ಗಂಗೊಳ್ಳಿ | ಬೈಕ್ ಢಿಕ್ಕಿ: ಪಾದಾಚಾರಿ ಮೃತ್ಯು

ಗಂಗೊಳ್ಳಿ, ನ.12: ಬೈಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮರವಂತೆ ಗ್ರಾಮದ ನಿರೋಣಿ ಐಸ್ ಪ್ಲಾಂಟ್ ಎದುರು ರಾಷ್ಟ್ರೀಯ ಹೆದ್ದಾರಿ 66ರ ನ.11ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಮರವಂತೆಯ ರಾಜು ಮೊಗವೀರ(46) ಎಂದು ಗುರುತಿಸಲಾಗಿದೆ. ಇವರು ತಮ್ಮ ಮನೆಗೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಎದುರುಗಡೆ ಬೈಂದೂರು ಕುಂದಾಪುರ ಕಡೆಗೆ ಬರುತ್ತಿದ್ದ ಬೈಕ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಅಪಘಾತದಿಂದ ಬೈಕ್ ಸವಾರ ಅಕ್ಷಯ್ ಎಂಬವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





