Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗಂಗೊಳ್ಳಿ: ಮ್ಯಾಂಗನೀಸ್ ವಾರ್ಫ್...

ಗಂಗೊಳ್ಳಿ: ಮ್ಯಾಂಗನೀಸ್ ವಾರ್ಫ್ ನಿವಾಸಿಗಳಿಂದ ಸಚಿವೆಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ17 Nov 2023 9:32 PM IST
share
ಗಂಗೊಳ್ಳಿ: ಮ್ಯಾಂಗನೀಸ್ ವಾರ್ಫ್ ನಿವಾಸಿಗಳಿಂದ ಸಚಿವೆಗೆ ಮನವಿ

ಗಂಗೊಳ್ಳಿ (ಕುಂದಾಪುರ): ಕಳೆದ ಸೋಮವಾರ ಬೋಟು ಅಗ್ನಿ ದುರಂತ ಸಂಭವಿಸಿದ ಗಂಗೊಳ್ಳಿಯ ಮ್ಯಾಂಗನೀಸ್ ವಾರ್ಫ್ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯರು ಇಂದು ಇಲ್ಲಿಗೆ ಭೇಟಿ ನೀಡಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರಿಗೆ ಮನವಿ ಯೊಂದನ್ನು ಅರ್ಪಿಸಿ ಈ ಪ್ರದೇಶದಲ್ಲಿ ಯಾವುದೇ ರಾಸಾಯನಿಕ ವಸ್ತುಗಳನ್ನು ಬಳಸಿ ಯಾಂತ್ರಿಕ ದೋಣಿಯ ನಿರ್ಮಾಣಕ್ಕೆ ಅವಕಾಶ ನೀಡದಂತೆ ಒತ್ತಾಯಿಸಿದರು.

ಗಂಗೊಳ್ಳಿ ಮ್ಯಾಂಗನೀಸ್ ವಾರ್ಫ್‌ನಲ್ಲಿ ಕಳೆದ ತುಂಬಾ ಸಮಯದಿಂದ ಕೊಳಚೆ ತ್ಯಾಜ್ಯವನ್ನು ವಿಲೇವಾರಿ ಮಾಡದೇ ಸ್ಥಳೀಯ ನಾಗರಿಕರಿಗೆ ತುಂಬಾ ತೊಂದರೆಯಾಗಿದೆ. ಅಲ್ಲದೇ ಇಲ್ಲಿ ರಾಸಾಯನಿಕ ಮಿಶ್ರಿತ ಯಾಂತ್ರೀಕೃತ ದೋಣಿಯನ್ನು ನಿರ್ಮಿಸುತಿದ್ದು, ಈ ರಾಸಾಯನಿಕ ದ್ರಾವಣದಿಂದ ಸ್ಥಳೀಯ ನಿವಾಸಿಗಳಲ್ಲಿ ಚರ್ಮದ ಹಾಗೂ ಮಕ್ಕಳಲ್ಲಿ ಅಸ್ತಮಾದಂಹ ರೋಗಗಳು ಕಾಣಿಸಿಕೊಂಡಿದೆ. ಅಲ್ಲದೇ ರಾಸಾಯನಿಕ ಮಿಶ್ರಣದ ವಿಷಾನಿಲದಿಂದ ವಯೋವೃದ್ಧರು ಹಾಗೂ ಮಕ್ಕಳಿಗೆ ಶ್ವಾಸಕೋಶಕ್ಕೆ ಸಂಬಂಧಪಟ್ಟ ದಮ್ಮು, ಕೆಮ್ಮು ಹಾಗೂ ಉಬ್ಬಸ ಕಾಯಿಲೆಯೂ ಕಂಡುಬಂದಿದೆ ಎಂದು ಮಹಿಳೆಯರು ದೂರಿದರು.

ಹೀಗಾಗಿ ಬಂದರು ಇಲಾಖೆಗೆ ಸೇರಿದ ಈ ಜಾಗದಲ್ಲಿ ಯಾವುದೇ ರೀತಿಯ ರಾಸಾಯನಿಕ ಬಳಸಿ ಬೋಟನ್ನು ನಿರ್ಮಿಸದಂತೆ ನೋಡಿಕೊಳ್ಳಬೇಕು ಎಂದು ಅವರು ಸಚಿವರನ್ನು ಒತ್ತಾಯಿಸಿದರು. ಇದೇ ಜಾಗದಲ್ಲಿ ಬೋಟ್ ನಿರ್ಮಾಣ ಕಾರ್ಯವೂ ನಡೆಯುತಿದ್ದು, ಇಲ್ಲಿ ದೂಳು ಹಾಗೂ ಇತರ ವಸ್ತುಗಳಿಂದ ಪಕ್ಕದ ನಿವಾಸಿಗರಿಗೆ ತೊಂದರೆಯಾಗುತ್ತಿದೆ ಎಂದವರು ದೂರಿದರು.

ಈ ಮೊದಲೆಲ್ಲಾ ನಿಗದಿ ಪಡಿಸಿದ ಜಾಗದಲ್ಲಿ ಮಾತ್ರ ಬೋಟನ್ನು ಮೇಲಕ್ಕೆಳೆದು ರಿಪೇರಿ ಮಾಡಿ ಮತ್ತೆ ನೀರಿಗೆ ಬಿಡುತಿದ್ದರು. ಈಗ ಮ್ಯಾಂಗನೀಸ್ ವಾರ್ಫ್‌ನ ಎಲ್ಲಾ ಜಾಗದಲ್ಲೂ ಬೋಟನ್ನು ಇಡುತಿದ್ದು, ಅದರ ಅಪಾಯಕಾರಿ ತ್ಯಾಜ್ಯವನ್ನು ವಿಲೇವಾರಿ ಮಾಡದೇ ಅಲ್ಲೇ ಹಾಕುತಿದ್ದು, ಇದರಿಂದ ತ್ಯಾಜ್ಯ ಕೊಳೆತು ಸೊಳ್ಳೆ ಉತ್ಪತ್ತಿಯಾಗಿ ಆನೆಕಾಲು ರೋಗ, ಡೆಂಗಿ, ಮಲೇರಿಯಾದಂಥ ಸಾಂಕ್ರಾಮಿಕ ರೋಗಗಳು ಹರಡುತ್ತಿವೆ ಎಂದವರು ಸಚಿವರ ಗಮನ ಸೆಳೆದರು.

ನ.13ರ ಅಗ್ನಿ ದುರಂತಕ್ಕೆ ಈ ಜಾಗದಲ್ಲಿದ್ದ ರಾಸಾಯನಿಕ ದ್ರಾವಣ ಹಾಗೂ ಇತರ ತ್ಯಾಜ್ಯವಸ್ತುಗಳೇ ಕಾರಣವಾಗಿದೆ ಎಂದೂ ನಿವಾಸಿಗಳು ಮನವಿಯಲ್ಲಿ ದೂರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X