Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜಿ.ರಾಜಶೇಖರ್ ಸ್ಮಾರಕ ಜ್ಞಾನ ವೇತನ -2023...

ಜಿ.ರಾಜಶೇಖರ್ ಸ್ಮಾರಕ ಜ್ಞಾನ ವೇತನ -2023 ಘೋಷಣೆ

ವಾರ್ತಾಭಾರತಿವಾರ್ತಾಭಾರತಿ15 Sept 2023 8:03 PM IST
share
ಜಿ.ರಾಜಶೇಖರ್ ಸ್ಮಾರಕ ಜ್ಞಾನ ವೇತನ -2023 ಘೋಷಣೆ

ಉಡುಪಿ, ಸೆ.15: ವರ್ಷದ ಹಿಂದೆ ಅಗಲಿದ ಚಿಂತಕ, ಸಾಮಾಜಿಕ ಚಳುವಳಿಗಾರ ಜಿ.ರಾಜಶೇಖರ್ ಅವರ ಸೆ.16ರ ಹುಟ್ಟುಹಬ್ಬದ ಪ್ರಯುಕ್ತ ಮೊದಲ ‘ಜಿ.ರಾಜಶೇಖರ್ ಸ್ಮಾರಕ ಜ್ಞಾನವೇತನ’ವನ್ನು ಆರಂಭಿಸಲಾಗುತ್ತಿದೆ.

ಪ್ರಸ್ತುತ ಜ್ಞಾನವೇತನವು, ಕಾಲದ ಗುಣಗ್ರಾಹಿಯಾದ ಜಿ.ರಾಜಶೇಖರ್ ಅವರ ’ಕಾಗೋಡು ಸತ್ಯಾಗ್ರಹ’ದಂತಹ ಕೃತಿಗಳನ್ನು ಕಟ್ಟಲು ಕನ್ನಡದ ಯುವ ಬರಹಗಾರರು, ಸಂಶೋಧಕರು ಹಾಗು ಪತ್ರಕರ್ತರಿಗೆ ಸ್ಪೂರ್ತಿದಾಯಕವಾಗಲಿ ಎಂಬುದು ಇದರ ಉದ್ದೇಶವಾಗಿದೆ.

ಜ್ಞಾನ ವೇತನದ ವಿವರ: ಒಟ್ಟು 80,000 ರೂ. ಮೊತ್ತದ ಜ್ಞಾನವೇತನವನ್ನು, 23-35 ವಯಸ್ಸಿನ ಗುಂಪಲ್ಲಿ ಬರುವ ಆಯ್ದ ಒಬ್ಬ ಅಭ್ಯರ್ಥಿಗೆ, ಆರು ತಿಂಗಳ ಅವಧಿಯಲ್ಲಿ ಹಂತ ಹಂತವಾಗಿ ವಿತರಿಸಲಾಗುವುದು. ವೇತನ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಸಂಶೋಧನೆಯ ವಿಷಯ ಹಾಗು ಸಂಶೋಧನಾ ವಿಧಾನವನ್ನು ಒಳಗೊಂಡ ಸಂಶೋಧನಾ ಪ್ರಸ್ತಾವನೆ ಯನ್ನು ಅ.16ರೊಳಗೆ ಸಲ್ಲಿಸ ಬೇಕು. ಶೈಕ್ಷಣಿಕ ಕ್ಷೇತ್ರದಲ್ಲಿ ನುರಿತರಾಗಿರುವವರು, ಅನುಭವಿ ಲೇಖಕರನ್ನು ಒಳಗೊಂಡ ಸಲಹಾ ಮಂಡಳಿಯು ಒಬ್ಬ ಅಭ್ಯರ್ಥಿಯನ್ನು ವೇತನಕ್ಕೆ ಆಯ್ಕೆ ಮಾಡುತ್ತದೆ.

ಆಯ್ಕೆಯಾದ ಅಭ್ಯರ್ಥಿಯು ಸಂಶೋಧನೆಗೆ ಆಯ್ದುಕೊಂಡ ಚಾರಿತ್ರಿಕ ವಿಷಯದ ಮೇಲೆ, ಸಾಕ್ಷಿ-ಪುರಾವೆ ಹಾಗು ಆಳ-ಅಗಲ ಉಳ್ಳ ವರದಿಗಳ ಆಧಾರದಲ್ಲಿ ಸಂಶೋಧನೆ ನಡೆಸಬೇಕು. ಸಲಹಾ ಮಂಡಳಿಯು ಸಂಶೋಧನಾ ಕಾರ್ಯದಲ್ಲಿ ಮಾರ್ಗದರ್ಶನ ನೀಡುತ್ತದೆ. ಮಹಿಳೆ, ಕಡೆಗಣಿತ ಜಾತಿ ಪಗಂಡ ಹಾಗೂ ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತ್ಯ ನೀಡಲಾಗುವುದು.

