Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಾಮರಸ್ಯದ ಸಮಾಜ ಕಟ್ಟುವುದು ಇಂದಿನ...

ಸಾಮರಸ್ಯದ ಸಮಾಜ ಕಟ್ಟುವುದು ಇಂದಿನ ಅಗತ್ಯ: ಸಚಿವ ಯು.ಟಿ.ಖಾದರ್

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೂತನ ಕಚೇರಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ4 Oct 2026 10:35 PM IST
share
ಸಾಮರಸ್ಯದ ಸಮಾಜ ಕಟ್ಟುವುದು ಇಂದಿನ ಅಗತ್ಯ: ಸಚಿವ ಯು.ಟಿ.ಖಾದರ್

ಉಡುಪಿ, ಅ.4: ನಮ್ಮ ಸಮಾಜದ ದೊಡ್ಡ ಶಕ್ತಿ ಅಂದರೆ ಸಾಮರಸ್ಯದ ಬದುಕು ಮತ್ತು ಒಗ್ಗಟ್ಟಿನ ಸಮಾಜ. ಅದುವೇ ಸಮಾಜದ ದೊಡ್ಡ ಗೌರವದ ಸಂಕೇತವಾಗಿದೆ. ಸಾಮರಸ್ಯದ ಸಮಾಜ ಕಟ್ಟುವುದು ಇಂದಿನ ಅತೀ ಅಗತ್ಯ ವಾಗಿದೆ. ಆ ಕಾರ್ಯವನ್ನು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಮುಖ್ಯ ಧ್ಯೇಯವಾಗಿ ಮಾಡಬೇಕಾಗಿದೆಂದು ರಾಜ್ಯ ವಕ್ಫ್, ಹಜ್, ಅಲ್ಪಸಂಖ್ಯಾತ ಕಲ್ಯಾಣ ಹಾಗೂ ಆರೋಗ್ಯ ಸಚಿವ ಯು.ಟಿ.ಖಾರ್ದ ಹೇಳಿದ್ದಾರೆ.

25 ವರ್ಷಗಳನ್ನು ಪೂರೈಸಿ ರಜತ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೂತನ ಸ್ವಂತ ಕಚೇರಿಯನ್ನು ರವಿವಾರ ಉಡುಪಿ ನಗರದ ಹೃದಯ ಭಾಗದಲ್ಲಿರುವ ವಿ.ಕೆ.ಪ್ಯಾರಡೈಸ್ ಕಟ್ಟಡದಲ್ಲಿ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ನಾವು ಕಮ್ಯುನಿಟಿಗೆ ಸಹಾಯ ಮಾಡಬೇಕೆ ಹೊರತು ಕಮ್ಯುನಲ್ ಆಗ ಬಾರದು. ಧಾರ್ಮಿಕ ನಂಬಿಕೆ ನಮ್ಮ ಮಣ್ಣಿನ ಶಕ್ತಿಯೇ ಹೊರತು ದೌರ್ಬಲ್ಯ ಅಲ್ಲ. ಪ್ರತಿಯೊಂದು ಧರ್ಮಗಳ ಸಂದೇಶವನ್ನು ಮೈಗೂಡಿಸಿಕೊಂಡು ಇನ್ನೊಬ್ಬರ ಧರ್ಮವನ್ನು ಗೌರವಿಸಿ, ಅವರ ಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಮೊದಲ ಆದ್ಯತೆ ಆಗಬೇಕು. ಆ ರೀತಿಯ ಸಮಾಜ ನಿರ್ಮಿಸುವ ಜವಾಬ್ದಾರಿಯನ್ನು ಮುಸ್ಲಿಮ್ ಒಕ್ಕೂಟ ವಹಿಸಿಕೊಳ್ಳಬೇಕು ಎಂದರು.

ಮುಖ್ಯ ಅತಿಥಿಯಾಗಿ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್‌ಮಾತನಾಡಿ, ಸಮುದಾಯದಲ್ಲಿನ ಒಗ್ಗಟ್ಟು ನಮ್ಮ ದೊಡ್ಡ ಶಕ್ತಿಯಾಗಿದೆ. ಪ್ರೀತಿಯ ಮೂಲಕ ಸಮಾಜವನ್ನು ಕಟ್ಟುವ ಕಾರ್ಯವನ್ನು ನಾವೆಲ್ಲ ಮಾಡಬೇಕಾಗಿದೆ. ಒಕ್ಕೂಟವು ಸಮುದಾಯದ ಏಕತೆಯೊಂದಿಗೆ ಇತರ ಸಮುದಾಯಗಳ ಜೊತೆ ಸೌಹಾರ್ದತೆ ಮೂಡಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟದ ಸಂಚಾಲಕ ಸುಹೇಲ್ ಅಹ್ಮದ್ ಮರೂರು ಮಾತನಾಡಿ, ಇಂದು ಸೌಹಾರ್ದ ಸಮಾಜ ಕಟ್ಟುವಲ್ಲಿ ಒಕ್ಕೂಟವು ಬಹಳ ದೊಡ್ಡ ಪಾತ್ರ ವಹಿಸಿದೆ. ಈ ವಿಚಾರದಲ್ಲಿ ಒಕ್ಕೂಟವು ಇಡೀ ಸಮಾಜಕ್ಕೆ ಮಾದರಿಯಾಗಿದೆ. ಸಮುದಾಯವನ್ನು ಒಗ್ಗೂಡಿಸುವಲ್ಲಿ ಒಕ್ಕೂಟದ ಶ್ರಮ ಅಪಾರ. ನಮ್ಮ ಭಾರತ ಜಾತ್ಯತೀತ, ಸೌಹಾರ್ದ ದೇಶವಾಗಿ ಉಳಿಯಬೇಕಾದರೆ ಇಂತಹ ನೂರಾರು ಒಕ್ಕೂಟಗಳು ಹುಟ್ಟಿ ಉತ್ತಮವಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದರು.

