ಕಂಬಕ್ಕೆ ಬುಲೆಟ್ ಢಿಕ್ಕಿ: ಸವಾರ ಮೃತ್ಯು

ಕಾಪು, ಜ.4: ಬುಲೆಟ್ ಬೈಕ್ ರಸ್ತೆ ಬದಿಯ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರೊಬ್ಬರು ಮೃತಪಟ್ಟ ಘಟನೆ ಕೋಟೆ ಗ್ರಾಮದ ತೌಡಬೆಟ್ಟುವಿನ ನಾಗಬನದ ಹತ್ತಿರ ಜ.3ರಂದು ರಾತ್ರಿ ವೇಳೆ ನಡೆದಿದೆ.
ಮೃತರನ್ನು ಸಂಜಯ್ ಮಾಂಝಿ ಎಂದು ಗುರುತಿಸಲಾಗಿದೆ. ಪಳ್ಳಿಗುಡ್ಡೆಯಿಂದ ಕಿನ್ನಿಗುಡ್ಡೆ ಕಡೆಗೆ ಹೋಗುತ್ತಿದ್ದ ಬುಲೆಟ್ ಬೈಕ್ ಎದುರನಿಂದ ಬರುತ್ತಿದ್ದ ಕಾರನ್ನು ತಪ್ಪಿಸಲು ಹೋಗಿ ರಸ್ತೆಯ ಬದಿಯಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಬೈಕ್ ಸವಾರ ಸಂಜಯ್ ಮಾಂಝಿ ತೀವ್ರ ಗಾಯಗೊಂಡರೆನ್ನಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಅವರು, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





