ಬಾಲ್ಯ ವಿವಾಹ ಶೂನ್ಯ ಸಹಿಷ್ಣುತೆಯ ಗ್ರಾಪಂಗಳಿಗೆ ಪ್ರಶಸ್ತಿ: ಪ್ರಸ್ತಾವನೆ ಆಹ್ವಾನ

ಉಡುಪಿ, ಜ.9: ಬಾಲ್ಯವಿವಾಹ ನಿಷೇಧಕ್ಕೆ ಸಂಬಂಧಿಸಿದಂತೆ ಶೂನ್ಯ ಸಹಿಷ್ಣುತೆ ಹೊಂದಿರುವ ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯತ್‌ಗಳನ್ನು ಗುರುತಿಸಿ, ಉಡುಪಿ ಜಿಲ್ಲೆಯಲ್ಲಿ ಒಂದು ಗ್ರಾಮ ಪಂಚಾಯತಿಗೆ ಪ್ರಶಸ್ತಿ ಯೊಂದಿಗೆ 25,000ರೂ. ಪ್ರೋತ್ಸಾಹಧನ ನೀಡಲು ಆದೇಶವಿದ್ದು, ಅದರಂತೆ 2024-25 ನೇ ಸಾಲಿನಲ್ಲಿ ಬಾಲ್ಯವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯತ್‌ಗಳಿಗೆ ಪ್ರಶಸ್ತಿ ನೀಡುವ ಸಲುವಾಗಿ ನಿಗದಿತ ನಮೂನೆಯಲ್ಲಿ ದಾಖಲಾತಿಗಳೊಂದಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರಸ್ತಾವನೆಗಳನ್ನು ಸಲ್ಲಿಸಲು ಜನವರಿ 23 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಬಿ ಬ್ಲಾಕ್, ಒಂದನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574964ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story





