ಬಂಟಕಲ್ಲು | ಚಿರತೆಯ ಮೃತದೇಹ ಪತ್ತೆ

ಉಡುಪಿ: ಬಂಟಕಲ್ಲು ವಾರ್ಡ್‌ನ ಪಲ್ಕೆ ಸಮೀಪದ ಕಾಡಿನಲ್ಲಿ ಚಿರತೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಎರಡು ಮರಗಳ ನಡುವೆ ಸಿಕ್ಕಿಹಾಕಿಕೊಂಡ ಸ್ಥಿತಿಯಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದ್ದು, ಸುಮಾರು 2–3 ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.
ಸ್ಥಳೀಯರು ಚಿರತೆಯ ಮೃತದೇಹವನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಮಾಹಿತಿ ತಿಳಿದು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ.
ಚಿರತೆಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಮುಂದಿನ ಕಾನೂನು ಹಾಗೂ ಇಲಾಖಾ ಕ್ರಮ ಕೈಗೊಳ್ಳುತ್ತಿದ್ದಾರೆ.
Next Story




