Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪರಶುರಾಮ ಥೀಮ್ ಪಾರ್ಕ್ ವಿಚಾರದಲ್ಲಿ...

ಪರಶುರಾಮ ಥೀಮ್ ಪಾರ್ಕ್ ವಿಚಾರದಲ್ಲಿ ಬಿಜೆಪಿಗೆ ನೈತಿಕತೆ ಇಲ್ಲ: ಸಚಿವ ರಿಝ್ವಾನ್ ಅರ್ಷದ್

ನಝೀರ್ ಪೂಲ್ಯನಝೀರ್ ಪೂಲ್ಯ24 Nov 2026 1:55 PM IST
share
ಪರಶುರಾಮ ಥೀಮ್ ಪಾರ್ಕ್ ವಿಚಾರದಲ್ಲಿ ಬಿಜೆಪಿಗೆ ನೈತಿಕತೆ ಇಲ್ಲ: ಸಚಿವ ರಿಝ್ವಾನ್ ಅರ್ಷದ್

ಉಡುಪಿ, ನ.24: ಕಾರ್ಕಳ ಬೈಲೂರಿನಲ್ಲಿ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿದ್ದು ಬಿಜೆಪಿಯವರೇ. ಅವರ ಅಧಿಕಾರಾವಧಿಯಲ್ಲಿ ವಿನ್ಯಾಸ ರೂಪಿಸಿ, ಟೆಂಡರ್ ಕರೆದು, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸುವುದಾಗಿ ಘೋಷಿಸಿದ್ದರು. ಆದರೆ ಯೋಜನೆಯನ್ನು ಪೂರ್ಣಗೊಳಿಸಲು ಅವರಿಂದ ಸಾಧ್ಯವಾಗಲಿಲ್ಲ. ಈಗ ಅವರಿಗೆ ಈ ವಿಚಾರದಲ್ಲಿ ಮಾತನಾಡುವ ನೈತಿಕತೆ ಇಲ್ಲ. ಅವರ ಅಧಿಕಾರಾವಧಿಯಲ್ಲಿ ನಡೆದಿರುವ ಲೋಪಗಳಿಗೆ ಅವರೇ ಜವಾಬ್ದಾರರು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಹೇಳಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಪರಶುರಾಮ ಥೀಮ್ ಪಾರ್ಕ್ ವಿಚಾರದಲ್ಲಿ ಬಿಜೆಪಿ ರ್ಯಾಲಿ ಕುರಿತು ಅವರು ಈ ರೀತಿ ಪ್ರತಿಕ್ರಿಯಿಸಿದರು.

ಈ ಪ್ರಕರಣ ಕೋರ್ಟ್ನಲ್ಲಿ ಇರುವುದರಿಂದ ಈ ಹಿಂದೆ ಕ್ರಮ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಇದೀಗ ನ್ಯಾಯಾಲಯದಿಂದ ಪರಿಹಾರ ದೊರೆತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿದ್ದೇನೆ. ಮುಖ್ಯಮಂತ್ರಿಯೊಂದಿಗೂ ಚರ್ಚಿಸಿ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಿಜೆಪಿಗೆ ಹೊಟ್ಟೆ ಉರಿ:

ಜಿಲ್ಲಾ ಗ್ಯಾರಂಟಿ ಸಮಾವೇಶಕ್ಕೆ ಗ್ರಾಪಂ ನಿಧಿ ಬಳಕೆ ಮಾಡಿರುವುದಕ್ಕೆ ಬಿಜೆಪಿ ಶಾಸಕರು ಆಕ್ಷೇಪಿಸಿರುವುದಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದ ಬಡ ಮತ್ತು ಸಾಮಾನ್ಯ ಜನರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ನೀಡಿರುವ ಅನುಕೂಲಗಳ ಬಗ್ಗೆ ಜನರೇ ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಇದರಿಂದ ಬಿಜೆಪಿಯವರಿಗೆ ಹೊಟ್ಟೆ ಉರಿ ಆಗುವುದು ಸಹಜ. ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಡ ಮತ್ತು ಸಾಮಾನ್ಯ ಜನರಿಗೆ ಸರ್ಕಾರ ಸಾಕಷ್ಟು ಅನುಕೂಲ ಕಲ್ಪಿಸಿದೆ ಎಂದರು.

ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ನೀತಿಗಳಿಂದ ಬೆಲೆ ಏರಿಕೆ ಹೆಚ್ಚಾಗಿರುವ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ನೆರವಾಗಿವೆ. ಈ ಯೋಜನೆಗಳಿಂದ ಜನರ ಜೀವನದಲ್ಲಿ ಆಗಿರುವ ಸುಧಾರಣೆಯ ಬಗ್ಗೆ ಅರಿವು ಮೂಡಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಸಚಿವರು ಹೇಳಿದರು.

ಗ್ರಾಪಂಗಳು ಕೂಡ ಜನರ ಪರವಾಗಿ ಕೆಲಸ ಮಾಡುತ್ತವೆ. ಜನರಿಗೆ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದೆ. ಸರಕಾರ ಕಾರ್ಯಕ್ರಮ ನಡೆಸುವಾಗ ಎಲ್ಲಿಂದ ಹಣ ಖರ್ಚು ಮಾಡಬೇಕು ಎಂಬುದನ್ನು ವಿರೋಧ ಪಕ್ಷದವರನ್ನು ಕೇಳಿಕೊಂಡು ಮಾಡಲು ಸಾಧ್ಯವಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಮಾಡಿದೆ ಎಂಬುದನ್ನೂ ಪ್ರಶ್ನಿಸಬೇಕು. ನಾವು ಜನರಿಗಾಗಿ ಕಾರ್ಯಕ್ರಮ ಮಾಡಿದರೂ ಅವರಿಗೆ ಬೇಸರವಾಗುವುದಾದರೆ ನಾವೇನು ಮಾಡಲು ಸಾಧ್ಯ ಎಂದು ಸಚಿವರು ತಿರುಗೇಟು ನೀಡಿದರು.

ಆಶಾ ಕಾರ್ಯಕರ್ತೆಯರ ಪರ:

ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಮುಖ್ಯಮಂತ್ರಿ ಸ್ವತಃ ಆಶಾ ಕಾರ್ಯಕರ್ತೆಯರೊಂದಿಗೆ ಮಾತುಕತೆ ನಡೆಸಿದ್ದಾರೆ. ಆರೋಗ್ಯ ಸಚಿವ ಯು.ಟಿ.ಖಾದರ್ ಸಮಸ್ಯೆ ಪರಿಹರಿಸಲು 12 ದಿನಗಳ ಕಾಲಾವಕಾಶ ಕೇಳಿದ್ದಾರೆ. ಆಶಾ ಕಾರ್ಯಕರ್ತೆಯರ ಸಮಸ್ಯೆ ಕೇವಲ ರಾಜ್ಯ ಸರಕಾರಕ್ಕೆ ಸಂಬಂಧಿಸಿದ್ದಲ್ಲ. ಕೇಂದ್ರ ಸರಕಾರವೂ ಇದರಲ್ಲಿ ಪಾತ್ರ ವಹಿಸಬೇಕಾಗಿದೆ ಎಂದರು.

ರಾಜ್ಯದ 18 ಸಂಸದರು ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಪರವಾಗಿ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುತ್ತಾರೆಯೇ ಎಂಬುದನ್ನು ನೋಡ ಬೇಕಾಗಿದೆ. ಇಲ್ಲ ಇವರು ಕೇವಲ ರಾಜ್ಯ ಸರಕಾರದ ಮೇಲೆ ಆರೋಪ ಮಾಡುವುದರಲ್ಲೇ ಕಾಲ ಕಳೆಯುತ್ತಾರೆಯೇ ಎಂಬುದೂ ತಿಳಿಯಬೇಕಿದೆ. ಆದರೆ ಸರಕಾರ ಯಾವತ್ತೂ ಆಶಾ ಕಾರ್ಯಕರ್ತೆಯರ ಪರವಾಗಿರುತ್ತದೆ ಮುಖ್ಯಮಂತ್ರಿ ರಾಜ್ಯಕ್ಕೆ ಬಂಡವಾಳ ಹೂಡಿಕೆ ಹೆಚ್ಚಿಸುವ ಉದ್ದೇಶದಿಂದ ಜಪಾನ್ ಪ್ರವಾಸ ಕೈಗೊಂಡಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿಯೂ ಈ ವಿಚಾರ ಚರ್ಚಿಸಿ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಹಿರಿಯೂರು ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಗಳ ಗೆಲುವು ಮುಂದಿನ ರಾಜಕೀಯ ಬೆಳವಣಿಗೆಗಳಿಗೆ ದಿಕ್ಸೂಚಿಯಾಗಲಿದೆ ಎಂಬ ಬಿಜೆಪಿಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಆಗಲಿ, ಚುನಾವಣೆಯ ಫಲಿತಾಂಶವೇ ದಿಕ್ಸೂಚಿಯಾಗಲಿ ಎಂದು ಹೇಳಿದರು.

ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಾನೆಗಳ ಸಮಸ್ಯೆ ತೀವ್ರಗೊಂಡಿರುವುದು ಹಾಗೂ ಶಾಸಕರೊಬ್ಬರು ರಾಜೀನಾಮೆಗೆ ಮುಂದಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಶಾಸಕರು ತಮ್ಮ ಕ್ಷೇತ್ರದ ಜನರ ಸಮಸ್ಯೆ ಮತ್ತು ಅಹವಾಲುಗಳನ್ನು ತಮ್ಮದೇ ರೀತಿಯಲ್ಲಿ ಸರಕಾರದ ಗಮನಕ್ಕೆ ತರುತ್ತಾರೆ. ರಾಜ್ಯಮಟ್ಟದಲ್ಲಿ ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಉಡುಪಿ ಜಿಲ್ಲಾಸ್ಪತ್ರೆ ಬಗ್ಗೆ ಶೀಘ್ರ ಸಭೆ

ಉಡುಪಿ ನೂತನ ಜಿಲ್ಲಾಸ್ಪತ್ರೆ ವಿಚಾರವಾಗಿ ಆರೋಗ್ಯ ಸಚಿವ ಯು.ಟಿ.ಖಾದರ್ ಅವರೊಂದಿಗೆ ಚರ್ಚಿಸಲಾಗಿದೆ. ಶೀಘ್ರದಲ್ಲೇ ಜಿಲ್ಲೆಯ ಐವರು ಶಾಸಕರನ್ನು ಆಹ್ವಾನಿಸಿ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ರಿಝ್ವಾನ್ ಅರ್ಷದ್ ತಿಳಿಸಿದರು.

ಹಳೆಯ ಆಸ್ಪತ್ರೆಯ ಉಪಕರಣಗಳನ್ನು ನೂತನ ಆಸ್ಪತ್ರೆಗೆ ಸ್ಥಳಾಂತರಿಸುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಹೊಸ ಮನೆ ನಿರ್ಮಿಸಿದಾಗ ಹಳೆಯ ಮನೆಯಲ್ಲಿರುವ ಉಪಯುಕ್ತ ಪೀಠೋಪಕರಣಗಳನ್ನು ಹೊಸ ಮನೆಗೆ ತೆಗೆದುಕೊಂಡು ಹೋಗುವುದು ಸಹಜ. ಅದೇ ರೀತಿ ಆಸ್ಪತ್ರೆಯಲ್ಲಿರುವ ಉಪಯುಕ್ತ ಹಾಗೂ ಉತ್ತಮ ಸ್ಥಿತಿಯಲ್ಲಿರುವ ಉಪಕರಣಗಳನ್ನು ಸ್ಥಳಾಂತರಿಸುವುದರಲ್ಲಿ ತಪ್ಪಿಲ್ಲ ಎಂದರು.

ಆದರೆ ತುಕ್ಕು ಹಿಡಿದಿರುವ ಬೆಡ್ ಗಳು ಅಥವಾ ಬಳಕೆಗೆ ಯೋಗ್ಯವಲ್ಲದ ಉಪಕರಣಗಳನ್ನು ಸ್ಥಳಾಂತರಿಸುವುದಿಲ್ಲ. ಯಾವ ಉಪಕರಣಗಳನ್ನು ಸ್ಥಳಾಂತರಿಸಬೇಕು ಎಂಬುದನ್ನು ಪರಿಶೀಲಿಸಬೇಕಾಗಿದೆ. ಈ ಕುರಿತು ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Tags

BJPNo Moral RightParashurama Theme ParkMinister Rizwan Arshad
share
ನಝೀರ್ ಪೂಲ್ಯ
ನಝೀರ್ ಪೂಲ್ಯ
Next Story
X