ಕೊರಂಗ್ರಪಾಡಿ ವ್ಯವಸಾಯಿಕ ಸಹಕಾರಿ ಸಂಘದ ಬೈಲೂರು ಶಾಖೆಯ ವ್ಯವಸ್ಥಾಪಕ ಆತ್ಮಹತ್ಯೆ

ಉಡುಪಿ: ಕೊರಂಗ್ರಪಾಡಿ ವ್ಯವಸಾಯಿಕ ಸಹಕಾರಿ ಸಂಘದ ಬೈಲೂರು ಶಾಖೆಯ ವ್ಯವಸ್ಥಾಪಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ರವಿವಾರ ಅಲೆವೂರಿನಲ್ಲಿ ನಡೆದಿದೆ.
ಮೃತರನ್ನು ಅಲೆವೂರು ನಿವಾಸಿ ಮಂಜೇಶ್ ಕುಮಾರ್(49) ಎಂದು ಗುರುತಿಸಲಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಕೆಲವು ದಿನಗಳ ಹಿಂದೆ ಗುಣಮುಖರಾಗಿ ಸಂಘದ ವ್ಯವಸ್ಥಾಪಕರಾಗಿ ಪದೋನ್ನತಿ ಪಡೆದಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಇವರು ಮರಣ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿದ್ದಾರೆ.
Next Story





