Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ : ಚಿತ್ರ ಕಲಾವಿದ ಕಮಲ್ ಅಹ್ಮದ್...

ಕಾರ್ಕಳ : ಚಿತ್ರ ಕಲಾವಿದ ಕಮಲ್ ಅಹ್ಮದ್ ಮಾಳೇಕೊಪ್ಪ ಅವರಿಗೆ ರಾಷ್ಟ್ರಪತಿ ಗೌರವ

ವಾರ್ತಾಭಾರತಿವಾರ್ತಾಭಾರತಿ20 Aug 2026 2:56 PM IST
share
ಕಾರ್ಕಳ  : ಚಿತ್ರ ಕಲಾವಿದ ಕಮಲ್ ಅಹ್ಮದ್ ಮಾಳೇಕೊಪ್ಪ ಅವರಿಗೆ ರಾಷ್ಟ್ರಪತಿ ಗೌರವ

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ವಾಸ್ತವ್ಯವಿರುವ ಗದಗ ಜಿಲ್ಲೆಯ ಖ್ಯಾತ ಚಿತ್ರಕಲಾವಿದ, ವಿಜಯನಗರ ಗರುಡಾದ್ರಿ ಶೈಲಿಯಿಂದ ಪ್ರಭಾವಿತರಾದ ಕಮಲ್ ಅಹ್ಮದ್ ಮಾಳೇಕೊಪ್ಪ ಅವರಿಗೆ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರತಿಷ್ಠಿತ "ಆರ್ಟಿಸ್ಟ್ ಇನ್ ರೆಸಿಡೆನ್ಸಿ" ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಗೌರವ ದೊರಕಿದೆ.

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ 10 ದಿನಗಳ ಕಾಲ ಆಯೋಜಿಸಲಾದ ಈ ವಿಶೇಷ ಕಾರ್ಯಕ್ರಮದಲ್ಲಿ ಭಾರತದೆಲ್ಲೆಡೆಯ ವಿವಿಧ ಸಾಂಪ್ರದಾಯಿಕ ಕಲಾ ಪ್ರಕಾರಗಳನ್ನು ಪ್ರತಿನಿಧಿಸುವ 12 ಮಂದಿ ಕಲಾವಿದರು ಭಾಗವಹಿಸಿದ್ದರು. ಇದರಲ್ಲಿ ಬನಾರಸ್ ಮ್ಯೂರಲ್, ಥಾಂಕಾ, ನಾಯಕ್, ಕೇರಳ ಮ್ಯೂರಲ್, ಬಸೋಹ್ಲಿ, ಸುರಪುರ ಹಾಗೂ ಮೈಸೂರು ಶೈಲಿಯ ಕಲಾವಿದರು ಸೇರಿದ್ದರು. ಅವರೆಲ್ಲರೂ ರಾಷ್ಟ್ರಪತಿ ಭವನದಲ್ಲೇ ವಾಸ್ತವ್ಯ ಹೂಡಿ ತಮ್ಮ ಕಲಾಕೃತಿಗಳನ್ನು ಪ್ರದರ್ಶಿಸಿದರು.

ಕಮಲ್ ಅಹ್ಮದ್ ಮಾಳೇಕೊಪ್ಪ ಅವರು ಕಳೆದ 3 ದಶಕಗಳಿಂದ ವಿಜಯನಗರ ಗರುಡಾದ್ರಿ ಶೈಲಿಯಿಂದ ಪ್ರಭಾವಿತರಾಗಿ ತಮ್ಮದೇ ಆದ ಒಂದು ಶೈಲಿಯನ್ನು ಕಂಡುಕೊಂಡು ಮಿನಿಯೇಚರ್ ಚಿತ್ರಕಲೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕಮಲ್ ಅಹ್ಮದ್ ಮಾಳೇಕೊಪ್ಪ ಅವರು ರಾಷ್ಟ್ರಪತಿ ಭವನದಲ್ಲಿ ಒಂದು ಕಲಾಕೃತಿಯನ್ನು ರಚಿಸಿದ್ದಾರೆ.

ಅಲ್ಲದೇ ಒಂದು ಕಲಾಕೃತಿಯನ್ನು ಪ್ರದರ್ಶಿಸಿದರು. ರಾಷ್ಟ್ರಪತಿ ಭವನದಲ್ಲಿ ಒಟ್ಟು 2 ಕಲಾಕೃತಿಗಳನ್ನು ಪ್ರದರ್ಶಿಸಿದರು. ಅವುಗಳಲ್ಲಿ 1ನ್ನು ‘ಪಂಚತಂತ್ರ’ ಕಥಾವಸ್ತುವಿನ ಆಧಾರದ ಮೇಲೆ ರಚಿಸಲಾಗಿತ್ತು.

