Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಆದ್ಯತೆ:...

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಆದ್ಯತೆ: ಕೆ.ಜಯಪ್ರಕಾಶ್ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ7 Aug 2023 7:12 PM IST
share
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಆದ್ಯತೆ: ಕೆ.ಜಯಪ್ರಕಾಶ್ ಹೆಗ್ಡೆ

ಉಡುಪಿ, ಆ.7:ಮುಂದಿನ ಜನಾಂಗ ಆರೋಗ್ಯವಂತವಾಗಿರಲು ಹಾಗೂ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಗರ್ಭಿಣಿಯರು ಮತ್ತು 0-5 ವರ್ಷದೊಳಗಿನ ಮಕ್ಕಳಿಗೆ ಎಲ್ಲಾ ಅವಶ್ಯಕ ಲಸಿಕೆಗಳನ್ನು ನಿಗದಿತ ಅವಧಿಯೊಳಗೆ ತಪ್ಪದೇ ನೀಡುವ ಅಗತ್ಯವಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಸೋಮವಾರ ನಗರದ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಲಸಿಕೆ ಅಭಿ ಯಾನ ವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮಕ್ಕಳನ್ನು ಯಾವುದೇ ರೋಗಗಳು ಕಾಡದಂತೆ ಮತ್ತು ಆರೋಗ್ಯಯುತ ಬೆಳವಣಿಗೆ ಹೊಂದಲು ನಿಗದಿತ ಅವಧಿಯೊಳಗೆ ಅಗತ್ಯವಿರುವ ಎಲ್ಲಾ ಲಸಿಕೆಗಳನ್ನು ಕೊಡಿಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿಯಾಗಿದೆ. ಪೋಲಿಯೋ ನಿರ್ಮೂ ಲನೆ ರೀತಿಯಲ್ಲಿ ದಡಾರ ಹಾಗೂ ರೂಬೆಲ್ಲಾ ಸೇರಿದಂತೆ ಮಕ್ಕಳನ್ನು ಕಾಡುವ ಎಲ್ಲಾ ರೋಗಗಳನ್ನು ಸಂಪೂರ್ಣ ನಿರ್ಮೂಲನೆಗೊಳಿಸಬೇಕಿದೆ ಎಂದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯು ಆರೋಗ್ಯ ಕ್ಷೇತ್ರದಲ್ಲಿ ಗಮನಾರ್ಹ ಬೆಳವಣಿಗೆ ಹೊಂದಿದ್ದು, ಇಲ್ಲಿ ಉತ್ತಮ ವೈದ್ಯಕೀಯ ವ್ಯವಸ್ಥೆ, ವೈದ್ಯರು ಮತ್ತು ಶುಶ್ರೂಶಕ ಸಿಬ್ಬಂದಿಗಳಿದ್ದಾರೆ. ಯಾರೋ ಮಾಡಿದ ತಪ್ಪಿಗೆ ಜಿಲ್ಲೆಗೆ ಆಪಾದನೆಗಳು ಬರುತ್ತಿವೆ ಎಂದರು.

ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಮಾತನಾಡಿ, ಮಕ್ಕಳನ್ನು ಮತ್ತು ಗರ್ಭಿಣಿಯನ್ನು ಕಾಡುವ ಅನೇಕ ಕಾಯಿಲೆಗಳಿಗೆ ಮಿಷನ್ ಇಂದ್ರ ಧನುಷ್ ಅಭಿಯಾನದಲ್ಲಿ ನೀಡುವ ಲಸಿಕೆಗಳು ಪರಿಣಾಮಕಾರಿಯಾಗಲಿದ್ದು, ರೋಗ ನಿರೋಧಕ ಶಕ್ತಿ ಯನ್ನು ವೃದ್ಧಿಸಿ, ರೋಗಗಳು ಬಾರದಂತೆ ತಡೆಯಲಿವೆ. ಜಿಲ್ಲೆಯಲ್ಲಿ ಯಾವುದೇ ಅರ್ಹ ಗರ್ಭಿಣಿ ಮತ್ತು ಮಕ್ಕಳು ಈ ಲಸಿಕಾ ಅಭಿಯಾನದಿಂದ ವಂಚಿತರಾಗದಂತೆ ಎಲ್ಲರಿಗೂ ಲಸಿಕೆ ನೀಡಿ, ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವುದು ನಾಗರಿಕ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.

