Baindur | ಅಲ್ಯೂಮಿನಿಯಂ ತುಂಡು ಕಾಲಿಗೆ ಬಿದ್ದು ವ್ಯಕ್ತಿ ಮೃತ್ಯು

ಸಾಂದರ್ಭಿಕ ಚಿತ್ರ
ಬೈಂದೂರು : ಅಲ್ಯೂಮಿನಿಯಂ ತುಂಡು ಕಾಲಿಗೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಯಡ್ತರೆ ಗ್ರಾಮದ ಬಂಕೇಶ್ವರ ಕಾವೇರಿ ಮಾರ್ಗ ಎಂಬಲ್ಲಿ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ಸತೀಶ(42) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಜೂ.6ರಂದು ಮಧ್ಯಾಹ್ನ ಮನೆಯಲ್ಲಿ ಅಲ್ಯೂಮಿನಿಯಂ ಕೆಲಸ ಮಾಡುವಾಗ ಅಲ್ಯೂಮಿನಿಯಂ ತುಂಡು ಕಾಲಿಗೆ ಬಿತ್ತೆನ್ನಲಾಗಿದೆ. ಇದರಿಂದ ಸ್ಟೋಕ್ ಹೊಡೆದು ತೀವ್ರವಾಗಿ ಅಸ್ವಸ್ಥಗೊಂಡ ಅವರು, ಮಣಿಪಾಲ ಆಸ್ಪತ್ರೆಯಲ್ಲಿ ಜೂ.8ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




