ಗಾಂಜಾ ಮಾರಾಟಕ್ಕೆ ಯತ್ನ: ಓರ್ವನ ಬಂಧನ

ಪಡುಬಿದ್ರಿ, ಸೆ.1: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವನನ್ನು ಪಡುಬಿದ್ರಿ ಪೊಲೀಸರು ನಂದಿಕೂರು ಗ್ರಾಮದ ಕೈಗಾರಿಕಾ ಪ್ರದೇಶದ ಸರ್ವಧಾ ಡಿಸ್ಟಿಲ್ಲರಿ ಕಡೆಗೆ ಹೋಗುವ ರಸ್ತೆಯ ಮೋರಿಯ ಬಳಿ ಸೆ.1ರಂದು ಬೆಳಗ್ಗೆ ಬಂಧಿಸಿದ್ದಾರೆ.
ಅನ್ಸಿಫ್ ಬಂಧಿತ ಆರೋಪಿ. ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಪೊಲೀಸರು, ಆರೋಪಿಯಿಂದ ಒಟ್ಟು 1,725 ಗ್ರಾಂ ಗಾಂಜಾವನ್ನು ವಶಪಡಿಸಿ ಕೊಂಡಿದ್ದಾರೆ. ಇದರ ಮೌಲ್ಯ 77,250ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