ಜಿಲ್ಲೆಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಕೆಲಸಗಳು ನಡೆಯುತ್ತಿವೆ. ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಇದನ್ನೂ ಇನ್ನೂ ಎತ್ತರಕ್ಕೆ ಕೊಂಡೊಯ್ಯಬೇಕಿದೆ ಎಂದರು.

ನಗರಸಭೆ ಸದಸ್ಯೆ ಮಾನಸ ಪೈ, ಜಿಲ್ಲಾ ಸರ್ಜನ್ ಡಾ.ಸುದೇಶ್ ಕುಮಾರ್, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಾಜಗೋಪಾಲ ಭಂಡಾರಿ ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಸ್ವಾಗತಿಸಿದರು. ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ಎಂ.ಜಿ. ರಾಮ ಕಾರ್ಯಕ್ರಮ ನಿರೂಪಿಸಿದರು. ರೋಟರಿ ಕ್ಲಬ್ ಅಧ್ಯಕ್ಷೆ ದೀಪಾ ಭಂಡಾರಿ ವಂದಿಸಿದರು.

3204 ಮಕ್ಕಳು, 708ಗರ್ಭಿಣಿಯರಿಗೆ ಲಸಿಕೆ ಗುರಿ

ಜಿಲ್ಲೆಯಲ್ಲಿ ಲಸಿಕೆ ವಂಚಿತ ಗರ್ಭಿಣಿಯರು ಮತ್ತು 0-5 ವರ್ಷದೊಳಗಿನ ಮಕ್ಕಳಿಗೆ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಲಸಿಕಾ ಕಾರ್ಯಕ್ರಮವನ್ನು, ಆಗಸ್ಟ್ 7ರಿಂದ 12 ಮೊದಲನೇ ಸುತ್ತು, ಸೆಪ್ಟಂಬರ್ 11ರಿಂದ 16ರವರೆಗೆ 2ನೇ ಸುತ್ತು ಹಾಗೂ ಅಕ್ಟೋಬರ್ 9ರಿಂದ 14ರವರೆಗೆ ಒಟ್ಟು 3 ಸುತ್ತುಗಳಲ್ಲಿ ಆಯೋಜಿಸಲಾಗುತ್ತಿದೆ.

ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯಂತೆ ವಯಸ್ಸಿಗನು ಗುಣವಾಗಿ ಲಸಿಕೆ ಪಡೆಯಲು ಅರ್ಹರಾದ ಮತ್ತು ಲಸಿಕೆ ವಂಚಿತರಾದ ಗರ್ಭಿಣಿ ಮತ್ತು ಮಕ್ಕಳಿಗೆ ಲಸಿಕಾ ಶಿಬಿರ ಆಯೋಜಿಸಿ ಲಸಿಕೆ ನೀಡಲಾ ಗುವುದು. ಈ ಕಾರ್ಯಕ್ರಮ ದಲ್ಲಿ ಜಿಲ್ಲೆಯ 708 ಗರ್ಭಿಣಿಯರು ಮತ್ತು 0-2 ವರ್ಷದೊಳಗಿನ ಲಸಿಕೆಗೆ ಅರ್ಹರಾದ 3188 ಮಕ್ಕಳಿಗೆ ಹಾಗೂ 2-5 ವರ್ಷದೊಳಗಿನ ಲಸಿಕೆ ವಂಚಿತ 16 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದ್ದು, ಇದಕ್ಕಾಗಿ 294 ಲಸಿಕಾ ಕೇಂದ್ರ ಗಳನ್ನು ಗುರುತಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X