Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಆ.9: ಬನ್ನಂಜೆ ಗೋವಿಂದಾಚಾರ್ಯರ ನವತಿ...

ಆ.9: ಬನ್ನಂಜೆ ಗೋವಿಂದಾಚಾರ್ಯರ ನವತಿ ಜನ್ಮವರ್ಧಂತಿ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ7 Aug 2025 10:23 PM IST
share
ಆ.9: ಬನ್ನಂಜೆ ಗೋವಿಂದಾಚಾರ್ಯರ ನವತಿ ಜನ್ಮವರ್ಧಂತಿ ಸಂಭ್ರಮ

ಉಡುಪಿ, ಆ.7:ಪರ್ಯಾಯ ಪುತ್ತಿಗೆ ಮಠ ಮತ್ತು ಡಾ.ಬನ್ನಂಜೆ ಗೋವಿಂದ ಪಂಡಿತಾಚಾರ್ಯರ ನವತಿ ಜನ್ಮವರ್ಧಂತ್ಯುತ್ಸವ ಸಮಿತಿ ಉಡುಪಿ ಇವರ ಆಶ್ರಯದಲ್ಲಿ ಅಂಬಲಪಾಡಿಯ ಈಶಾವಾಸ್ಯ ಪ್ರತಿಷ್ಠಾನದ ಸಹಯೋಗದಲ್ಲಿ ‘ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯರ ನವತಿ ಜನ್ಮವರ್ಧಂತಿ ಉತ್ಸವ ಕಾರ್ಯಕ್ರಮವನ್ನು ಇದೇ ಆ.9ರಂದು ಸಂಜೆ 5:30ಕ್ಕೆ ಉಡುಪಿ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸ ಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಕೆ. ರಘಂಪತಿ ಭಟ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇಂದ್ರ ತೀರ್ಥರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಿರಿಯ ಯತಿಗಳಾದ ಶ್ರೀಸುಶ್ರೀಂದ್ರತೀರ್ಥರು ಬನ್ನಂಜೆ ಗೋವಿಂದಾಚಾರ್ಯರ ಕೃತಿ ಬಿಡುಗಡೆ ಮಾಡಲಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್ಪಾಲ್ ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಡಾ.ಬನ್ನಂಜೆ ಗೋವಿಂದಪಂಡಿತಾಚಾರ್ಯರು ಈ ದೇಶ ಕಂಡ ಪ್ರಸಿದ್ಧ ಸಂಸ್ಕೃತ ಮತ್ತು ಕನ್ನಡ ವಿದ್ವಾಂಸರು. ಸಂಶೋಧಕ, ಪ್ರವಚನಕಾರರಾಗಿ ಲೋಕ ಪ್ರಸಿದ್ದಿ ಪಡೆದಿದ್ದಾರೆ. ಬಹಳ ವರ್ಷ ಪತ್ರಕರ್ತರೂ, ಪತ್ರಿಕೋದ್ಯಮಿಗಳಾಗಿ ಸೇವೆ ಸಲ್ಲಿಸಿದ ಅಚಾರ್ಯರು ವೇದ ವೇದಾಂತ ಉಪನಿಷತ್ತು ಪುರಾಣ ರಾಮಾಯಣ ಮಹಾಭಾರತ ಭಗವದ್ಗೀತೆ ಮೊದಲಾದ ಭಾರತೀಯ ಅಧ್ಯಾತ್ಮಿಕ ಸಾಹಿತ್ಯಗಳ ಬಗ್ಗೆ ಸಂಶೋಧನೆ, ಅಧ್ಯಯನ ಮಾಡಿದ್ದಾರೆ. 350ಕ್ಕೂ ಅಧಿಕ ಶ್ರೇಷ್ಠ ಕೃತಿಗಳ ರಚನೆ ಮಾಡಿದ್ದಾರೆ ಎಂದರು.

ದೇಶ ವಿದೇಶಗಳಲ್ಲಿ ಅವರು ಸಾವಿರಾರು ಆಧ್ಯಾತ್ಮಿಕ ಉಪನ್ಯಾಸಗಳನ್ನು ನೀಡಿದ್ದು ಈಗಲೂ 23,000 ಗಂಟೆಗಳ ಉಪನ್ಯಾಸಗಳ ಅಡಿಯೋ ವಿಡಿಯೋ ದಾಖಲೆಗಳು ಲಭ್ಯವಿದೆ. ಅವರ ಎಲ್ಲ ಸಾಧನೆಗಳಿಗಾಗಿ ಅವರಿಗೆ ಪದ್ಮಶ್ರೀ, ಹಲವು ವಿವಿಗಳಿಂದ ಗೌರವ ಡಾಕ್ಟರೇಟ್ ಸೇರಿದಂತೆ ಅನೇಕ ಬಿರುದು ಸನ್ಮಾನಗಳು ಲಭಿಸಿವೆ ಎಂದು ತಿಳಿಸಿದರು.

ಪುತ್ತಿಗೆ ಮಠದ ಅಂ.ರಾ.ಕಾರ್ಯದರ್ಶಿ ಎಂ.ಪ್ರಸನ್ನಾಚಾರ್ಯ, ಪ್ರತಿಷ್ಠಾನದ ವಿಶ್ವಸ್ಥರಾದ ಬಾಲಾಜಿ ರಾಘವೇಂದ್ರ ಆಚಾರ್ಯ, ವಿನಯ ಭೂಷಣ ಆಚಾರ್ಯ ಬನ್ನಂಜೆ, ಕೆ.ರಮೇಶ್‌ರಾವ್ ಬೀಡು, ಕೆ.ಪ್ರಸಾದ್ ಉಪಾಧ್ಯಾಯ, ಸಮಿತಿಯ ಪ್ರಧಾನ ಕಾರ್ಯದರ್ಶಿ ವಾಸುದೇವ ಭಟ್ ಪೆರಂಪಳ್ಳಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X