ಉಡುಪಿ: ಭಗವಾನ್ ಬಿರ್ಸಾ ಮುಂಡ ಜಯಂತಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಇವರ ಸಹಯೋಗದೊಂದಿಗೆ ಭಗವಾನ್ ಬಿರ್ಸಾ ಮುಂಡ ಅವರ 150ನೇ ಜನ್ಮ ದಿನಾಚರಣೆ ಪ್ರಯುಕ್ತ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮ ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮಾತನಾಡಿ, ಬುಡಕಟ್ಟು ಸಮುದಾಯದವರು ಸಮಾಜದ ಮುಖ್ಯವಾಹಿನಿಗೆ ಬರಲು ವಿವಿಧ ಕಾರ್ಯಕ್ರಮಗಳ ಜೊತೆಗೆ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಸ್.ಎಸ್. ಕಾದ್ರೋಳಿ, ಐ.ಟಿ.ಡಿ.ಪಿ ಯೋಜನಾ ಸಮನ್ವಯಾಧಿಕಾರಿ ನಾರಾಯಣಸ್ವಾಮಿ ಎಂ, ಕೊರಗ ಮತ್ತು ಮಲೆಕುಡಿ ಸಮುದಾಯದ ಮುಖಂಡರು ಹಾಜರಿದ್ದರು.
ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಅಧೀಕ್ಷಕ ವಿಶ್ವನಾಥ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
Next Story





