ಕಾರ್ಕಳ | ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರಿಗೆ ಗಾಯ

ಕಾರ್ಕಳ: ಬಸ್ಸೊಂದು ಚಾಲಕನ ಹತೋಟಿ ತಪ್ಪಿ ರಸ್ತೆಗೆ ಮಗುಚಿ ಬಿದ್ದ ಪರಿಣಾಮ ಹಲವು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ನ.19ರಂದು ರಾತ್ರಿ ಮಿಯ್ಯಾರ ಗ್ರಾಮದ ಮಿಯ್ಯಾರ್ ಗ್ಲೋರಿಯಸ್ ಆಯಿಲ್ ಮಿಲ್ಲ್ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕಾರ್ಕಳ ಕಡೆಯಿಂದ ಬಜಗೋಳಿ ಕಡೆಗೆ ಹೋಗುತ್ತಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿತ್ತೆನ್ನಲಾಗಿದೆ. ಇದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರಾದ ಭಾಗ್ಯ, ಭೂಮಿಕ, ರಾಜೇಶ್ ಜೈನ್, ಶ್ರೀಕಾಂತ್ ಹಾಗೂ ಇತರ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





