Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೃಷ್ಣ ಮಠ ಪರಿಸರದಲ್ಲಿ ಕಸ ಸಂಗ್ರಹಕ್ಕೆ...

ಕೃಷ್ಣ ಮಠ ಪರಿಸರದಲ್ಲಿ ಕಸ ಸಂಗ್ರಹಕ್ಕೆ ನಗರಸಭೆಯಿಂದ ವ್ಯವಸ್ಥೆ

ವಾರ್ತಾಭಾರತಿವಾರ್ತಾಭಾರತಿ12 Oct 2023 10:04 PM IST
share
ಕೃಷ್ಣ ಮಠ ಪರಿಸರದಲ್ಲಿ ಕಸ ಸಂಗ್ರಹಕ್ಕೆ ನಗರಸಭೆಯಿಂದ ವ್ಯವಸ್ಥೆ

ಉಡುಪಿ, ಅ.12: ಉಡುಪಿ ನಗರಸಭಾ ವ್ಯಾಪ್ತಿಯ ಶ್ರೀಕೃಷ್ಣಮಠದ ರಾಜಾಂಗಣದ ಪಾರ್ಕಿಂಗ್ ಪ್ರದೇಶದ ಬಳಿ ಇದ್ದ ಕಸದ ಬ್ಲ್ಯಾಕ್‌ಸ್ಪಾಟ್ ಅನ್ನು ತೆರವುಗೊಳಿಸಲಾಗಿದ್ದು, ಅಲ್ಲೀಗ ಕಸಗಳ ಸಂಗ್ರಹಕ್ಕೆ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲಾಗಿದೆ.

ಶ್ರೀಕೃಷ್ಣಮಠಕ್ಕೆ ಬರುವ ಪ್ರವಾಸಿಗರು ಮತ್ತು ಭಕ್ತಾಧಿಗಳು ಘನತ್ಯಾಜ್ಯ ವಸ್ತುಗಳನ್ನು ಮತ್ತು ಅಡಿಗೆ ಮಾಡಿದ ವಸ್ತುಗಳನ್ನು ಅಲ್ಲಲ್ಲಿ ಎಸೆದು ಹೋಗುತ್ತಿದ್ದುದರಿಂದ ಕಸವನ್ನು ಅಲ್ಲೇ ಇರುವ ಕಂಪೌಂಡಿನ ಬಳಿಯಲ್ಲಿ ಕಸವನ್ನು ಮಿಶ್ರಣ ಮಾಡಿ ಸಂಗ್ರಹಿ ಸಲಾಗುತ್ತಿತ್ತು. ಇದನ್ನು ವಾರಕೊಮ್ಮೆ ಅಥವಾ ವಾರಕ್ಕೆ 2 ಬಾರಿ ಸ್ವಚ್ಛ ಮಾಡಲಾಗುತ್ತಿತ್ತು.

ವರ್ಷವಿಡೀ ಭಾರೀ ಸಂಖ್ಯೆಯ ಪ್ರವಾಸಿಗರು ಬರುವಂತಹ ಉಡುಪಿ ನಗರ ಸ್ವಚ್ಛವಾಗಿ ಕಾಣಬೇಕೆಂಬ ದೃಷ್ಟಿಯಿಂದ ಇದೀಗ ನಗರಸಭೆಯ ವತಿಯಿಂದ ಹಸಿಕಸ, ಒಣಕಸ ವಿಂಗಡಣೆ ಮಾಡಿ, ಪ್ರತ್ಯೇಕವಾಗಿ ಸಂಗ್ರಹಿಸಲು ಹಸಿರು ಮತ್ತು ನೀಲಿ ಬಣ್ಣದ ದೊಡ್ಡ ಕಸದ ಡಬ್ಬಿ (ಡಸ್ಟ್‌ಬಿನ್) ಗಳನ್ನು ಇಟ್ಟು ಅದರಲ್ಲಿ ಕಸ ಹಾಕುವಂತೆ ವ್ಯವಸ್ಥೆ ಮಾಡಲಾಗಿದೆ.

