Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬ್ರಹ್ಮಾವರ | ಫ್ಲೈಓವರ್, ಸರ್ವಿಸ್ ರಸ್ತೆ...

ಬ್ರಹ್ಮಾವರ | ಫ್ಲೈಓವರ್, ಸರ್ವಿಸ್ ರಸ್ತೆ ಬಗ್ಗೆ ವಿಸ್ತೃತ ಯೋಜನಾ ವರದಿಗೆ ಇಲಾಖೆಯಿಂದ ಏಜೆನ್ಸಿ ನೇಮಕ

ವಾರ್ತಾಭಾರತಿವಾರ್ತಾಭಾರತಿ3 Dec 2025 7:21 PM IST
share
ಬ್ರಹ್ಮಾವರ | ಫ್ಲೈಓವರ್, ಸರ್ವಿಸ್ ರಸ್ತೆ ಬಗ್ಗೆ ವಿಸ್ತೃತ ಯೋಜನಾ ವರದಿಗೆ ಇಲಾಖೆಯಿಂದ ಏಜೆನ್ಸಿ ನೇಮಕ
ರಾಷ್ಟ್ರೀಯ ಹೆದ್ದಾರಿ -66 ಉಳಿಸಿ ಹೋರಾಟ ಸಮಿತಿಯಿಂದ ಸ್ವಾಗತ

ಬ್ರಹ್ಮಾವರ: ಬ್ರಹ್ಮಾವರ, ಕೋಟ, ಪಡುಬಿದ್ರಿ ಹಾಗೂ ಮುಲ್ಕಿಯಲ್ಲಿ ಸರ್ವಿಸ್ ರಸ್ತೆ ಮತ್ತು ಪ್ಲೈ ಓವರ್ ನಿರ್ಮಿಸುವ ಕುರಿತು ವಿಸ್ತೃತ ಯೋಜನಾ ವರದಿ ಸಿದ್ದಪಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಏಜೆನ್ಸಿ ನೇಮಕ ಮಾಡಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ-66 ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷ ಗೋವಿಂದರಾಜ್ ಹೆಗ್ಡೆ ತಿಳಿಸಿದ್ದಾರೆ.

ಬ್ರಹ್ಮಾವರದ ಹೋಟೆಲ್ ಆಶ್ರಯ ಸಭಾಂಗಣದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಸೆ.2ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ರಾಷ್ಟ್ರೀಯ ಹೆದ್ದಾರಿ-66 ಉಳಿಸಿ ಹೋರಾಟ ಸಮಿತಿ ವತಿಯಿಂದ ಬೇಡಿಕೆಗಳ ಕುರಿತು ವಿಸ್ತೃತವಾಗಿ ತಿಳಿಸಿದ್ದು, ಸಂಸದರು ಹಾಗೂ ಅಧಿಕಾರಿಗಳು ನಮ್ಮ ಬೇಡಿಕೆಗೆ ಸ್ಪಂದಿಸಿದ್ದಾರೆ ಎಂದರು.

ಬ್ರಹ್ಮಾವರದಲ್ಲಿ 7 ಪಿಲ್ಲರ್ ಗಳ ಪ್ಲೈ ಓವರ್ ನಿರ್ಮಾಣ, ಭದ್ರಗಿರಿಯಿಂದ ಮಾಬುಕಳ ಸೇತುವೆ ತನಕ ಎರಡೂ ಬದಿಯಲ್ಲಿ ಸರ್ವಿಸ್ ರಸ್ತೆ ನಿರ್ಮಾಣ, ದೂಪದಕಟ್ಟೆ, ಆಕಾಶವಾಣಿ ಬೈಪಾಸ್, ಉಪ್ಪಿನಕೋಟೆಯಲ್ಲಿ ಮೀಡಿಯನ್ ಓಪನಿಂಗ್ ಬಗ್ಗೆ ಆಗ್ರಹಿಸಿ ಸೆ.4ರಂದು ಬ್ರಹ್ಮಾವರ ಬಂದ್ ಮಾಡಿ ಉಪ್ಪಿನಕೋಟೆ ಫಾರ್ಚೂನ್ ಹೋಟೆಲ್ ನಿಂದ ಧರ್ಮಾವರ ಅಡಿಟೋರಿಯಂವರೆಗೆ ಸಾರ್ವಜನಿಕರ ಸಹಕಾರದಿಂದ ಶ್ರಮದಾನದ ಮೂಲಕ ಸರ್ವಿಸ್ ರಸ್ತೆ ನಿರ್ಮಿಸಲು ತೀರ್ಮಾನಿಸಲಾಗಿತ್ತು. ಆದರೆ ಸಂಸದರ ಆಶ್ವಾಸನೆಯಿಂದ ಈ ಹೋರಾಟವನ್ನು ಮುಂದೂಡಲಾಗಿತ್ತು ಎಂದು ಅವರು ತಿಳಿಸಿದರು.

