ಬ್ರಹ್ಮಾವರ | ಕಾರು ಢಿಕ್ಕಿ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತ್ಯು

ಸಾಂದರ್ಭಿಕ ಚಿತ್ರ
ಬ್ರಹ್ಮಾವರ, ಡಿ.11: ವೇಗವಾಗಿ ಧಾವಿಸಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಬ್ರಹ್ಮಾವರದ ಎಸ್ಎಂಎಸ್ ಕಾಲೇಜು ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ವಾರಂಬಳ್ಳಿ ಗ್ರಾಮದ ಉದಯ ಕುಮಾರ್ ಶೆಟ್ಟಿ ಎಂದು ಗುರುತಿಸಲಾಗಿದೆ. ಅವರು ಎಸ್ಎಂಎಸ್ ಕಾಲೇಜು ಎದುರು ತನ್ನ ಬೈಕನ್ನು ನಿಲ್ಲಿಸಿ ಎದುರುಗಡೆ ಇರುವ ಮಧುವನ ಟವರ್ಸ್ಗೆ ಹೋಗಲು ಡಿವೈಡರ್ ಬಳಿ ನಿಂತಿದ್ದಾಗ ಕುಂದಾಪುರ ಕಡೆಯಿಂದ ಬಂದ ಕಾರು ಢಿಕ್ಕಿ ಹೊಡೆದಿದ್ದು, ಉದಯಕುಮಾರ್ ಡಿವೈಡರ್ ಮೇಲೆ ಬಿದ್ದು ತಲೆಗೆ ತೀವ್ರವಾಗಿ ಗಾಯಗೊಂಡಿದ್ದರು.
ಕೂಡಲೇ ಗಾಯಾಳುವನ್ನು ಮಹೇಶ್ ಆಸ್ಪತ್ರೆ ಬಳಿಕ ಮಣಿಪಾಲ ಆಸ್ಪತ್ರೆಗೆ ಕರೆದೊಯ್ದರೂ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





