Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಭ್ರಷ್ಟರನ್ನು ಪ್ರಾಮಾಣಿಕರನ್ನಾಗಿಸುವ...

ಭ್ರಷ್ಟರನ್ನು ಪ್ರಾಮಾಣಿಕರನ್ನಾಗಿಸುವ ವಾಷಿಂಗ್ ಮೆಷಿನ್ ಬಿಜೆಪಿಯಲ್ಲಿದೆ: ಸಂತೋಷ್ ಲಾಡ್ ವ್ಯಂಗ್ಯ

ವಾರ್ತಾಭಾರತಿವಾರ್ತಾಭಾರತಿ10 Oct 2025 12:51 PM IST
share
ಭ್ರಷ್ಟರನ್ನು ಪ್ರಾಮಾಣಿಕರನ್ನಾಗಿಸುವ ವಾಷಿಂಗ್ ಮೆಷಿನ್ ಬಿಜೆಪಿಯಲ್ಲಿದೆ: ಸಂತೋಷ್ ಲಾಡ್ ವ್ಯಂಗ್ಯ

ಉಡುಪಿ, ಅ.10: ಬಿಜೆಪಿಯವರು ವಾಷಿಂಗ್ ಯಂತ್ರದಲ್ಲಿ ಭ್ರಷ್ಟಾಚಾರಿಗಳನ್ನು ಹಾಕಿ, ನಿರ್ಮಾದಿಂದ ತೊಳೆಯುತ್ತಾರೆ. ಬಿಜೆಪಿ ಸೇರಿದ ಕೂಡಲೇ ಅವರೆಲ್ಲರೂ ಪ್ರಾಮಾಣಿಕರಾಗಿ ಬಿಡುತ್ತಾರೆ. ‌25 ರಾಜಕಾರಣಿಗಳನ್ನು ಈ ರೀತಿ ಮಾಡಿದ್ದಾರೆ ಎಂದು ಎಂದು ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಶಾಸಕ ಪಪ್ಪಿ ಮನೆ ಮೇಲೆ ಇಡಿ ದಾಳಿ ಬಗ್ಗೆ ಉಡುಪಿಯಲ್ಲಿ ಇಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ಈ ರೀತಿ ಪ್ರತ್ರಿಯಿಸಿದರು.

ಅಜಿತ್ ಪವರ್ ಮೇಲೆ 60ಸಾವಿರ ಕೋಟಿ ಆರೋಪ ಇತ್ತು. ಅವರನ್ನು ಬಿಜೆಪಿಗೆ ಕರೆದುಕೊಂಡು ಬಂದರು. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಅವರ ಮೇಲೂ ಆರೋಪ ಇತ್ತು. ಇಬ್ಬರೂ ಕೂಡ ಬಿಜೆಪಿಗೆ ಹಣ ಕೊಟ್ಟು ಸೇರ್ಪಡೆಯಾದರು. ಪಪ್ಪಿ ಬಿಹಾರ ಚುನಾವಣೆಗೆ ದುಡ್ಡು ಕೊಟ್ಟಿಲ್ಲ. ಯಾರು ದುಡ್ಡು ಕೊಡುತ್ತಾರೋ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುತ್ತಾರೆ. ಇಡೀ ಮಹಾರಾಷ್ಟ್ರ ಚುನಾವಣೆಗೆ ಅಜಿತ್ ಪವಾರ್ ಹಣ ಕೊಟ್ಟಿದ್ದಾರೆ. ಬಿಜೆಪಿಯವರೇ ಅಜಿತ್ ಪವಾರ್ ವಿರುದ್ಧ ಆರೋಪಗಳನ್ನು ಮಾಡಿದ್ದರು ಎಂದರು.

ಭ್ರಷ್ಟಾಚಾರ ರ‍್ಯಾಂಕಿಂಗ್‌ನಲ್ಲಿ ದೇಶ ಯಾವ ಸ್ಥಾನದಲ್ಲಿದೆ ನೋಡಿ. ಹಸಿವಿನ ಸೂಚ್ಯಂಕ, ಬಡತನದ ಸೂಚ್ಯಂಕ, ವಾಕ್ ಸ್ವಾತಂತ್ರ್ಯ, ಜಿಡಿಪಿ, ಪಾಸ್ ಪೋರ್ಟ್ ರ‍್ಯಾಂಕಿಂಗ್‌ಗಳಲ್ಲಿ ಭಾರತ ಎಲ್ಲಿದ್ದೇವೆ ನೋಡಿ ಎಂದರು.

