Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೊರಗರಿಗೆ ಭೂಮಿ ಹಬ್ಬವೇ ನಿಜವಾದ...

ಕೊರಗರಿಗೆ ಭೂಮಿ ಹಬ್ಬವೇ ನಿಜವಾದ ಸ್ವಾತಂತ್ರ್ಯೋತ್ಸವ: ಡಾ.ಸಬಿತಾ

ಉಡುಪಿಯಲ್ಲಿ ಕೊರಗ ಒಕ್ಕೂಟದಿಂದ 15ನೇ ವರ್ಷದ ಭೂಮಿ ಹಬ್ಬ

ವಾರ್ತಾಭಾರತಿವಾರ್ತಾಭಾರತಿ18 Aug 2023 6:46 PM IST
share
ಕೊರಗರಿಗೆ ಭೂಮಿ ಹಬ್ಬವೇ ನಿಜವಾದ ಸ್ವಾತಂತ್ರ್ಯೋತ್ಸವ: ಡಾ.ಸಬಿತಾ

ಉಡುಪಿ, ಆ.18: ಕೊರಗರಿಗೆ ಭೂಮಿ ಹಬ್ಬವೇ ನಿಜವಾದ ಸ್ವಾತಂತ್ರ್ಯೋತ್ಸವ. ಕೀಳರಿಮೆ, ದೌರ್ಜನ್ಯ, ಶೋಷಣೆ, ಕೀಳಾಗಿ ಕಂಡ ಸಮಾಜ ದಿಂದ ಬಿಡುಗಡೆಗೊಂಡು ಹೊರ ಬಂದಿರುವುದೇ ಕೊರಗರಿಗೆ ಸಿಕ್ಕಿರುವ ನಿಜವಾದ ಸ್ವಾತಂತ್ರ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಸಬಿತಾ ಗುಂಡ್ಮಿ ಹೇಳಿದ್ದಾರೆ.

ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ ಕೇರಳ ಇದರ ವತಿಯಿಂದ ಶುಕ್ರವಾರ ಉಡುಪಿ ಪುತ್ತೂರಿನ ಆದಿವಾಸಿ ಸಭಾಭವನದ ಆವರಣದಲ್ಲಿ ಹಮ್ಮಿಕೊಳ್ಳಲಾದ 15ನೇ ವರ್ಷದ ಭೂಮಿ ಹಬ್ಬದಲ್ಲಿ ಅವರು ಹಬ್ಬದ ಸಂದೇಶ ನೀಡಿದರು.

ಹೊರರಾಜ್ಯದ ಬುಡಕಟ್ಟು ಸಮುದಾಯಗಳು ಈಗ ಅನುಭವಿಸುತ್ತಿರುವ ಜೀತಪದ್ಧತಿಯನ್ನು ನಾವು 20ವರ್ಷಗಳ ಹಿಂದೆಯೇ ಇಲ್ಲಿ ಅನುಭವಿಸಿದ್ದೇವೆ. ಕೆಲವರ ಮುಷ್ಠಿಯಿಂದ ಹೊರಗೆ ಬರಲು ಸಾಕಾಷ್ಟು ಶ್ರಮಿಸಿದ್ದೇವೆ. ಈ ಎಲ್ಲ ದೌರ್ಜನ್ಯ ಗಳಿಂದ ಹೊರಗಡೆ ಬಂದು ಶೋಷಣೆಯ ಸಮಾಜವನ್ನು ಮೆಟ್ಟಿನಿಂತು ಶಿಕ್ಷಣ ಪಡೆದು ಇಂದು ಭೂಮಿ ಹಬ್ಬವನ್ನು ಆಚರಿಸುವ ಮಟ್ಟಕ್ಕೆ ಬೆಳೆದಿದ್ದೇವೆ ಎಂದರು.

