Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ ನಕಲಿ ವೈದ್ಯರ...

ಉಡುಪಿ ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ: ತಡೆಗಟ್ಟಲು ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ದಾಳಿ

ವಾರ್ತಾಭಾರತಿವಾರ್ತಾಭಾರತಿ16 Dec 2023 7:48 PM IST
share
ಉಡುಪಿ ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ: ತಡೆಗಟ್ಟಲು ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ದಾಳಿ

ಉಡುಪಿ, ಡಿ.16: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿಯನ್ನು ತಡೆಯುವ ಉದ್ದೇಶದೊಂದಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ವಿವಿಧೆಡೆ ಧಿಡೀರ್ ದಾಳಿ ಹಾಗೂ ತಪಾಸಣೆ ಕೈಗೊಂಡರು. ಈ ವೇಳೆ ಹಲವು ಕ್ಲಿನಿಕ್ ಹಾಗೂ ಲ್ಯಾಬ್‌ಗಳ ನಿರ್ವಹಣೆಯಲ್ಲಿ ನ್ಯೂನ್ಯತೆ ಕಂಡು ಬಂದ ಹಿನ್ನೆಲೆಯಲ್ಲಿ ನಕಲಿ ವೈದ್ಯ ತಡೆ ಹಾಗೂ ಕೆ.ಪಿ.ಎಂ.ಇ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಲ್ಯಾಬ್ ಹಾಗೂ ಕ್ಲಿನಿಕ್‌ಗಳನ್ನು ಸೀಝ್ ಮಾಡಲಾಗಿದೆ.

ಉಡುಪಿ ತಾಲೂಕು ಪ್ರಾಧಿಕಾರ ಹಾಗೂ ಆರೋಗ್ಯ ಅಧಿಕಾರಿಗಳ ನೇತೃತ್ವದ ತಂಡವು ಆದಿ ಉಡುಪಿಯ ಧನ್ವಂತರಿ ಕ್ಲಿನಿಕ್‌ನಲ್ಲಿ ಡಾ.ಎ.ಆರ್ ಆಚಾರ್ಯ ಅವರು ಆಯುರ್ವೇದ ಕ್ಲಿನಿಕ್‌ನ ನೋಂದಣಿ ಹೊಂದಿ ಅಲೋಪಥಿ ಪದ್ಧತಿಯ ಚಿಕಿತ್ಸೆ ನೀಡುತ್ತಿದ್ದ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕುಂದಾಪುರ ತಾಲೂಕು ಪ್ರಾಧಿಕಾರ ಮತ್ತು ಆರೋಗ್ಯ ಅಧಿಕಾರಿಗಳ ತಂಡವು ನಾವುಂದದ ನಂಬಿಯಾರ್ ಕ್ಲಿನಿಕ್‌ನಲ್ಲಿ ಡಾ. ಪ್ರಜೀತ್ ಎಸ್. ನಂಬಿಯಾರ್ ಅವರು, ಆಯುರ್ವೇದಿಕ್ ಪದ್ಧತಿಯಲ್ಲಿ ನೋಂದಾವಣೆ ಮಾಡಿಕೊಂಡಿದ್ದು, ಅಲೋಪಥಿಕ್ ಪದ್ಧತಿಯಲ್ಲಿ ಚಿಕಿತ್ಸೆ ನೀಡುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕುಂದಾಪುರ ತಾಲೂಕು ಪ್ರಾಧಿಕಾರ ಹಾಗೂ ಆರೋಗ್ಯ ಅಧಿಕಾರಿಗಳ ತಂಡವು ಉಪ್ಪುಂದದ ಸುಷ್ಮಾ ಕ್ಲಿನಿಕಲ್ ಲ್ಯಾಬ್ ಅನ್ನು ಲತಾ ಸುನೀಲ್ ಕೆ. ಎಂಬವರು ಪರವಾನಿಗೆ ಇಲ್ಲದೇ ನಡೆಸುತ್ತಿರುವುದು ಕಂಡು ಬಂದ ಕಾರಣ ಲ್ಯಾಬ್‌ನ್ನು ಸೀಝ್ ಮಾಡಿ, ಪ್ರಕರಣ ದಾಖಲಿಸಿದೆ.

ಉಡುಪಿ ತಾಲೂಕು ಪ್ರಾಧಿಕಾರ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ನೇತೃತ್ವದ ತಂಡವು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳೊಂದಿಗೆ ಜಂಟಿ ತಪಾಸಣೆ ನಡೆಸಿ, ಆರೂರಿನಲ್ಲಿ ಸಂದೇಶ್ ರಾವ್ ಎಂಬವರು ತಜ್ಞತೆ ಹಾಗೂ ಪರವಾನಿಗೆ ಇಲ್ಲದೆ ಕ್ಲಿನಿಕ್ ನಡೆಸುತ್ತಿರುವುದು ಪತ್ತೆ ಹಚ್ಚಿ ಕ್ಲಿನಿಕ್‌ನ್ನು ಸೀಝ್ ಮಾಡಿ ರಾವ್ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ.

ಕುಂದಾಪುರ ತಾಲೂಕು ಪ್ರಾಧಿಕಾರ ಹಾಗೂ ಆರೋಗ್ಯ ಅಧಿಕಾರಿಗಳ ತಂಡವು ಕುಂದಾಪುರದ ಬಯೋಲಿನ್ ಲ್ಯಾಬ್‌ನಲ್ಲಿ ರಾಜ್ಯದ ನೋಂದಾವಣೆ ಪ್ರಮಾಣ ಪತ್ರವನ್ನು ಹೊಂದಿರದವರು ಲ್ಯಾಬ್ ಟೆಕ್ನಿಷಿಯನ್ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿರುವುದು ಕಂಡುಬಂದ ಕಾರಣ ಎಫ್‌ಐಆರ್‌ನ್ನು ದಾಖಲಿಸಲಾಗಿದೆ.

ಆದುದರಿಂದ ಸಾರ್ವಜನಿಕರು ಜಾಗೃತೆ ವಹಿಸಿ ಕೆ.ಪಿ.ಎಂ.ಇ ಕಾಯ್ದೆ ಅಡಿಯಲ್ಲಿ ನೊಂದಾವಣೆಯಾಗಿರದ ಅಥವಾ ನಕಲಿ ವೈದ್ಯರುಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಬಾರದು. ನಕಲಿ ವೈದ್ಯರ ಬಗ್ಗೆ ಮಾಹಿತಿ ಇದ್ದಲ್ಲಿ ಕುಂದಾಪುರ ಮೊ.ನಂ. 8277505911, ಕಾರ್ಕಳ ಮೊ.ನಂ. 8277505892 ಅಥವಾ ಉಡುಪಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ದೂ.ಸಂಖ್ಯೆ: 0820-2525566, 2536650 ಅನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.












share
ವಾರ್ತಾಭಾರತಿ
ವಾರ್ತಾಭಾರತಿ
Next Story
X