ಬೈಂದೂರು: ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು

ಬೈಂದೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾದ ಘಟನೆ ನಾವುಂದ ರಾಷ್ಟ್ರೀಯ ಹೆದ್ದಾರಿ-66 ಮೇಲ್ಸೇತುವೆಯಲ್ಲಿ ನಡೆದಿದೆ. ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ಕಾರಿನಲ್ಲಿದ್ದ ಇಬ್ಬರು ಪಾರಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಕಾರಿನೊಳಗೆ ಬೆಂಕಿ ಹೊತ್ತಿಕೊಂಡಿರಬಹುದೆಂದು ಅಂದಾಜಿಸಲಾಗಿದೆ.
ರಾ. ಹೆದ್ದಾರಿಯಲ್ಲಿ ಘಟನೆ ನಡೆದಿದ್ದರಿಂದ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು. ಸ್ಥಳಕ್ಕೆ ದೌಡಾಯಿಸಿದ ಬೈಂದೂರು ಅಗ್ನಿಶಾಮಕ ದಳದವರು ಸಂಪೂರ್ಣ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಅಗ್ನಿಶಾಮಕ ಅಧಿಕಾರಿ ರಾಜೇಶ್, ಪ್ರಮುಖ ಅಗ್ನಿಶಾಮಕರಾದ ಚೆನ್ನಯ್ಯ ಪೂಜಾರಿ, ಶೀನ ನಾಯ್ಕ, ಚಾಲಕರಾದ ಆನಂದ, ರಾಘವೇಂದ್ರ, ಅಗ್ನಿಶಾಮಕರಾದ ರವಿ, ಸುರೇಶ್, ಅರುಣ ಮೊದಲಾದವರಿದ್ದರು.
Next Story