ಶಿಕ್ಷಣವೇ ಕೊರಗ ಸಮುದಾಯದ ನಿಜವಾದ ಬಲ. ಆದುದರಿಂದ ವಿದ್ಯಾರ್ಥಿಗಳು ಬರವಣಿಗೆಯಲ್ಲಿ ತೊಡಗಿಸಿಕೊಳ್ಳಬೇಕು. ಇತರ ಬುಡಕಟ್ಟು ಸಮುದಾಯಕ್ಕೆ ಹೋಲಿಕೆ ಮಾಡಿದರೆ ಕೊರಗ ಸಮುದಾಯದ ಮಕ್ಕಳು ಹೆಚ್ಚು ಶಿಕ್ಷಣ ಪಡೆದಿದ್ದಾರೆ. ಶಿಕ್ಷಣದಿಂದ ನಮ್ಮ ಜೀವನ ಮಟ್ಟವನ್ನು ಸುಧಾರಿಸಲು ಸಾಧ್ಯವಾಗುತ್ತದೆ. ಭೂಮಿ ಹಬ್ಬವು ಶಿಕ್ಷಣ ಕ್ರಾಂತಿಗೆ ನಾಂದಿಯಾಗ ಬೇಕು. ಕೇವಲ ಸರಕಾರದ ಸೌಲಭ್ಯಗಳನ್ನೇ ಅವಲಂಬಿಸದೆ ಸಮುದಾಯವು ಶೈಕ್ಷಣಿಕ ಕ್ರಾಂತಿ ಮೂಡಿಸಿ ಪ್ರಗತಿ ಸಾಧಿಸಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಕೊರಗರು ಅರಣ್ಯದ ಜೊತೆ ಬದುಕು ಕಟ್ಟಿಕೊಂಡವರು. ಸರಕಾರ ಗಳು ಬಹಳಷ್ಟು ಕಾರ್ಯಕ್ರಮಗಳ ಮೂಲಕ ಕೊರಗ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನ ನಡೆಸುತ್ತಿದೆ. ಸರಕಾರದ ಯೋಜನೆಗಳನ್ನು ಕೊರಗರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಕೊರಗ ಸಂಘಟನೆಗಳು ಇಲಾಖಾಧಿಕಾರಿಗಳ ಜೊತೆ ಕೈಜೋಡಿಸುವುದು ಅತೀ ಅಗತ್ಯ ವಾಗಿದೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಸುಶೀಲ ನಾಡ ವಹಿಸಿದ್ದರು. ಧ್ವಜಾ ರೋಹಣವನ್ನು ಕಾಸರಗೋಡು ಜಿಲ್ಲಾ ಒಕ್ಕೂಟದ ಉಪಾಧ್ಯಕ್ಷ ವರ್ಕಾಡಿ ಐತಪ್ಪ ನೆರವೇರಿಸಿದರು. ಈ ಸಂದರ್ಭದಲ್ಲಿ ಭೂಮಿ ಹೋರಾಟದ ನಿರ್ಣಾಯಕ ಹಂತ 2000ನೇ ಇಸವಿಯ ಕಳ್ತೂರು ಚಳವಳಿಯಲ್ಲಿ ಪಾಲ್ಗೊಂಡವರನ್ನು ಅಭಿನಂದಿಸ ಲಾಯಿತು.

ಒಕ್ಕೂಟದ ನಮ್ಮ ನ್ಯಾಯಕೂಟದ ನ್ಯಾಯಾಧೀಶ ಬಾಲರಾಜ್ ಕೋಡಿಕಲ್, ಐಟಿಡಿಪಿ ಯೋಜನಾ ಸಮನ್ವಯಾಧಿಕಾರಿ ದೂದ್ ಪೀರ್, ಪೆರ್ನಾಲು ಸಮಗ್ರ ಗ್ರಾಮೀಣ ಆಶ್ರಮದ ಅಧ್ಯಕ್ಷ ಅಶೋಕ್ ಶೆಟ್ಟಿ, ಒಕ್ಕೂಟದ ಉಡುಪಿ ಜಿಲ್ಲಾ ಸಮಿತಿಯ ಮಾಜಿ ಅಧ್ಯಕ್ಷ ಬೊಗ್ರ ಕೊರಗ, ಕುಂದಾಪುರ ಪುರಸಭೆ ಸದಸ್ಯ ಪ್ರಭಾಕರ ವಿ. ಮುಖ್ಯ ಅತಿಥಿಗಳಾಗಿದ್ದರು.

ಪ್ರಮುಖರಾದ ಮತ್ತಾಡಿ ಕಾಯರ್‌ಪಲ್ಕೆ, ಮೋಹನ್ ಅಡ್ವೆ, ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಿನಯ ಅಡ್ವೆ ಉಪಸ್ಥಿತರಿ ದ್ದರು. ಹಬ್ಬದ ದೀಪವನ್ನು ಸುಶೀಲಾ ಕಿನ್ನಿಗೋಳಿ ಬೆಳಗಿಸಿದರು. ಹಬ್ಬದ ಸವಿಜೇನನ್ನು ಗೌರಿ ಕೊಕ್ಕರ್ಣೆ ಹಂಚಿಸಿದರು. ಒಕ್ಕೂಟದ ಸಂಯೋಜಕ ಕೆ.ಪುತ್ರನ್ ಹೆಬ್ರಿ ಸ್ವಾಗತಿಸಿದರು. ಶೇಖರ್ ಕಡಾರಿ ವಂದಿಸಿದರು. ವಿಮಲಾ ಕಳ್ತೂರು ಕಾರ್ಯಕ್ರಮ ನಿರೂಪಿಸಿದರು.

ಭೂಮಿ ಹಬ್ಬದ ಜಾಥಾಕ್ಕೆ ಉಡುಪಿ ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ಡೋಲು ಬಾರಿಸುವ ಮೂಲಕ ಚಾಲನೆ ನೀಡಿದರು.

ಅಲ್ಲಿಂದ ಹೊರಟ ಜಾಥವು ಕರಾವಳಿ ಬೈಪಾಸ್ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ನಿಟ್ಟೂರು ಆದಿವಾಸಿ ಭವನ ದಲ್ಲಿ ಸಮಾಪ್ತಿಗೊಂಡಿತು. ಜಾಥದಲ್ಲಿ ಕೊರಗ ಸಮುದಾಯದ ವಿವಿಧ ಕಲಾ ತಂಡಗಳ ಡೋಲು, ಚಂಡೆ, ಕೊಳಲು ವಾದನ ಹಾಗೂ ಡೋಲು ಕುಣಿತ ವಿಶೇಷ ಆಕರ್ಷಣೀಯವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X