ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ, ನ.12: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗೆ ಇಲಾಖೆಯ ಸೌಲಭ್ಯಗಳನ್ನು ತಲುಪಿಸಲು ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 02, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಗಳಲ್ಲಿ ತಲಾ 1ರಂತೆ ನಗರ ಪುನರ್ವಸತಿ ಕಾರ್ಯಕರ್ತರ (ಯು.ಆರ್.ಡಬ್ಲ್ಯೂ) ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 1ರಂತೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ನೇಮಕಾತಿಗಾಗಿ, ಮಾಸಿಕ 10,000 ರೂ. ಗೌರವಧನ ಆಧಾರದಲ್ಲಿ ಸೇವೆ ಸಲ್ಲಿಸಬಯಸುವ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿ.ಆರ್.ಡಬ್ಲ್ಯೂ ನೇಮಕಾತಿಗಾಗಿ ಬಾಕಿ ಇರುವ ಗ್ರಾಪಂಗಳ ವಿವರ: ಉಡುಪಿ ತಾಲೂಕಿನ ಕೆಮ್ಮಣ್ಣು, ಕಡೆಕಾರು ಹಾಗೂ ಮಣಿಪುರ, ಬ್ರಹ್ಮಾವರ ತಾಲೂಕಿನ ಹಾರಾಡಿ, ಕೋಡಿ, ಹೆಗ್ಗುಂಜೆ ಹಾಗೂ ಪಾಂಡೇಶ್ವರ, ಹೆಬ್ರಿ ತಾಲೂಕಿನ ಶಿವಪುರ, ಕಾಪು ತಾಲೂಕಿನ ಬೆಳಪು, ಮಜೂರು ಹಾಗೂ ಹೆಜಮಾಡಿ, ಕುಂದಾಪುರ ತಾಲೂಕಿನ ವಂಡ್ಸೆ ಮತ್ತು ಕೆರಾಡಿ, ಕಾರ್ಕಳ ತಾಲೂಕಿನ ನಿಟ್ಟೆ ಹಾಗೂ ಪಳ್ಳಿ. ಯು.ಆರ್.ಡಬ್ಲ್ಯೂ ನೇಮಕಾತಿಗಾಗಿ ಕುಂದಾಪುರ ಪುರಸಭೆ.
ಎಸೆಸೆಲ್ಸಿ ಉತ್ತೀರ್ಣ/ಅನುತ್ತೀರ್ಣರಾಗಿರುವ, ಶೇ.40ಕ್ಕಿಂತ ಮೇಲ್ಪಟ್ಟು ವಿಕಲತೆ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ ನೀಡಲ್ಪಟ್ಟಿರುವ ವಿಕಲಚೇತನರ ವಿಶಿಷ್ಟ ಗುರುತುಚೀಟಿ ಮತ್ತು ವೈದ್ಯಕೀಯ ಪ್ರಮಾಣ ಪತ್ರ ಹೊಂದಿರುವ ವಿಕಲಚೇತನರು, ತಮ್ಮ ವಾಸ್ತವ್ಯ ದೃಢೀಕರಣ ಪತ್ರ ಹಾಗೂ ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿಗೆ ಡಿಸೆಂಬರ್ 10ರ ಒಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ದೂ.ಸಂಖ್ಯೆ: 0820-2574810, 2574811 ಅಥವಾ ಆಯಾ ತಾಲೂಕು ಪಂಚಾಯತ್ನಲ್ಲಿರುವ ಎಂ.ಆರ್.ಡಬ್ಲ್ಯೂ. (ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು) ರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.







