ರಿಕ್ಷಾಕ್ಕೆ ಬೈಕ್ ಢಿಕ್ಕಿ: ಸವಾರ ಮೃತ್ಯು

ಶಂಕರನಾರಾಯಣ, ಫೆ.12: ಬೈಕೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರೊಬ್ಬರು ಮೃತಪಟ್ಟ ಘಟನೆ ಫೆ.11ರಂದು ಮಧ್ಯಾಹ್ನ ವೇಳೆ ಹಾಲಾಡಿ ಗ್ರಾಮದ ಹಂದಕೊಡ್ಲು ಎಂಬಲ್ಲಿ ನಡೆದಿದೆ.
ಮೃತರನ್ನು ಕುಂಬಾರಮಕ್ಕಿಯ ಕಳಿಗೆ ಚಂದ್ರ ಶೆಟ್ಟಿ(63) ಎಂದು ಗುರುತಿಸ ಲಾಗಿದೆ. ಇವರು ಇಳಿಜಾರು ರಸ್ತೆಯಲ್ಲಿ ಹೋಗುತ್ತಿದ್ದಾಗ ಎದುರಿನಲ್ಲಿ ಬರುತ್ತಿದ್ದ ರಿಕ್ಷಾವನ್ನು ನೋಡಿ ಗಲಿಬಿಲಿಗೊಂಡರು. ಇದರಿಂದ ನಿಯಂತ್ರಣ ತಪ್ಪಿದ ಬೈಕ್ ರಿಕ್ಷಾಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಚಂದ್ರ ಶೆಟ್ಟಿ, ಹಾಲಾಡಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




