Udupi | ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಸಾಂದರ್ಭಿಕ ಚಿತ್ರ (AI)
ಉಡುಪಿ: ಆದಿ ಉಡುಪಿ ಎಪಿಎಂಸಿ ಮಾರ್ಕೆಟ್ ಹಿಂಭಾಗದಲ್ಲಿ ಪಾಳು ಬಿದ್ದ ಬಾವಿಯಲ್ಲಿ ಸುಮಾರು 40-50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಎ.21ರಂದು ಬೆಳಗ್ಗೆ ಪತ್ತೆಯಾಗಿದೆ.
ಇವರು ಸುಮಾರು 3-4 ದಿನಗಳ ಹಿಂದೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಅಥವಾ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