ಅಧ್ಯಕ್ಷತೆಯನ್ನು ವಹಿಸಿದ್ದ ಒಕ್ಕೂಟದ ಜಿಲ್ಲಾಧ್ಯಕ್ಷ ಮುಹಮ್ಮದ್ ಮೌಲಾ ಪ್ರಾಸ್ತಾವಿಕವಾಗಿ ಮಾತನಾಡಿ, ಒಕ್ಕೂಟದ ಸ್ವಂತ ಕಚೇರಿಯು ನಮ್ಮ ಸಮುದಾಯದ ಒಗ್ಗಟ್ಟು, ವಿಶ್ವಾಸ ಮತ್ತು ಭವಿಷ್ಯದ ಮೇಲಿನ ನಮ್ಮ ಬದ್ಧತೆಯ ಪ್ರತೀಕ ವಾಗಿದೆ. ಮುಂದೆ ಜಿಲ್ಲೆಯ ಪ್ರತಿಭಾವಂತ ಮತ್ತು ಆಸಕ್ತ ವಿದ್ಯಾರ್ಥಿಗಳಿಗೆ ಸಿವಿಲ್ ಸರ್ವಿಸ್ ಪರೀಕ್ಷೆಗಳ ತರಬೇತಿ ಹಾಗೂ ಕೋಚಿಂಗ್ ನೀಡುವ ಮಹತ್ವಾಕಾಂಕ್ಷಿ ಯೋಜನೆಯನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಯಾಸೀನ್ ಮಲ್ಪೆ ಸಮಾರೋಪ ಭಾಷಣ ಮಾಡಿ, ಕಾಂಗ್ರೆಸ್ ಸರಕಾರ ಅಧಿಕಾ ರಕ್ಕೆ ಬರುವ ಮೊದಲು ಸಮುದಾಯಕ್ಕೆ ನೀಡಿದ ಭರವಸೆಗಳನ್ನು ಈಡೇರಿಸಬೇಕು ಎಂಬುದು ನಮ್ಮ ಮುಖ್ಯವಾದ ಬೇಡಿಕೆಯಾಗಿದೆ. ಇದನ್ನು ಮುಂದಿನ ಚುನಾವಣೆ ಬರುವ ಮೊದಲು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಭಟ್ಕಳ ಮಜ್ಲಿಸ್ ಇ ಇಸ್ಲಾಹ್ ಓ ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಯುನಿವೆಫ್ ಕರ್ನಾಟಕ ಅಧ್ಯಕ್ಷ ರಫೀಯುದ್ದೀನ್ ಕುದ್ರೋಳಿ, ಸಹಬಾಳ್ವೆ ಕುಂದಾಪುರ ತಾಲೂಕು ಸಂಚಾಲಕ ರಾಮಕೃಷ್ಣ ಹೆರ್ಳೆ, ಒಕ್ಕೂಟದ ಮಾಜಿ ಅಧ್ಯಕ್ಷ ಎಂ.ಪಿ.ಮೊಯಿದಿನಬ್ಬ ಮಾತನಾಡಿದರು.

ಈ ಸಂದರ್ಭದಲ್ಲಿ ವಿಕೆ ಗ್ರೂಪ್ ಹಾಗೂ ಕಟ್ಟಡದ ಮಾಲಕ ಕರುಣಾಕರ ಎಂ.ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಒಕ್ಕೂಟದ ಗೌರವಾಧ್ಯಕ್ಷ ಹಾಜಿ ಅಬ್ದುಲ್ಲಾ ಪರ್ಕಳ, ಮಾಜಿ ಅಧ್ಯಕ್ಷರಾದ ಹಾಜಿ ಅಬ್ದುಲ್ಲಾ ನಾವುಂದ, ಅಶ್ಫಕ್ ಕಾರ್ಕಳ, ಇಬ್ರಾಹಿಂ ಕೋಟ, ಹಿರಿಯ ಉಪಾಧ್ಯಕ್ಷ ಮುಹಮ್ಮದ್ ರಫೀಕ್ ಬಿಎಸ್ ಎಫ್ ಉಪಸ್ಥಿತರಿದ್ದರು.

ಉಡುಪಿ ಜಾಮೀಯ ಮಸೀದಿಯ ಖತೀಬ್ ಮೌಲಾನಾ ಅಬ್ದುಲ್ ರಶೀದ್ ಉಮರಿ ಕುರಾನ್ ಪಠಿಸಿದರು. ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಮೌಲಾನಾ ಝಮೀರ್ ಅಹ್ಮದ್ ರಶಾದಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಹುಸೇನ್ ಕಟಪಾಡಿ ವಂದಿಸಿದರು. ಎಸ್.ಮುನೀರ್ ಕಂಡ್ಲೂರು ಹಾಗೂ ಜಿ.ಎಂ.ಶರೀಫ್ ಹೂಡೆ ಕಾರ್ಯಕ್ರಮ ನಿರೂಪಿಸಿದರು.

















Tags

BuildingharmonioussocietyMinister U.T. Khader
share
ವಾರ್ತಾಭಾರತಿ
ವಾರ್ತಾಭಾರತಿ
Next Story
X