ಸಚಿವ ಸಂಪುಟ ವಿಸ್ತರಣೆ ಹಾಗೂ ಔತಣ ಕೂಟ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರತಿ ವರ್ಷ ಔತಣಕೂಟ ಕರೆಯಲಾಗುತ್ತದೆ. ಇದೇನು ಹೊಸತಲ್ಲ. ಮಂತ್ರಿಮಂಡಲ ವಿಸ್ತರಣೆ ಅಥವಾ ಪುನರ್ ರಚನೆ ಆಗುವುದು ಸಹಜ ಪ್ರಕ್ರಿಯೆಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿಗಳು, ಹೈಕಮಾಂಡ್ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಬಿಗ್‌ಬಾಸ್ ವಿಚಾರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಅಲ್ಲಿ ಪರಿಸರ ಕ್ಲೀಯರೇನ್ಸ್ ಇರಲಿಲ್ಲ. ಉಪಮುಖ್ಯಮಂತ್ರಿಗಳು ಒಂದು ವ್ಯವಸ್ಥೆಗೆ ತಂದಿದ್ದಾರೆ. ಉದ್ದೇಶ ಪೂರ್ವಕವಾಗಿ ನಾವು ಬಿಗ್‌ಬಾಸ್ ನಿಲ್ಲಿಸುವ ಅವಶ್ಯಕತೆ ಇಲ್ಲ. ನೋಟಿಸುಗಳನ್ನು ಕೊಟ್ಟಿರುತ್ತಾರೆ. ಡಿಕೆಶಿ ಮುಂದಾಳತ್ವದಲ್ಲಿ ಸಮಾಧಾನ ಮಾಡಿ ವ್ಯವಸ್ಥೆ ಮಾಡಲಾಗಿದೆ ಎಂದರು.

ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಗಣತಿ ಶೇ.80ರಷ್ಟು ಪೂರ್ಣ ಗೊಂಡಿದೆ. ಇದು ಜಾತಿ ಗಣತಿ ಅಲ್ಲ. ಸಿದ್ದರಾಮಯ್ಯ ಅಥವಾ ಸರಕಾರ ಸಮಾಜವನ್ನು ಒಡೆದಿಲ್ಲ. ಕೇಂದ್ರ ಸರಕಾರವು ಗಣತಿ ಮಾಡಲು ಹೊರಟಿದೆ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ಮೀಸಲಾತಿ ಕೊಟ್ಟಿದೆ. ಇದರ ವಿರುದ್ಧ ಯಾರಾದರೂ ಪ್ರತಿಭಟನೆ ಹೋರಾಟ ಮಾಡಿದ್ದಾರೆಯೇ ಎಂದು ಪ್ರಶ್ನಿಸಿದರು.

ಮುಟ್ಟಿನ ರಜೆ: ಪ್ರಗತಿಪರ ಬಿಲ್

ಕರ್ನಾಟಕದಲ್ಲಿ ಮಹಿಳೆಯರಿಗೆ ಒಂದು ವರ್ಷದಲ್ಲಿ 12 ದಿನಗಳ ಮುಟ್ಟಿನ ರಜೆ ನೀಡಲು ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದ್ದು, ಇದೊಂದು ಪ್ರಗತಿಪರ ಮಸೂದೆಯಾಗಿದೆ ಎಂದು ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಸೈಕಲ್ ಮೂಲಕ ಜಾಗೃತಿ ಮೂಡಿಸುವ ಒರಿಸ್ಸಾದ ರಂಜಿತಾ ಪ್ರಿಯ ದರ್ಶಿನಿ ನನ್ನನ್ನು ಕವಿತಾ ರೆಡ್ಡಿಯವರ ಜೊತೆ ಬಂದು ಭೇಟಿಯಾಗಿದ್ದರು. ಅವರೇ ವರ್ಷದ ಹಿಂದೆ ಈ ಬಗ್ಗೆ ಪ್ರಸ್ತಾಪ ಸಲ್ಲಿಸಿದ್ದರು. ಇದೀಗ ಕರ್ನಾಟಕ ಸರಕಾರ ಒಮ್ಮತದಿಂದ ನಿರ್ಧಾರ ಕೈಗೊಂಡಿದೆ ಎಂದರು.

ಇದರಿಂದ ಮಧ್ಯಮ ಬಡ ಮಾಧ್ಯಮ ವರ್ಗದ ಬಹಳಷ್ಟು ಹೆಣ್ಣು ಮಕ್ಕಳಿಗೆ ಅನುಕೂಲವಾಗಲಿದೆ. ಗಾರ್ಮೆಂಟ್ ಇಂಡಸ್ಟ್ರಿ ಸೇರಿದಂತೆ, ಸಣ್ಣ ಪುಟ್ಟ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಅನುಕೂಲವಾಗಲಿದೆ. ಮುಟ್ಟಿನ ಸಮಸ್ಯೆಯಿಂದ ಅನೇಕ ಮಂದಿ ಮಹಿಳೆಯರು ಬಳಲುತ್ತಿದ್ದು, ಇದಕ್ಕಾಗಿ ಸಮಿತಿ ರಚನೆ ಮಾಡಲಾಗಿತ್ತು. ಆ ಮೂಲಕ ರಾಜ್ಯಾದ್ಯಂತ ಜನರ ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಬುದ್ಧ ಬಸವ ಅಂಬೇಡ್ಕರ್ ಸಿದ್ಧಾಂತದ ಕಾಂಗ್ರೆಸ್ ಸರಕಾರ ಈ ನಿರ್ಧಾರ ಕೈಗೊಂಡಿದೆ. ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X