ಉಡುಪಿ ಸಂಚಾರ ಪೊಲೀಸರಿಂದ ಜಾಗೃತಿ ಕಾರ್ಯಕ್ರಮ

ಉಡುಪಿ : ಉಡುಪಿ ಸಂಚಾರ ಪೊಲೀಸ್ ಠಾಣೆಯ ವತಿಯಿಂದ ನಗರದ ಸಿಟಿ ಬಸ್ ನಿಲ್ದಾಣ ಹಾಗೂ ಬೀಡಿನಗುಡ್ಡೆಯಲ್ಲಿ ವಿಶೇಷ ತಪಾಸಣೆ ಮತ್ತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಟ್ಟಡ ಕಾರ್ಮಿಕರ ಸುರಕ್ಷತೆ ಹಾಗೂ ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಕಟ್ಟಡ ಕಾರ್ಮಿಕರಿಗೆ, ಕಟ್ಟಡ ನಿರ್ಮಾಣ ಸರಕು ಸಾಗಾಟ ವಾಹನಗಳ ಮಾಲಕರಿಗೆ ಮತ್ತು ಚಾಲಕರಿಗೆ ಕಾರ್ಮಿಕರ ಕಾನೂನುಬಾಹಿರ ಸಾಗಾಟ ನಿಷೇಧ, ಸುರಕ್ಷತಾ ಕ್ರಮಗಳ ಪಾಲನೆ, ಸಂಚಾರ ನಿಯಮಗಳ ಕಡ್ಡಾಯ ಪಾಲನೆ ಬಗ್ಗೆ ಸಂಚಾರ ಪೊಲೀಸರು ಜಾಗೃತಿ ಮೂಡಿಸಿದರು.
Next Story




