ಶುಶ್ರೂಷಕ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಎ.ಆರ್.ಟಿ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಶನ್ ಸೊಸೈಟಿ ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಶುಶ್ರೂಷಕ ಹುದ್ದೆ -1 ಅನ್ನು ಭರ್ತಿ ಮಾಡಲು ಬಿ.ಎಸ್ಸಿ ನರ್ಸಿಂಗ್ ಅಥವಾ ಜಿ.ಎನ್.ಎಂ ವಿದ್ಯಾರ್ಹತೆ ಹೊಂದಿದ್ದು, ರಾಜ್ಯ ನರ್ಸಿಂಗ್ ಕೌನ್ಸಿಲ್‌ನಲ್ಲಿ ನೋಂದಾಯಿಸಿರುವ, ಕಂಪ್ಯೂಟರ್ ಬಳಕೆಯಲ್ಲಿ ಜ್ಞಾನ ಹೊಂದಿರುವ, ಕ್ಷೇತ್ರ ಮಟ್ಟದಲ್ಲಿ ಪ್ರಮುಖ ಜನಸಂಖ್ಯೆ ಮತ್ತು ಬಾಧಿತ ಸಮುದಾಯಗಳೊಂದಿಗೆ ತೊಡಗಿಸಿಕೊಂಡಿರುವ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಫೆಬ್ರವರಿ 6ರ ಒಳಗೆ ಜಿಲ್ಲಾ ಏಡ್ಸ್ ತಡೆ ಗಟ್ಟುವ ಮತ್ತು ನಿಯಂತ್ರಣ ಘಟಕ, ಅಜ್ಜರಕಾಡು, ಉಡುಪಿ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ಸಂಪರ್ಕಿಸಬಹುದು ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story





