Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಾರದಲ್ಲಿ ಐದು ದಿನಗಳ ಕೆಲಸ ಜಾರಿಗೆ...

ವಾರದಲ್ಲಿ ಐದು ದಿನಗಳ ಕೆಲಸ ಜಾರಿಗೆ ಆಗ್ರಹಿಸಿ ಬ್ಯಾಂಕ್ ಮುಷ್ಕರ

ವಾರ್ತಾಭಾರತಿವಾರ್ತಾಭಾರತಿ27 Jan 2026 8:45 PM IST
share
ವಾರದಲ್ಲಿ ಐದು ದಿನಗಳ ಕೆಲಸ ಜಾರಿಗೆ ಆಗ್ರಹಿಸಿ ಬ್ಯಾಂಕ್ ಮುಷ್ಕರ

ಉಡುಪಿ: ಬ್ಯಾಂಕಿನಲ್ಲಿ ವಾರದಲ್ಲಿ ಐದು ದಿನಗಳ ಕೆಲಸ ಜಾರಿಗೆ ತರುವಂತೆ ಆಗ್ರಹಿಸಿ ಬ್ಯಾಂಕ್ ಅಧಿಕಾರಿಗಳ ಮತ್ತು ನೌಕರರ ಸಂಘಟನೆಯ ಒಕ್ಕೂಟ ಯುಎಫ್‌ಬಿಯು ನೇತೃತ್ವದಲ್ಲಿ ಮಂಗಳವಾರ ಮುಷ್ಕರ ನಡೆಸಲಾಯಿತು.

ಉಡುಪಿ ಜಿಲ್ಲಾ ಅಖಿಲ ಭಾರತೀಯ ಬ್ಯಾಂಕ್ ಸಂಘ (ಯುಎಫ್‌ಬಿಯು)ಗಳ ಮುಖಂಡರು ಉಡುಪಿ ಕೋರ್ಟ್ ರಸ್ತೆಯ ಕೆನರಾ ಬ್ಯಾಂಕ್ ಶಾಖೆಯ ಮುಂದೆ ಧರಣಿ ನಡೆಸಿದರು. ವಾರದಲ್ಲಿ ಐದು ದಿನ ಮಾತ್ರ ಕೆಲಸದಲ್ಲಿ ತೊಡಗಿ ಸಿಕೊಂಡು ಉಳಿದ ಎರಡು ದಿನ ರಜೆ ಜಾರಿ ಮಾಡಬೇಕೆಂದು ಆಗ್ರಹಿಸಿದರು.

ಧರಣಿಯಲ್ಲಿ ಯುಎಫ್‌ಬಿಐ ಉಡುಪಿ ಜಿಲ್ಲಾ ಸಂಚಾಲಕ ನಾಗೇಶ್ ನಾಯಕ್ ಮಾತನಾಡಿ, ಬ್ಯಾಂಕ್ ನೌಕರರ ದೀರ್ಘ ಕಾಲದ ಪ್ರಮುಖ ಬೇಡಿಕೆಯಾದ ಐದು ದಿನಗಳ ಕೆಲಸ ವಾರ ಜಾರಿಗೆ ಸಂಬಂಧಿಸಿ ಈಗಾಗಲೇ ಲಿಖಿತ ಒಪ್ಪಂದವಾಗಿದ್ದು, ಹಲವು ಸುತ್ತಿನ ಮಾತುಕತೆಗಳು ನಡೆದಿವೆ. ಆದರೂ ಕೇಂದ್ರ ಸರಕಾರದಿಂದ ಈ ಬಗ್ಗೆ ಅಂತಿಮ ಅನುಮೋದನೆ ದೊರೆತಿಲ್ಲ ಎಂದು ದೂರಿದರು.