ಇದೇ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಲಾವಿದರೊಂದಿಗೆ ಸಂವಾದ ನಡೆಸಿ, ಅವರ ಕಲಾಕೃತಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಭಾರತದ ಸಾಂಪ್ರದಾಯಿಕ ಕಲಾ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಕಲಾವಿದರ ಕೊಡುಗೆ ಶ್ಲಾಘನೀಯವಾಗಿದೆ ಎಂದು ಶ್ಲಾಘಿಸಿದರು.

"ಆರ್ಟಿಸ್ಟ್ ಇನ್ ರೆಸಿಡೆನ್ಸಿ" ಕಾರ್ಯಕ್ರಮವು ಭಾರತದ ಶ್ರೀಮಂತ ಕಲಾ ಪರಂಪರೆಯನ್ನು ಆಚರಿಸುವ, ದೇಶದ ಸಾಂಪ್ರದಾಯಿಕ ಕಲೆಗಳನ್ನು ಉಳಿಸಿ ಬೆಳೆಸುವ ಹಾಗೂ ಭಾರತದ ಸಾಂಸ್ಕೃತಿಕ ಗುರುತನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆಯೋಜಿಸಲಾದ ವಿಶೇಷ ಕಾರ್ಯಕ್ರಮವಾಗಿದೆ.

ಗದಗ ಜಿಲ್ಲೆಯ ಕಮಲ್ ಅಹ್ಮದ್ ಮಾಳೇಕೊಪ್ಪ ಅವರ ಆಯ್ಕೆ ವಿಜಯನಗರ ಗರುಡಾದ್ರಿಯಿಂದ ಪ್ರಭಾವಿತ ಚಿತ್ರಕಲೆಗೆ ರಾಷ್ಟ್ರೀಯ ಮಟ್ಟದಲ್ಲಿ ಮತ್ತಷ್ಟು ಗೌರವ ಮತ್ತು ಮನ್ನಣೆಯನ್ನು ತಂದುಕೊಟ್ಟಿದೆ.

ಕಮಲ್ ಅಹ್ಮದ್ ಅವರು ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಶಿವಪುರ ಸರ್ಕಾರಿ ಪ್ರೌಢಶಾಲೆಯಲ್ಲಿ 18 ವರ್ಷಗಳ ಕಾಲ ಚಿತ್ರಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿದವರು.

ಕಮಲ್ ಅಹ್ಮದ್ ಅವರ ವಿವಿಧ ಕಲಾಕೃತಿಗಳು ಹೆಬ್ರಿ ಸರ್ಕಾರಿ ಕಚೇರಿ ಕಟ್ಟಡಗಳು, ವಿವಿಧ ಸಂಸ್ಥೆಗಳ ಗೋಡೆಗಳಲ್ಲಿ ಮೂಡಿಬಂದಿವೆ.


"ರಾಷ್ಟ್ರಪತಿ ಭವನದ ಪ್ರತಿಷ್ಠಿತ ಕಾರ್ಯಕ್ರಮಕ್ಕೆ ನನ್ನನ್ನು ಆಯ್ಕೆ ಮಾಡಿರುವುದು ನನಗೆ ಅತ್ಯಂತ ಖುಷಿ ನೀಡಿದೆ. ಇದು ನನ್ನ ಜೀವನದ ಮರೆಯಲಾಗದ ಕ್ಷಣವಾಗಿದೆ. ವಿಜಯನಗರ ಗರುಡಾದ್ರಿ-ಪ್ರೇರಿತ ಚಿತ್ರಕಲೆ ಶೈಲಿಗೆ ರಾಷ್ಟ್ರೀಯ ಮನ್ನಣೆ ಮತ್ತು ಗೌರವವನ್ನು ತಂದಿದೆ. ಇದು ಭಾರತದ ಶ್ರೀಮಂತ ಕಲಾತ್ಮಕ ಪರಂಪರೆಯಲ್ಲಿ ಅದರ ಮಹತ್ವವನ್ನು ಮತ್ತಷ್ಟು ಎತ್ತಿ ತೋರಿಸುತ್ತದೆ."

- ಕಮಲ್ ಅಹ್ಮದ್ ಮಾಳೇಕೊಪ್ಪ.

Tags

artistKamal Ahmed MalekoppaPresidential awardkarkala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X