ಜಿಲ್ಲಾಧಿಕಾರಿ ಸಮಕ್ಷಮ ನಡೆದ ಸಭೆಯಲ್ಲಿ ಸಂಸದರು ಭರವಸೆ ನೀಡಿದಂತೆ ಕೇಂದ್ರ ಸಾರಿಗೆ ಸಚಿವರಿಗೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ, ಯೋಜನಾ ನಿರ್ದೇಶಕರು ಹಾಗೂ ಪ್ರಾದೇಶಿಕ ಕಚೇರಿಯ ಅಧಿಕಾರಿಗಳಿಗೆ ಪತ್ರ ವ್ಯವಹಾರ ನಡೆಸಿದ್ದು, ಕೇಂದ್ರ ಸಾರಿಗೆ ಸಚಿವರ ನಿರ್ದೇಶನದೊಂದಿಗೆ ಸರ್ವಿಸ್ ರಸ್ತೆ ಹಾಗೂ ದೀರ್ಘಕಾಲಿನ ಕ್ರಮಕ್ಕೆ ವಿಸ್ತ್ರತ ಯೋಜನ ವರದಿ (ಡಿಪಿಆರ್) ತಯಾರಿಸಲು ಮೆದ್ರುವ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಸಂಸ್ಥೆಯ ಇಂಜಿನಿಯರ್ ಗಳನ್ನು ನೇಮಿಸಲಾಗಿದೆ. ಇವರು 15 ದಿನದೊಳಗೆ ಆಗಮಿಸಿ ಕೋಟ, ಬ್ರಹ್ಮಾವರ, ಮುಲ್ಕಿ ಹಾಗೂ ಪಡುಬಿದ್ರಿಯಲ್ಲಿ ವಿಸ್ತ್ರತ ಯೋಜನಾ ವರದಿ ಸಿದ್ದಪಡಿಲಿದ್ದಾರೆ. ಈ ಸಂದರ್ಭ ಹೋರಾಟ ಸಮಿತಿ ವತಿಯಿಂದ ಮಾಹಿತಿ ನೀಡಲಾಗುವುದು ಎಂದು ಗೋವಿಂದರಾಜ್ ಹೆಗ್ಡೆ ಹೇಳಿದರು.

ಆಶ್ರಯ ಹೋಟೆಲ್ ಮಾಲಕ ರಾಜಾರಾಮ ಶೆಟ್ಟಿ ಮಾತನಾಡಿ, ಬ್ರಹ್ಮಾವರದಲ್ಲಿ ಈಗ ನಡೆಯುತ್ತಿರುವ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು ವೇಗವಾಗಿ ಮಾಡದೇ ಇದ್ದಲ್ಲಿ ಇಲ್ಲಿನ ವ್ಯವಹಾರಿಕ ಸೆಂಟರ್ ಗಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗಲಿದೆ. ಆದುದರಿಂದ ಶೀಘ್ರವೇ ಕಾಮಗಾರಿ ಮುಗಿಸಲು ಅಧಿಕಾರಿಗಳು ಗಮನ ಹರಿಸಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಗ್ರಾಪಂ ಸದಸ್ಯರಾದ ದೇವಕಿ ಪೂಜಾರ್ತಿ, ನಿರಂಜನ ಶೆಟ್ಟಿ, ಹಾರಾಡಿ ದಯಾನಂದ ಶೆಟ್ಟಿ, ಬಸ್ ಮಾಲಕರ ಸಂಘದ ವಸಂತ ಶೆಟ್ಟಿ, ಕಾರು ಚಾಲಕ ಮಾಲಕರ ಸಂಘದ ರಮೇಶ್, ರಿಕ್ಷಾ ಚಾಲಕ ಮಾಲಕರ ಸಂಘದ ರಾಜು ಪೂಜಾರಿ, ರಾಜು ಸಾಲ್ಯಾನ್, ಟೆಂಪೋ ಮಾಲಕರ ಸಂಘದಿಂದ ವಿಜಯ ಕುಮಾರ್, ಸಂತೋಷ ಪೂಜಾರಿ, ಗಣೇಶ್ ಶ್ರೀಯಾನ್, ಬ್ರಹ್ಮಾವರ ಅಭಿವೃದ್ಧಿ ಸಮಿತಿಯ ಪ್ರತೀತ್ ಹೆಗ್ಡೆ, ಜೋಯ್ಸನ್, ಕಟ್ಟಡ ಕಾರ್ಮಿಕರ ಸಂಘದ ಸುಭಾಸ್, ಸಿಐಟಿಯು ಸಂಘಟನೆಯ ಶಶಿಧರ ಗೊಲ್ಲ, ಎಸ್.ಎಂ.ಎಸ್. ವಿದ್ಯಾಸಂಸ್ಥೆಯ ಅಲ್ವಾರಿಸ್ ಡಿಸಿಲ್ವಾ, ಗಿಲ್ಬರ್ಟ್ ಡಿಸಿಲ್ವಾ, ಅಲ್ಬರ್ಟ್ ಡಿಸಿಲ್ವಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X