Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮನೆಮನೆಯಲ್ಲೂ ಅಂಬೇಡ್ಕರ್ ಭಾವಚಿತ್ರ...

ಮನೆಮನೆಯಲ್ಲೂ ಅಂಬೇಡ್ಕರ್ ಭಾವಚಿತ್ರ ಇಡಬೇಕು: ಶರತ್ ಕುಮಾರ್

► 77ನೇ ಸಂವಿಧಾನ ಅಂಗೀಕಾರ ದಿನಾಚರಣೆ ► ತಲ್ಲೂರಿನಿಂದ ಕಾವ್ರಾಡಿವರೆಗೆ ಅಹಿಂದ ಜಾಗೃತಿ ರಥಯಾತ್ರೆ

ಯೋಗೀಶ್ ಕುಂಭಾಸಿ/ವಾರ್ತಾಭಾರತಿಯೋಗೀಶ್ ಕುಂಭಾಸಿ/ವಾರ್ತಾಭಾರತಿ26 Nov 2026 10:13 PM IST
share
ಮನೆಮನೆಯಲ್ಲೂ ಅಂಬೇಡ್ಕರ್ ಭಾವಚಿತ್ರ ಇಡಬೇಕು: ಶರತ್ ಕುಮಾರ್

ಕುಂದಾಪುರ, ನ.26: ಪ್ರಜ್ಞೆ, ಪರಿವರ್ತನೆ, ಸಮಾನತೆ ಹಾಗೂ ಸ್ವತಂತ್ರ ರಾಜ್ಯಾಧಿಕಾರದ ಆಶಯದೊಂದಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮಘರ್ಜನೆ) ಉಡುಪಿ ಜಿಲ್ಲಾ ಸಮಿತಿಯ ಆಶ್ರಯದಲ್ಲಿ, ಸಂಸ್ಥಾಪಕ ರಾಜ್ಯಾಧ್ಯಕ್ಷ ಉದಯ್ ಕುಮಾರ್ ತಲ್ಲೂರು ನೇತೃತ್ವದಲ್ಲಿ ನ.26ರಂದು 77ನೇ ಸಂವಿಧಾನ ಅಂಗೀಕಾರ ದಿನಾಚರಣೆಯ ಸವಿನೆನಪಿಗಾಗಿ ತಲ್ಲೂರಿನಿಂದ ಕಾವ್ರಾಡಿವರೆಗೆ ’ಅಹಿಂದ ಜಾಗೃತಿ ರಥಯಾತ್ರೆ’ ಹಾಗೂ ಕಾವ್ರಾಡಿಯಲ್ಲಿ ಬಹಿರಂಗ ಸಭೆಯನ್ನು ಆಯೋಜಿಸಲಾಗಿತ್ತು.

ಸಂವಿಧಾನದ ಮಹತ್ವ, ಸಾಮಾಜಿಕ ನ್ಯಾಯ, ಸಮಾನತೆ, ಶಿಕ್ಷಣ, ಮೀಸಲಾತಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆ ಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಈ ಜಾಗೃತಿ ರಥಯಾತ್ರೆಗೆ ಗ್ರಾಮ ಗ್ರಾಮಗಳಲ್ಲಿಯೂ ಅಭೂತಪೂರ್ವ ಸ್ವಾಗತ ದೊರೆಯಿತು.

ತಲ್ಲೂರು ಜಂಕ್ಷನ್‌ನಲ್ಲಿ ಆಯೋಜಿಸಿದ್ದ ರಥಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಕೆಡಿಪಿ ಸದಸ್ಯ ಹಾಗೂ ಪಂಚಗಂಗಾ ಸಹಕಾರ ಸಂಘದ ಉಪಾಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಅಂಬೇಡ್ಕರ್ ಅವರ ಭಾವಚಿತ್ರ ಪ್ರತಿಯೊಂದು ಮನೆಯಲ್ಲಿಯೂ ಇರಬೇಕು. ಸಂವಿಧಾನ ಅಂಗೀಕಾರ ದಿನವನ್ನು ಪ್ರತಿಯೊಬ್ಬ ಭಾರತೀಯನೂ ಹಬ್ಬದಂತೆ ಆಚರಿಸಬೇಕು ಎಂದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ವ್ಯವಸ್ಥಾಪಕ ಗುರುಮೂರ್ತಿ, ತಲ್ಲೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮಾಶಂಕರ್, ಸಂಜೀವಿನಿ ಸಂಘದ ಅಧ್ಯಕ್ಷೆ ಜಯಲಕ್ಷ್ಮಿ ಹಾಗೂ ತಂಡದ ಸದಸ್ಯರು, ಅಂಗನವಾಡಿ ಶಿಕ್ಷಕಿಯರಾದ ಜ್ಯೋತಿ, ಜಯಲಕ್ಷ್ಮಿ , ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಸಂಜು ದೇವಾಡಿಗ, ಕೃಷ್ಣ ಪೂಜಾರಿ, ರಾಧಾಕೃಷ್ಣ ಶೇರುಗಾರ್ ಉಪಸ್ಥಿತರಿದ್ದರು. ದೀಪಾ ಶೆಟ್ಟಿ ಸಂವಿಧಾನದ ಪೀಠಿಕೆಯನ್ನು ವಾಚಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಉದಯ್ ಕುಮಾರ ತಲ್ಲೂರು ಮಾತನಾಡಿ, ಮಹಿಳೆಯರ ಹಕ್ಕುಗಳಿಗಾಗಿ ಅಂಬೇಡ್ಕರ್ ನಡೆಸಿದ ಹೋರಾಟ, ಸಾಮಾಜಿಕ ನ್ಯಾಯ, ಜನಸಂಖ್ಯೆಗೆ ಅನುಗುಣವಾದ ಪ್ರಾತಿನಿಧ್ಯ ಹಾಗೂ ಮೀಸಲಾತಿಯ ಮಹತ್ವವನ್ನು ಎಳೆಎಳೆಯಾಗಿ ವಿವರಿಸಿದರು.

ತಲ್ಲೂರು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ದೀಪ್ತಿ ಸತೀಶ್ ಅವರು ನೀಲಿ ಧ್ವಜವನ್ನು ಬೀಸುವ ಮೂಲಕ ಅಹಿಂದ ಜಾಗೃತಿ ರಥಯಾತ್ರೆಗೆ ಚಾಲನೆ ನೀಡಿದರು.

Tags

AmbedkarportraithomeSharath Kumar
share
ಯೋಗೀಶ್ ಕುಂಭಾಸಿ/ವಾರ್ತಾಭಾರತಿ
ಯೋಗೀಶ್ ಕುಂಭಾಸಿ/ವಾರ್ತಾಭಾರತಿ
Next Story
X