Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಂಜೀವಿನಿ ಒಕ್ಕೂಟದ ಮತ್ತೊಂದು ಅಕ್ರಮ...

ಸಂಜೀವಿನಿ ಒಕ್ಕೂಟದ ಮತ್ತೊಂದು ಅಕ್ರಮ ಬಯಲು| ಹೆಬ್ರಿಯಲ್ಲಿ ಮೂರನೇ ಪ್ರಕರಣ ದಾಖಲು: 28ಲಕ್ಷ ರೂ. ವಂಚನೆ

ವಾರ್ತಾಭಾರತಿವಾರ್ತಾಭಾರತಿ8 Aug 2026 7:32 PM IST
share
ಸಂಜೀವಿನಿ ಒಕ್ಕೂಟದ ಮತ್ತೊಂದು ಅಕ್ರಮ ಬಯಲು| ಹೆಬ್ರಿಯಲ್ಲಿ ಮೂರನೇ ಪ್ರಕರಣ ದಾಖಲು: 28ಲಕ್ಷ ರೂ. ವಂಚನೆ

ಉಡುಪಿ, ಆ.8: ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದಿಂದ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಕಳೆದ ಒಂದು ತಿಂಗಳಲ್ಲಿ ದಾಖಲಾದ ಮೂರು ಪ್ರಕರಣಗಳಲ್ಲಿ ಒಟ್ಟು 84.69ಲಕ್ಷ ರೂ. ಹಣವನ್ನು ಮೋಸ ಮಾಡಿರುವುದು ವರದಿಯಾಗಿದೆ.

ಮಹಿಳೆಯರ ಆರ್ಥಿಕ ಸಶಕ್ತೀಕರಣ, ಸ್ವಾವಲಂಬನೆ ಮತ್ತು ಉಳಿತಾಯ ಸಂಸ್ಕೃತಿ ಬೆಳೆಸುವ ಉದ್ದೇಶದಿಂದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಆರಂಭಿಸಲಾದ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟ ಗಳಲ್ಲಿ ನಡೆಯುತ್ತಿರುವ ವಂಚನೆ ಜಾಲಗಳು ಒಂದೊಂದಾಗಿಯೇ ಬೆಳಕಿಗೆ ಬರುತ್ತಿವೆ. ಈ ಸಂಬಂಧ ಹಿರಿಯಡ್ಕ, ಕೋಟ ಹಾಗೂ ಹೆಬ್ರಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ. ಈವರೆಗೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹೆಬ್ರಿ ಪ್ರಕರಣ: ಧನಲಕ್ಷ್ಮೀ ಸಂಜಿವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಾಗಿದ್ದ ನಂದಿನಿ, 2020ರಿಂದ 2026ರವರೆಗೆ ಒಕ್ಕೂಟ ಸದಸ್ಯತ್ವ ಹೊಂದಿರುವ ವಿವಿದ ಸ್ವಸಹಾಯ ಸಂಘದ ಸದಸ್ಯರು ಗಳು ಪಡೆದು ಕೊಂಡ ಸಾಲವನ್ನು ಒಕ್ಕೂಟಕ್ಕೆ ಮರು ಪಾವತಿ ಮಾಡಿದ್ದರೂ ಕೂಡ ಸಾಲದ ಹಣವನ್ನು ಒಕ್ಕೂಟದ ಖಾತೆಗೆ ಜಮಾ ಮಾಡಿರಲಿಲ್ಲ.

ಆಕೆ ಎರಡೆರಡು ಖಾತೆ ಪುಸ್ತಕಗಳನ್ನು ಹಾಗೂ ರಶೀದಿ ಪುಸ್ತಕಗಳನ್ನು ನಿರ್ವಹಣೆ ಮಾಡಿ ಹಾಗೂ ನಕಲಿ ದಾಖಲೆ ಗಳನ್ನು ಸೃಷ್ಟಿಸಿ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ಅವರ ನಕಲಿ ಸಹಿಗಳನ್ನು ಮಾಡಿ ಒಟ್ಟು 28,19,489ರೂ. ಹಣವನ್ನು ತನ್ನ ಸ್ವಂತಕ್ಕೆ ಬಳಸಿಕೊಂಡು ಮೋಸ ಮಾಡಿರುವುದಾಗಿ ಹೆಬ್ರಿ ತಾಲೂಕು ಸಂಜೀವಿನಿ ಯೋಜನೆಯ ಕಾರ್ಯಕ್ರಮ ವ್ಯವಸ್ಥಾಪಕಿ ಉಮಾ ನೀಡಿದ ದೂರಿನಂತೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೆರೆಡು ಪ್ರಕರಣಗಳು: ಎರಡು ದಿನಗಳ ಹಿಂದೆಯಷ್ಟೇ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಮೃದ್ದಿ ಸಂಜೀವಿನಿ ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮುಖ್ಯ ಬರಹಗಾರರಾಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ಅಶ್ವಿನಿ ಒಕ್ಕೂಟದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಕೋಶಾಧಿಕಾರಿ ಅವರ ಸಹಿ ಮತ್ತು ಸೀಲನ್ನು ನಕಲಿ ಮಾಡಿ ಹಾಗೂ ಬೇರೆ ಬೇರೆ ಸ್ವಸಹಾಯ ಸಂಘದ ಸದಸ್ಯರ ನಕಲಿ ಸಹಿಯನ್ನು ಮಾಡಿ ಒಟ್ಟು 33,50,000ರೂ. ಹಣವನ್ನು ದುರುಪಯೋಗ ಮಾಡಿಕೊಂಡು ಮೋಸ ಮಾಡಿದ್ದಾರೆಂದು ದೂರಲಾಗಿತ್ತು.

ಅದೇ ರೀತಿ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ದಲ್ಲಿ ಪೆರ್ಡೂರು ಪದ್ಮ ಕಮಲ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಾಗಿದ್ದ ಸುಗಂಧಿ, ತನ್ನ ಪತಿ ಸಂತೋಷ ಜೊತೆ ಸೇರಿಕೊಂಡು, ಒಕ್ಕೂಟದ ಒಟ್ಟು 23,00,000ರೂ. ಹಣವನ್ನು ತಮ್ಮ ಸ್ವಂತಕ್ಕೆ ಬಳಸಿಕೊಂಡು ವಂಚನೆ ಮಾಡಿರುವುದಾಗಿ ದೂರಲಾಗಿದೆ. ಈ ಸಂಬಂಧ ದಂಪತಿಯನ್ನು ಪೊಲೀಸರು ಬಂಧಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X