ಈ ವಿಷಯವನ್ನು ಸೌಹಾರ್ದಯುತವಾಗಿ ಬಗೆಹರಿಸುವ ಉದ್ದೇಶದಿಂದ ಯುಎಫ್‌ಬಿಯು ಹಲವು ಬಾರಿ ರಾಜೀ ಸಂಧಾನ ಸಭೆಗಳಲ್ಲಿ ಭಾಗವಹಿಸಿ ಚರ್ಚೆ ನಡೆಸಿದೆ. ಆದರೆ ಕೇಂದ್ರ ಸರಕಾರದಿಂದ ಯಾವುದೇ ಸ್ಪಷ್ಟ ಭರವಸೆ ಅಥವಾ ಅಂತಿಮ ಅನುಮೋದನೆ ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಈ ಮುಷ್ಕರ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಬ್ಯಾಂಕುಗಳು ಐದು ದಿನ ಕೆಲಸ ನಿರ್ವಹಿಸಿದರೆ ಗ್ರಾಹಕರಿಗೂ ಯಾವುದೇ ಸಮಸ್ಯೆ ಇಲ್ಲದ ಕಾರಣ ಸರಕಾರ ಈ ಕೂಡಲೇ ಈ ಬೇಡಿಕೆ ಈಡೇರಿಸಬೇಕು. ನಮ್ಮ ಬೇಡಿಕೆಗಳು ಕೇವಲ ನೌಕರರಿಗೆ ಮಾತ್ರವಲ್ಲ ಉತ್ತಮ ಬ್ಯಾಂಕಿಂಗ್ ವ್ಯವಸ್ಥೆಗೆ ಅಗತ್ಯವಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಸಚಿನ್ ಶೆಟ್ಟಿ, ರಮೇಶ್, ಸುಪ್ರಿಯಾ, ಹರೀಶ್ ಶೆಟ್ಟಿ, ರವಿಶಂಕರ್, ಪ್ರದೀಪ್ ಕುಮಾರ್, ಮುರಳೀಧರ್, ಮರಿಯೊ ಮಥಾಯಸ್, ಶ್ಯಾಮಲಾ, ವಿಶಾಲ್ ಸಿಂಗ್, ನಿರಂಜನ್ ಆಚಾರ್ಯ, ಸೂರಜ್ ಉಪ್ಪೂರು, ಸೂರಜ್ ಮೊದಲಾದವರು ಉಪಸ್ಥಿತರಿದ್ದರು.

ಈ ಮುಷ್ಕರದಲ್ಲಿ ಜಿಲ್ಲೆಯಾದ್ಯಂತ ಸುಮಾರು 700 ಮಂದಿ ಬ್ಯಾಂಕ್ ನೌಕರರು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.

‘ಪ್ರಸ್ತುತ ಬ್ಯಾಂಕ್ ಸಿಬ್ಬಂದಿಗಳು, ಸಿಬ್ಬಂದಿ ಕೊರತೆ ನಡುವೆ ಬಹುತೇಕ ಎಲ್ಲಾ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಆಧುನಿಕ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಹಣ ಕಟ್ಟಲು, ಹಿಂಪಡೆಯುವ ಸೌಲಭ್ಯಗಳನ್ನು ಎಟಿಎಂನಲ್ಲಿ ಕಲ್ಪಿಸಲಾಗಿದೆ. ಆನ್‌ಲೈನ್ ಬ್ಯಾಂಕಿಂಗ್ ಉಪಯೋಗಿಸಬಹುದಾಗಿದೆ. ಈಗಾಗಲೇ ಕೇಂದ್ರ ಸರಕಾರದ ನೌಕರರು ಇನ್ಸೂರೆನ್ಸ್, ಆರ್‌ಬಿಐ, ಸೇರಿದಂತೆ ಹಲವು ಸಂಸ್ಥೆಗಳಲ್ಲಿ ವಾರದಲ್ಲಿ ಐದು ದಿನ ಮಾತ್ರ ಕೆಲಸವಿದೆ. ಆದರೆ ಸರಕಾರದ ಎಲ್ಲಾ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮತ್ತು ಸಾರ್ವಜನಿಕ ಸೇವೆಯಲ್ಲಿ ನಿರತರಾಗಿರುವ ಬ್ಯಾಂಕ್ ನೌಕರರಿಗೆ ವಾರಪೂರ್ತಿ ಕೆಲಸ ಒತ್ತಡಕ್ಕೆ ಕಾರಣವಾಗುತ್ತದೆ’

-ನಾಗೇಶ್ ನಾಯಕ್, ಸಂಚಾಲಕರು, ಯುಎಫ್‌ಬಿಯು ಉಡುಪಿ

Tags

Bankstrikedemandingimplementation
share
ವಾರ್ತಾಭಾರತಿ
ವಾರ್ತಾಭಾರತಿ
Next Story
X