ಸೂಚಿತ ಸಂಶೋಧನಾ ವಲಯಗಳು: ಮತೀಯ ದ್ವೇಷ/ಕೂಡುಕಟ್ಟು/ ಸಹಬಾಳ್ವೆ ಇವುಗಳ ಸಾಮಾಜಿಕ- ಸಾಂಸ್ಕತಿಕ ಬೇರುಗಳು; ಇಂದಿನ ವಾಸ್ತವಿಕ ಸ್ಥಿತಿಗತಿ- ಸ್ಥಳ-ವಿದ್ಯಮಾನ ಅಧ್ಯಯನ. ಜಾತಿ ಯಜಮಾನಿಕೆ, ಅಸಮಾನತೆ, ಅನ್ಯಾಯಗಳ ಮುಂದುವರಿಕೆಯ ಸಾಮಾಜಿಕ-ರಾಜಕೀಯ ಕಾರಣಗಳು- ಸ್ಥಳ-ವಿದ್ಯಮಾನ ಅಧ್ಯಯನ.

ಕಡೆಗಣಿತ ಸಮುದಾಯಗಳ( ಸ್ಥಳ, ಸಮುದಾಯ ನಿರ್ದಿಷ್ಟತೆ ಇರಬೇಕು) ಪ್ರತಿರೋಧ ಚರಿತ್ರೆ ಮತ್ತೂ ಪ್ರಸ್ತುತ ಪರಿಸ್ಥಿತಿಯ ನೈಜತೆ. ಆಧುನಿಕ ಸಾಂಸ್ಥಿಕ ವ್ಯವಸ್ಥೆಗಳ(ಕಾನೂನು, ನ್ಯಾಯಿಕ, ಆರೋಗ್ಯ, ಶಿಕ್ಷಣ, ಮಹಿಳೆ-ಮಕ್ಕಳ ಕಲ್ಯಾಣ ಇತ್ಯಾದಿ) ವೈಫಲ್ಯದ ಕಾರ್ಯ-ಕಾರಣ -ಪರಿಣಾಮ. ಶ್ರಮಿಕರ ಆಂತರಿಕ ವಲಸೆ: ಸಾಮಾಜಿಕ ಕಾರ್ಯ-ಕಾರಣ, ವಲಸೆಯ ನಕ್ಷೆ, ಪ್ರದೇಶ ಭಿನ್ನತೆ, ಹೊರಗಿಡುವಿಕೆ, ಕಡೆಗಣಿಸುವಿಕೆ, ಸಾಮಾಜಿಕ ಪರಿಣಾಮಗಳು.

‘ಕಡೆಗಣಿತ ಸಮುದಾಯಗಳ ಕಲ್ಯಾಣಕ್ಕಾಗಿ ವಿಜ್ಞಾನ ತಂತ್ರಜ್ಞಾನ- ವರ್ತಮಾನದ ಸ್ಥಿತಿಗತಿ, ಎದುರಿಸಬೇಕಾದ ಸವಾಲುಗಳು, ಸಾಗಬೇಕಾದ ಹಾದಿ. ಜೀವಸಂಕುಲ, ಪರಿಸರ ಮತ್ತು ಮಾನವ ಅಸ್ತಿತ್ವದ ಸಮಸ್ಯೆಗಳು. ಈ ಸೂಚಿತ ವಿಷಯಗಳಲ್ಲದೆ ಸಂಶೋಧನೆಗೆ ಅರ್ಹವಾದ ಸಾಮಾಜಿಕ ಕಾಳಜಿಯ/ಕುತೂಹಲಕರ ವಸ್ತುಗಳಿಗೂ ಅವಕಾಶವಿದೆ. ಸಲಹಾ ಸಮಿತಿಯ ಆಯ್ಕೆಯೇ ಅಂತಿಮವಾಗಿರುತ್ತದೆ.

ಆಯ್ಕೆಯಾದ ಸಂಶೋಧನಾ ವರದಿಯನ್ನು ಅಂತಿಮವಾಗಿ ಪುಸ್ತಕ ರೂಪದಲ್ಲಿ ಹೊರತರಲಾಗುವುದು. ಪ್ರಸ್ತಾವನೆಯನ್ನು ಇಮೇಲ್ ಐಡಿ-grskksv@gmail.comಗೆ ಕಳುಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಬರಹಗಾರರಾದ ಎಚ್.ಎಸ್.ಅನುಪಮಾ, ರಹಮತ್ ತರೀಕೆರೆ, ಕವಿ ರಘುನಂದನ, ಮಾಧ್ಯಮ ತಜ್ಞ ಎನ್‌ಎಎಂ ಇಸ್ಮಾಯಿಲ್, ಹಿರಿಯ ಪತ್ರಕರ್ತ ಡಿ.ಉಮಾಪತಿ, ಸಹಸಂಪಾದಕ ಕುಂಟಾಡಿ ನಿತೇಶ್, ಹಿರಿಯ ಚಿಂತಕ ಪ್ರೊ.ಕೆ.ಫಣಿರಾಜ್ ಸಲಹಾ ಮಂಡಳಿಯ ಪ್ರಮುಖರಾಗಿದ್ದಾರೆ.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X