಿರ್ತಿ, ಶಿವಾನಂದ ಮೂಡಬೆಟ್ಟು ಮುಂತಾದವರು ನಿಯೋಗದಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X