ಅಲ್ಪಸಂಖ್ಯಾತರ ಕಾನೂನು ಪದವೀಧರರಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಉಡುಪಿ, ಆ.8:ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು ಮತ್ತು ಸಿಖ್ಖರು) ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ, ಶಿಷ್ಯವೇತನ ಮಂಜೂರು ಮಾಡಲು ಅರ್ಹ ಆಸಕ್ತ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆ.22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574596ನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story





