ಉಚ್ಚಿಲ| ರಿಕ್ಷಾ- ಕಾರಿನ ಮಧ್ಯೆ ಅಪಘಾತ: ರಿಕ್ಷಾ ಚಾಲಕನಿಗೆ ಗಾಯ

ಪಡುಬಿದ್ರಿ: ರಿಕ್ಷಾ ಮತ್ತು ಕಾರಿನ ಮಧ್ಯೆ ಸೋಮವಾರ ಸಂಜೆ ವೇಳೆ ಉಚ್ಟಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕರೊಬ್ಬರು ಗಾಯಗೊಂಡ ಬಗ್ಗೆ ವರದಿಯಾಗಿದೆ.
ಗಾಯಗೊಂಡ ರಿಕ್ಷಾ ಚಾಲಕನನ್ನು ಉಚ್ಚಿಲದ ರಫೀಕ್ ಎಂದು ಗುರುತಿಸಲಾಗಿದೆ. ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ರಿಕ್ಷಾಗೆ ಕಾರೊಂದು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಕಾರು ಮತ್ತು ರಿಕ್ಷಾ ಸಂಪೂರ್ಣ ನುಜ್ಜುಗುಜ್ಜಾಗಿದೆ. ತಲೆಗೆ ತೀವ್ರವಾಗಿ ಗಾಯಗೊಂಡ ಚಾಲಕನನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಸ್ಥಳಕ್ಕೆ ಆಗಮಿಸಿರುವ ಪಡುಬಿದ್ರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Next Story