ಈ ಬಗ್ಗೆ ನಗರಸಭೆಯ ಸ್ಥಳೀಯ ಸದಸ್ಯ ಗಿರೀಶ್ ಅಂಚನ್, ನಗರಸಭಾ ಪರಿಸರ ಅಭಿಯಂತರೆ ಸ್ನೇಹ ಕೆ.ಎಸ್, ಆರೋಗ್ಯ ನಿರೀಕ್ಷಕಿ ಶಶಿರೇಖಾ, ಮನೋಹರ, ಸ್ಯಾನಿಟರಿ ಸೂಪರ್‌ವೈಸರ್‌ಗಳಾದ ಸುರೇಶ್ ಶೆಟ್ಟಿ, ರಾಜು, ಸುರೇಂದ್ರ, ನಾಗಾರ್ಜುನ ಅವರು ಸ್ವಚ್ಛತಾ ಸಿಬ್ಬಂದಿಗಳಿಗೆ ಹಾಗೂ ಪೌರ ಕಾರ್ಮಿಕರ ಸೂಕ್ತ ಮಾರ್ಗದರ್ಶನಗಳನ್ನು ನೀಡಿದ್ದಾರೆ.

ನೂತನ ಮಾದರಿಯ ಹಸಿಕಸ, ಒಣಕಸ ಡಸ್ಟ್‌ಬಿನ್‌ಗಳನ್ನು ಮಠದ ಪರಿಸರದಲ್ಲಿ ಇರಿಸಿದ್ದು, ಪ್ರವಾಸಿಗರು ಕಸವನ್ನು ಎಲ್ಲೆಂದರಲ್ಲಿ ಎಸೆಯದೇ ಡಸ್ಟ್‌ಬಿನ್‌ಗಳಲ್ಲಿ ಹಾಕಲು ಒಬ್ಬ ಸಿಬ್ಬಂದಿಯನ್ನು ನೇಮಕ ಮಾಡಿ ಪ್ರವಾಸಿಗರಿಗೆ ಘನತ್ಯಾಜ್ಯ ವಸ್ತುಗಳ ಬಗ್ಗೆ ತಿಳುವಳಿಕೆ ನೀಡಲಾಗುತ್ತಿದೆ.

ಇಲ್ಲಿಗೆ ಭೇಟಿ ನೀಡುವ ಪ್ರತಿಯೊಬ್ಬ ಪ್ರವಾಸಿಗರು, ನಾಗರಿಕರು ಘನತ್ಯಾಜ್ಯ ವಸ್ತುಗಳನ್ನು ಮೂಲದಲ್ಲಿ ವಿಂಗಡಿಸಿ ಎಲ್ಲೆಂದರಲ್ಲಿ ಬಿಸಾಡದೆ ಡಸ್ಟ್‌ಬಿನ್‌ಗಳಲ್ಲಿ ಹಾಕಿ ನಗರಸಭೆಯ ವಾಹನಕ್ಕೆ ನೀಡಿ, ಸ್ವಚ್ಛಂದ ಪರಿಸರ ನಿರ್ಮಾಣಕ್ಕೆ ಸಹಕರಿಸುವಂತೆ ನಗರಸಭೆಯ ಪೌರಾಯುಕ್ತರು ಮನವಿ ಮಾಡಿದ್ದಾರೆ.

ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಘನತ್ಯಾಜ್ಯಗಳನ್ನು ವಿಂಗಡಿಸಿ ಡಸ್ಟ್‌ಬಿನ್‌ಗಳಲ್ಲಿ ಹಾಕಲು ಧ್ವನಿವರ್ಧಕ ಮೂಲಕ ಜಾಗೃತಿ ಮೂಡಿಸಲಾ ಗುವುದು ಎಂದು ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

Arrangement
share
ವಾರ್ತಾಭಾರತಿ
ವಾರ್ತಾಭಾರತಿ
Next Story
X