Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೋದಿ ಅವಧಿಯಲ್ಲಿ ಮೊದಲಿಗಿಂತ ಹೆಚ್ಚಿನ...

ಮೋದಿ ಅವಧಿಯಲ್ಲಿ ಮೊದಲಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಗೋಮಾಂಸ ರಫ್ತು: ದಯಾನಂದ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ26 Nov 2025 4:47 PM IST
share
ಮೋದಿ ಅವಧಿಯಲ್ಲಿ ಮೊದಲಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಗೋಮಾಂಸ ರಫ್ತು: ದಯಾನಂದ ಸ್ವಾಮೀಜಿ
ದೇಶದಲ್ಲಿ ಗೋವಂಶ ಜಾನುವಾರು ಹತ್ಯೆ, ಮಾಂಸ ರಫ್ತು ನಿಷೇಧಕ್ಕೆ ಆಗ್ರಹ

ಉಡುಪಿ, ನ.25: ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರ ಸರಕಾರದ ಗೋಮಾಂಸ ರಫ್ತು ಹಾಗೂ ಗೋಹತ್ಯೆ ನಿಷೇಧ ಮಾಡದ ಬಗ್ಗೆ ಟೀಕಿಸಿದ್ದ ನರೇಂದ್ರ ಮೋದಿ, ಮೂರು ಬಾರಿ ಪ್ರಧಾನಿಯಾದರೂ ಇನ್ನೂ ಯಾಕೆ ಗೋಹತ್ಯೆಯನ್ನು ದೇಶದಲ್ಲಿ ನಿಷೇಧ ಮಾಡುತ್ತಿಲ್ಲ. ದುರಂತ ಅಂದರೆ ಮೋದಿ ಅವಧಿಯಲ್ಲಿ ಮೊದಲಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಗೋಮಾಂಸ ರಫ್ತು ಆಗುತ್ತಿದೆ. ಭಾರತ ಗೋಮಾಂಸ ರಫ್ತಿನಲ್ಲಿ ಇಡೀ ಜಗತ್ತಿನಲ್ಲಿಯೇ ಇಂದು ಎರಡನೇ ಸ್ಥಾನದಲ್ಲಿದೆ ಎಂದು ವಿಶ್ವಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ, ಬೆಂಗಳೂರು ವಿಶ್ವ ಗೋರಕ್ಷಾ ಮಹಾಪೀಠದ ದಯಾನಂದ ಸ್ವಾಮೀಜಿ ಟೀಕಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದಿಂದ ಪ್ರತಿನಿತ್ಯ ಲಕ್ಷಾಂತರ ಹಸು, ಕರು, ಎತ್ತು, ಎಮ್ಮೆ, ಕೋಣ ಮುಂತಾದ ಗೋವಂಶ ಪ್ರಾಣಿಗಳನ್ನು ಹತ್ಯೆ ಮಾಡಿ, ಅವುಗಳ ಮಾಂಸ ಮತ್ತು ಚರ್ಮವನ್ನು ವಿದೇಶಗಳಿಗೆ ರಫ್ತು ಮಾಡುತ್ತಿರುವುದು ಕಳವಳಕಾರಿಯಾಗಿದೆ. ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ಸಂಘಪರಿವಾರ ಗೋ ಹತ್ಯೆ ನಿಷೇಧ ಕಾಯಿದೆ ಜಾರಿಗೆ ತರುವಂತೆ ಹೋರಾಟ ಮಾಡಿತ್ತು. ಆದರೆ ಇಂದು ಅದೇ ಆರೆಸ್ಸೆಸ್‌ ವಿಚಾರಧಾರೆಯ ಮೋದಿ ಸರಕಾರ ಇದ್ದರೂ ಈವರೆಗೆ ಕೇಂದ್ರದಲ್ಲಿ ನಿಷೇಧ ಕಾಯಿದೆ ಜಾರಿಗೆ ತಂದಿಲ್ಲ. ಆರೆಸ್ಸೆಸ್‌ ಕೂಡ ಈ ಬಗ್ಗೆ ಮಾತನಾಡುತ್ತಿಲ್ಲ ಎಂದು ದೂರಿದರು.

ಕರ್ನಾಟಕ ಸೇರಿದಂತೆ ದೇಶದ 16 ರಾಜ್ಯಗಳಿಗೆ ಸಂಪೂರ್ಣ ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಬಂದಿದೆ. ಬಿಜೆಪಿ ಸರಕಾರ ಇರುವ ಎಲ್ಲ ರಾಜ್ಯಗಳಲ್ಲಿ ನಿಷೇಧ ಮಾಡಲಾಗಿದೆ. ಆದರೆ ಇವರು ಯಾಕೆ ಕೇಂದ್ರದಲ್ಲಿ ಇದನ್ನು ನಿಷೇಧ ಮಾಡುತ್ತಿಲ್ಲ. ಆದುದರಿಂದ ಉಡುಪಿಗೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಶ್ರೀಕೃಷ್ಣನ ನಾಡಿನಲ್ಲಿ ಈ ಸಂಕಲ್ಪ ಮಾಡಬೇಕು ಈ ಸಂಬಂಧ ಪ್ರಧಾನಿಗೆ ಮನವಿ ಕೂಡ ಸಲ್ಲಿಸಲಾಗುವುದು ಎಂದರು.

ಅಹಿಂಸಾ ತತ್ವ ಬೋಧನೆ ಮಾಡಿದ ನಾವು ಕೋಟ್ಯಂತರ ಜಾನುವಾರುಗಳನ್ನು ಹತ್ಯೆ ಮಾಡಿ ಮಾಂಸ ರಫ್ತು ಮಾಡಿ, ಇಡೀ ಜಗತ್ತನ್ನೇ ಮಾಂಸಹಾರಿ ಮಾಡಲು ಹೊರಟಿದ್ದೇವೆ. ಭಾರತ ದೇಶ ಸಂಸ್ಕೃತಿ, ಪರಂಪರೆಯನ್ನು ಎತ್ತಿ ಹಿಡಿಯುವುದಾಗಿ ಹೇಳುವ ಪ್ರಧಾನಿ ಮೋದಿ, ಗೋವಂಶ ಜಾನುವಾರು ಮಾಂಸ ರಫ್ತು ನಿಲ್ಲಿಸುತ್ತಿಲ್ಲ. ಇನ್ನಾದರೂ ಪ್ರಧಾನಿ ವಿಶೇಷ ಕಾಳಜಿ ವಹಿಸಿ ಮಾಂಸ ರಫ್ತು ನಿಷೇಧ ಕಾಯಿದೆ ಜಾರಿಗೆ ತಂದು, ಭಾರತವನ್ನು ಮಾಂಸ ರಫ್ತು ಮುಕ್ತ ದೇಶ ಎಂಬುದಾಗಿ ಘೋಷಣೆ ಮಾಡಬೇಕು ಎಂದು ದಯಾನಂದ ಸ್ವಾಮೀಜಿ ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X