ಮನೆಗೆ ನುಗ್ಗಿ ಚಿನ್ನದ ಸರ ಅಪಹರಣ

ಉಡುಪಿ, ಅ.18: ಇಂದು ಬೆಳಗಿನ ಜಾವ 2:30ರ ಸುಮಾರಿಗೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಆದಿಉಡುಪಿ ಹೆಲಿ ಪ್ಯಾಡ್ ಹಿಂಭಾಗದ ಮುಖ್ಯಪ್ರಾಣ ರಸ್ತೆಯ ಮನೆಯೊಂದಕ್ಕೆ ಅಕ್ರಮವಾಗಿ ನುಗ್ಗಿದ ಅಪರಿಚಿತ ದುಷ್ಕರ್ಮಿಯೊಬ್ಬ ಮನೆಯಲ್ಲಿ ಒಬ್ಬರೇ ಮಲಗಿದ್ದ ರಾಧು ಪೂಜಾರ್ತಿ (80) ಎಂಬ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಮೂರೂವರೆ ಪವನ್ ತೂಕದ ಚಿನ್ನದ ಸರವನ್ನು ಬಲಾತ್ಕಾರವಾಗಿ ಅಪಹರಿಸಿಕೊಂಡು ಹೋಗಿರುವುದಾಗಿ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





